ಬೆಳಗಾವಿ : ರಾಜ್ಯ ಸರ್ಕಾರವು ಜೂನ್ 8 ರಿಂದ ದೇವಾಲಯಗಳನ್ನು ತೆರೆಯಲು ಅನುಮತಿ ನೀಡಿದೆ. ಆದರೆ ಉತ್ತರ ಕರ್ನಾಟಕದ ಬೆಳಗಾವಿಯ ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮ ದೇವಿ ದೇವಸ್ಥಾನ ಸದ್ಯಕ್ಕೆ ತೆರೆಯಲಾಗುವುದಿಲ್ಲ ಎಂದು ದೇವಸ್ಥಾನದ ಸಿಇಒ ರವಿ ಕೋಟಾರಗಸ್ತಿ ಮಾಹಿತಿ ನೀಡಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅವರು, ಜೂನ್ 30 ರವರೆಗೂ ಸಾರ್ವಜನಿಕರಿಗೆ ಯಲ್ಲಮ್ಮ ದೇವಸ್ಥಾನ ಪ್ರವೇಶಕ್ಕೆ ಅವಕಾಶವಿಲ್ಲ. ದೇವಸ್ಥಾನಕ್ಕೆ ಮಹಾರಾಷ್ಟ್ರ ಸೇರಿದಂತೆ ಅನ್ಯ ರಾಜ್ಯದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಭಕ್ತರ ಸುರಕ್ಷತೆ ದೃಷ್ಟಿಯಿಂದ ದೇವಸ್ಥಾನ ಓಪನ್ ಮಾಡದಿರಲು ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಯಲ್ಲಮ್ಮ ದೇವಿ ಭಕ್ತಾಧಿಗಳಿಗೆ ಮಹತ್ವದ ಸುದ್ದಿ

Please follow and like us: