ರಾಜ್ಯದಲ್ಲಿ ಕೊರೊನಾ ರೋಗಿಗಳಿಗೆ ಪ್ಲಾಸ್ಮಾ ಥೆರಪಿ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿನ ರೋಗಿಗಳಿಗೆ ಪ್ಲಾಸ್ಮಾ ಥೆರಪಿಗೆ ಕೇಂದ್ರ ಸರ್ಕಾರದಿಂದ ಅನುಮತಿ ಸಿಕ್ಕಿದ್ದು, ನಾಳೆ ಮೊದಲ ರೋಗಿಗೆ ಪ್ಲಾಸ್ಮಾ ಥೆರಪಿ ನಡೆಸಲಾಗುತ್ತದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ.
ಈ ಕುರಿತಂತೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಡಾ.ಕೆ.ಸುಧಾಕರ್, ಕೇಂದ್ರ ರ‍್ಕಾರದಿಂದ ರಾಜ್ಯದಲ್ಲಿ ಪ್ಲಾಸ್ಮಾ ಥೆರಪಿಗೆ ಅನುಮತಿ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನಾಳೆ ಮೊದಲ ರೋಗಿಗೆ ಬೆಂಗಳೂರಿನ ಮೆಡಿಕಲ್ ಕಾಲೇಜಿನಲ್ಲಿ ಪ್ಲಾಸ್ಮಾ ಥೆರಪಿ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಈಗಾಗಲೇ ದೇಶದಲ್ಲಿ ಕೇರಳ, ದೆಹಲಿ ಸೇರಿದಂತೆ ಇತರೆಡೆ ಪ್ಲಾಸ್ಮಾ ಥೆರಪಿಗೆ ಕೇಂದ್ರ   ಸರ್ಕಾರದಿಂದ ಅನುಮತಿ ನೀಡಿದ್ದು, ಈ ಪ್ರಯತ್ನದಲ್ಲಿ ರೋಗಿಗಳು ಗುಣಮುಖರಾಗಿದ್ದಾರೆ

Please follow and like us:

Leave a Reply

Your email address will not be published. Required fields are marked *

Next Post

ಮಹಾರಾಷ್ಟ್ರದಲ್ಲಿ ಒಂದೇ ದಿನಕ್ಕೆ ೭೭೮ ಮಂದಿಯಲ್ಲಿ ಸೋಂಕು

Fri Apr 24 , 2020
ಮುಂಬೈ : ದೇಶಾದ್ಯಂತ ಮಾರಕ ಕೊರೊನಾ ಸೋಂಕು ತಲ್ಲಣ ಸೃಷ್ಟಿಸಿದ್ದು, ಜನತೆ ಆತಂಕಗೊಂಡಿದ್ದಾರೆ. ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ ೨೩ ಸಾವಿರ ಗಡಿದಾಟಿದೆ. ಸೋಂಕಿತರ ಸಂಖ್ಯೆಯಲ್ಲಿ ದೇಶದಲ್ಲೇ ಪ್ರಥಮ ಸ್ಥಾನದಲ್ಲಿರುವ ಮಹಾರಾಷ್ಟ್ರದಲ್ಲಿ ೨೪ ಗಂಟೆಯಲ್ಲಿ ೭೭೮ ಮಂದಿಯಲ್ಲಿ ಮಾರಕ ಸೋಂಕು ದೃಢಪಟ್ಟಿದ್ದು, ಇನ್ನಷ್ಟು ಭೀತಿ ಎದುರಾಗಿದೆ. ಮಹಾರಾಷ್ಟ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಕಳೆದ ೨೪ ಗಂಟೆಯಲ್ಲಿ ೭೭೮ ಮಂದಿಯಲ್ಲಿ ಮಾರಕ ಸೋಂಕು ಪಾಸಿಟಿವ್ ಬಂದಿದೆ. ಇನ್ನು ೧೪ ಮಂದಿ ಕಿಲ್ಲರ್ […]

Advertisement

Wordpress Social Share Plugin powered by Ultimatelysocial