ಮಾಜಿ ಮುಖ್ಯಮಂತ್ರಿ ಅಜಿತ್ ಜೋಗಿ ನಿಧನ

ಛತ್ತೀಸ್ಘಡದ ಮಾಜಿ ಮುಖ್ಯಮಂತ್ರಿ ಅಜಿತ್‌ ಜೋಗಿ ಇಂದು ನಿಧನಾರಾಗಿದ್ದಾರೆ. ಮೇ 9 ರಂದು ಅವರು ಹೃದಯಾಘಾತಕ್ಕೆ ಒಳಗಾದ ನಂತರ ಅವರನ್ನು ಕೂಡಲೇ ಆಸ್ಪತ್ರೆ ದಾಖಲಿಸಲಾಗಿತ್ತು. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು  ಇದು ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.74 ವರ್ಷದ ಅಜಿತ್‌ ಜೋಗಿ ಛತ್ತೀಸ್ಘಡದ ಮೊದಲ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸಿದ್ದರು. ಇಂದು ಅವರಿಗೆ ಎರಡು ಬಾರಿ ಹೃದಯಾಘಾತವಾಗಿದ್ದು, ವೆಂಟಿಲೇಟರ್ ನೆರವಿನಿಂದ ಉಸಿರಾಟ ನಡೆಸಿದ್ದರು ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.ಈ ಮೊದಲೇ ಅಜಿತ್‌ ಜೋಗಿ ಅನಾರೋಗ್ಯಕ್ಕೊಳಗಾಗಿದ್ದು, ವಿಶ್ರಾಂತಿ ಪಡೆಯುತ್ತಿದ್ದರು. 1986ರಲ್ಲಿ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು. ಟ್ವೀಟ್ ಮೂಲಕ ದುಃಖದ ವಿಷಯವನ್ನು ಅವರ ಪುತ್ರ ಅಮಿತ್ ಜೋಗಿ ಅವರು ತಿಳಿಸಿದ್ದಾರೆ.. ಅಜಿತ್‌ ಜೋಗಿ ಅವರ ನಿಧನಕ್ಕೆ ರಾಜಕೀಯ ನಾಯಕರು ಸಂತಪ ಸೂಚಿಸಿದ್ದರೆ.

 

Please follow and like us:

Leave a Reply

Your email address will not be published. Required fields are marked *

Next Post

ಮಾಜಿ ಕೇಂದ್ರ ಸಚಿವ ವಿಧಿವಶ

Fri May 29 , 2020
ತಿರುವನಂತಪುರ: ಮಾಜಿ ಕೇಂದ್ರ ಸಚಿವ, ರಾಜ್ಯ ಸಭಾ ಸದಸ್ಯ, ಬರಹಗಾರ ವಿರೇಂದ್ರ ಕುಮಾರ್ ಗುರುವಾರ ರಾತ್ರಿ ನಿಧನರಾಗಿದ್ದಾರೆ. ಹೃದಯ ಸಂಬಂಧಿ ರೋಗದಿಂದ ಬಳಲುತ್ತಿದ್ದ 84 ವರ್ಷ ಪ್ರಾಯದ ವಿರೇಂದ್ರ ಕುಮಾರ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಸುದ್ದಿಸಂಸ್ಥೆಗಳಾದ ಪಿಟಿಐ ಮತ್ತು ಐಎನ್ ಎಸ್ ಗಳ ಅಧ್ಯಕ್ಷರು ಮತ್ತು ಮಾತೃಭೂಮಿ ಪತ್ರಿಕೆಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ಲೋಕತಾಂತ್ರಿಕ ಜನತಾದಳದ ಅಧ್ಯಕ್ಷರಾಗಿದ್ದ ವಿರೇಂದ್ರ ಕುಮಾರ್ ಅವರು ಅನಾರೋಗ್ಯದಿಂದ ಇತ್ತೀಚೆಗೆ ಸಕ್ರಿಯ ರಾಜಕಾರಣದಿಂದ ದೂರವಾಗಿದ್ದರು. Please follow […]

Advertisement

Wordpress Social Share Plugin powered by Ultimatelysocial