ರಕ್ಷಣಾ ಸಾಮಗ್ರಿಗಳ ರಫ್ತು ಪ್ರಮಾಣದಲ್ಲಿ ಹೆಚ್ಚಳ

ಭಾರತ ವಿಶ್ವದ ಅತಿದೊಡ್ಡ ರಕ್ಷಣಾ ಸಾಮಗ್ರಿಗಳ ಆಮದು ರಾಷ್ಟ್ರ ಎಂದೇ ಹೇಳಲಾಗುತ್ತದೆ. ಆದರೆ, ರಕ್ಷಣಾ ಸಾಮಗ್ರಿಗಳ ರಫ್ತು ವಲಯದಲ್ಲೂ ಈಗ ನಿಧಾನವಾಗಿ ತನ್ನ ಅಸ್ತಿತ್ವ ಕಂಡುಕೊಳ್ಳಲಾರಂಭಿಸಿದೆ. ರಕ್ಷಣಾ ಸಚಿವಾಲಯದ ರಕ್ಷಣಾ ಸಾಮಗ್ರಿಗಳ ಉತ್ಪಾದನಾ ವಿಭಾಗದ ಪ್ರಕಾರ, ಕಳೆದ ೪ ವರ್ಷಗಳಲ್ಲಿ ಭಾರತದ ರಕ್ಷಣಾ ಸಾಮಗ್ರಿಗಳ ರಫ್ತು ೫ ಪಟ್ಟು ಹೆಚ್ಚಳವಾಗಿದೆ. ಅಂದರೆ ೨೦೧೬-೧೭ನೇ ಸಾಲಿನಲ್ಲಿದ್ದ ೧,೫೨೧.೮೬ ಕೋಟಿ ರೂ. ರಫ್ತು ೨೦೧೯-೨೦ನೇ ಸಾಲಿಗೆ ೮,೬೨೦.೫೯ ಕೋಟಿ ರೂ.ಗೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ೨೦೨೦-೨೧ನೇ ಸಾಲಿನಲ್ಲಿ ರಫ್ತು ಪ್ರಮಾಣವನ್ನು ೧೫ ಸಾವಿರ ಕೋಟಿ ರೂ.ಗೆ ಹೆಚ್ಚಿಸುವ ಗುರಿ ನಿಗದಿಪಡಿಸಿಕೊಳ್ಳಲಾಗಿದೆ.

Please follow and like us:

Leave a Reply

Your email address will not be published. Required fields are marked *

Next Post

ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ

Tue Apr 21 , 2020
ಮೈಸೂರು : ಎನ್.ಆರ್.ಠಾಣಾ ವ್ಯಾಪ್ತಿಯ ಆಲೀಂನಗರದಲ್ಲಿ ಆಶಾ ಕಾರ್ಯಕರ್ತೆಯ ಮೇಲೆ ನಡೆದ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಲೀಂನಗರದಲ್ಲಿ ಆಶಾಕಾರ್ಯಕರ್ತೆ ಸುಮಯಾ ಫಿರ್ದೋಸಾ ಅವರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಧಮ್ಕಿ ಹಾಕಿ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುಬೇಕು. ಧಮ್ಕಿ ಹಾಕಿದವರನ್ನು ಬಂಧಿಸಿ ಜೈಲಿಗೆ ಕಳುಹಿಸುತ್ತೇವೆ. ಸುಗ್ರೀವಾಜ್ಞೆ ಜಾರಿಯಾದ ಬಳಿಕ ಆರೋಪಿಗಳಿಗೆ ಶಿಕ್ಷೆ […]

Advertisement

Wordpress Social Share Plugin powered by Ultimatelysocial