ಉಭಯ ದೇಶಗಳ ನಡುವೆ ಉದ್ಭವಿಸಿರುವ ಬಿಕ್ಕಟ್ಟು ಪರಿಹರಿಸಲು ಮಧ್ಯಸ್ಥಿಕೆ ವಹಿಸಲು ಸಿದ್ಧ ಎಂದು ಇತ್ತೀಚೆಗಷ್ಟೇ ಅಮೆರಿಕ ಅಧ್ಯಕ್ಷ ಟ್ರಂಪ್ ಹೇಳಿದ್ದರು. ಈ ವಿಷಯಕ್ಕೆ ಸಂಭಂದಿಸಿದಂತೆ ಭಾರತ- ಚೀನ ನಡುವಿನ ಲಡಾಖ್ ಗಡಿಯ ಬಿಕ್ಕಟ್ಟು ಶಮನಕ್ಕೆ ರಾಜತಾಂತ್ರಿಕ, ಮಿಲಿಟರಿ ಮಟ್ಟದಲ್ಲಿ ಪರಿಹಾರ ಕಂಡುಕೊಳ್ಳಲಾಗುತ್ತಿದೆ. ಭಾರತದ ಈ ವಿಚಾರದಲ್ಲಿ ಬೇರಾವುದೇ ದೇಶ ಮಧ್ಯ ಪ್ರವೇಶಿಸುವ ಅಗತ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಹಾಗೆಯೇ ನಾನು ಅಮೆರಿಕ ಅಧ್ಯಕ್ಷರ ಹೇಳಿಕೆಗೆ ಪ್ರತಿಕ್ರಿಯಿಸುವುದಿಲ್ಲ. ಇದೀಗ ಭಾರತದ ಅಂತಾರಾಷ್ಟ್ರೀಯ ಗಡಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಅತ್ಯಂತ ಸುರಕ್ಷಿತವಾಗಿದೆ ಎಂದು ಭರವಸೆ ನೀಡಲು ಬಯಸುತ್ತೇನೆ’ ಎಂದು ಹೇಳಿದ್ದಾರೆ.
ಯಾರ ಮಧ್ಯಸ್ಥಿಕೆಯು ಬೇಡ ಎಂದ ಶಾ

Please follow and like us: