ಹದಿನಾಲ್ಕು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಘೋಷಿಸಿರುವ ಪ್ರಧಾನಿಗಳು, ಇದರಿಂದ ರೈತರ ಬೆಳೆಗೆ ದುಪ್ಪಟ್ಟು ಬೆಲೆ ಸಿಗಲಿದೆ ಎಂದು ಹೇಳಿಕೊಳ್ಳುತ್ತಿರುವುದು ಅಮಾಯಕ ರೈತರ ಹಾದಿ ತಪ್ಪಿಸುವ ಕುತಂತ್ರ ಎಂದು ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು,” ರೈತರ ಬೆಳೆಯ ಉತ್ಪಾದನಾ ವೆಚ್ಚಕ್ಕೆ ಶೇಕಡಾ ೫೦ರಷ್ಟು ಲಾಭವನ್ನು ಸೇರಿಸಿ ಕನಿಷ್ಠ ಬೆಂಬಲ ಬೆಲೆ ನೀಡುತ್ತೇವೆ ಎಂಬುದು ನರೇಂದ್ರ ಮೋದಿ ಅವರ ಘೋಷಣೆಯಾಗಿತ್ತು. ಆದರೆ, ಉತ್ಪಾದನಾ ವೆಚ್ಚದ ಲೆಕ್ಕದಲ್ಲಿಯೇ ಪ್ರಧಾನಿಗಳು ರೈತರಿಗೆ ಮೋಸ ಮಾಡಿದ್ದಾರೆ,” ಎಂದು ಕಿಡಿಕಾರಿದರು. “ಕೃಷಿ ತಜ್ಞ ಎಂ.ಎಸ್ ಸ್ವಾಮಿನಾಥನ್ ವರದಿಯ ಪ್ರಕಾರ ‘ಅ-೨ ಉತ್ಪಾದನಾ ವೆಚ್ಚ’ ಎಂದರೆ ಬೀಜ, ಗೊಬ್ಬರ ಮತ್ತು ಹೂಡಿದ ಬಂಡವಾಳದ ಮೇಲಿನ ಬಡ್ಡಿ ಮತ್ತು ರೈತ ಕುಟುಂಬದ ಕೂಲಿಯನ್ನೂ ಪರಿಗಣಿಸಬೇಕಾಗುತ್ತದೆ. ಕೇಂದ್ರ ರ‍್ಕಾರ ಅ-೨ ಸೂತ್ರ ಪಾಲಿಸಿದೆಯೇ?,” ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದರು.
ಮೋದಿಗೆ ರೈತರ ಕಷ್ಟ ಕಾಣುತ್ತಿಲ್ಲವೆ..!/ ಪಿಎಂ ವಿರುದ್ಧ ಸಿದ್ದರಾಮಯ್ಯ ಗರಂ

Please follow and like us: