ಮೈಸೂರಿನಲ್ಲಿ ಲಾಕ್ ಡೌನ್ ಸಡಿಲಿಕೆ ಇಲ್ಲ.

ಕೊರೊನಾ ಸೋಂಕು ಪೀಡಿತರ ಸಂಖ್ಯೆ ಮೈಸೂರಿನಲ್ಲಿ ಹೆಚ್ಚಿರುವ ಹಿನ್ನೆಲೆ ರೆಡ್ ಝೋನ್ ಇದೆ , ಜಿಲ್ಲೆಯಲ್ಲಿ ಯಾವುದೇ ರೀತಿ ಸಡಿಲಿಕೆ ಇಲ್ಲ ಎಂದು ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಮೆಡಿಕಲ್ ಎಮರ್ಜೆನ್ಸಿಯಂತಹ ತುರ್ತು ಪರಿಸ್ಥಿತಿಗಳಿಗೆ ಮಾತ್ರ ಓಡಾಟಕ್ಕೆ ಅನುಮತಿ ಕೊಡಲಾಗಿದೆ. ಕೃಷಿ ಚಟುವಟಿಕೆಗೆ ಈಗಾಗಲೇ ಅನುಮತಿ ಕೊಡಲಾಗಿದೆ. ಉಳಿದಂತೆ ಈ ಹಿಂದಿನ ಕ್ರಮವೇ ಮುಂದುವರಿಯುತ್ತದೆ. ಐಟಿ-ಬಿಟಿಗೆ ಅಗತ್ಯವಿರುವಷ್ಟು ಮಾತ್ರ ಅನುಮತಿ ಕೊಡಲಾಗಿದೆ, ಪರಿಸ್ಥಿತಿ ನೋಡಿ ಮುಂದಿನ ಕ್ರಮ ತೆಗೆದುಕೊಳ್ಳಲಾಗುತ್ತದೆ. ಕಟ್ಟಡ ಕಾಮಗಾರಿಗಳಿಗೆ ಸಂಬಂಧಪಟ್ಟಂತೆ ಕಟ್ಟಡ ಕಾರ್ಮಿಕರು ಮೈಸೂರು ಜಿಲ್ಲೆಯವರಾಗಿದ್ದು, ಇಲ್ಲೇ ಇದ್ದರೆ ಮಾತ್ರ ಕೆಲಸ ಮಾಡಬಹುದು. ಹೊರ ಜಿಲ್ಲೆ ಇಲ್ಲವೇ ರಾಜ್ಯಗಳಿಂದ ಈ ಸಂದರ್ಭದಲ್ಲಿ ಇಲ್ಲಿಗೆ ಬಂದು ಕೆಲಸ ಮಾಡಲು ಅನುಮತಿ ಇಲ್ಲ. ಕಬ್ಬಿಣ ಹಾರ್ಡ್‌ವೇರ್ ಅಂಗಡಿಗಳು ತೆರೆಯುವಂತಿಲ್ಲ. ಪ್ಲಂಬರ್ ಎಲೆಕ್ಟ್ರಿಕ್ ಕೆಲಸಗಳಿಗೆ ಪೊಲೀಸ್ ಅನುಮತಿ ಅವಶ್ಯಕ. ಉಳಿದ ವಿಷಯಗಳಿಗೆ ಮೇ 3ನೇ ತಾರೀಖಿನವರೆಗೆ ಯಾವುದೇ ಕಾರಣಕ್ಕೂ ಅನುಮತಿ ಇಲ್ಲ. ಈ ಬಗ್ಗೆ ಪರಿಶೀಲನೆ ನಡೆಸಿ ಮುಂದೆ ಏನು ಮಾಡಬಹುದು ಎಂದು ತೀರ್ಮಾನ ಮಾಡಲಾಗುವುದು ಎಂದು  ಹೇಳಿದರು.

Please follow and like us:

Leave a Reply

Your email address will not be published. Required fields are marked *

Next Post

ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್

Thu Apr 23 , 2020
ನವದೆಹಲಿ : ಕೊರೊನಾದಿಂದ ತತ್ತರಿಸಿದ ಜನತೆಗೆ ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯ ಫಲಾನುಭವಿಗಳಿಗೆ ಸಿಹಿಸುದ್ದಿಯನ್ನು ನೀಡಿದೆ. ಈ ಯೋಜನೆಯಡಿ ೩೧,೨೩೫ ಕೋಟಿ ರೂಪಾಯಿಯನ್ನು ಸುಮಾರು ೩೩ ಕೋಟಿ ಬಡವರ ಖಾತೆಗೆ ಜಮೆಮಾಡಲಾಗಿದೆ. ಈ ಕುರಿತಂತೆ ಕೇಂದ್ರದ ಹಣಕಾಸು ಇಲಾಖೆ ಮಾಹಿತಿ ನೀಡಿದ್ದು,ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯಡಿ ನೀಡಲಾಗಿರುವ ೩೧,೨೩೫ ಕೋಟಿ ರೂಪಾಯಿ ಪ್ಯಾಕೇಜ್ ಪೈಕಿ ೨೦.೦೫ ಕೋಟಿ ಜನಧನ್ ಮಹಿಳಾ ಖಾತೆದಾರರಿಗೆ ೧೦ ಸಾವಿರದ ೦೨೫ ಕೋಟಿ […]

Advertisement

Wordpress Social Share Plugin powered by Ultimatelysocial