ಚಾಮರಾಜನಗರ: ದೇಶದಲ್ಲಿ ಕೊರೊನಾ ಆರ್ಭಟ ಹೆಚ್ಚಾಗಿದೆ. ಸುತ್ತಲೂ ರೆಡ್ ಝೋನ್ ಗಳಿರುವ ಪ್ರದೇಶಗಳಿಂದ ಸುತ್ತುವರೆದ ಚಾಮರಾಜನಗರ ಜಿಲ್ಲೆ ರಾಜ್ಯದ ಕೊರೊನಾ ಮುಕ್ತ ಜಿಲ್ಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಗಡಿಗಳನ್ನು ಹೊಂದಿಕೊಂಡಿರುವ ಗಡಿ ಜಿಲ್ಲೆಯಾದರೂ ಕಳೆದ ೬೦ ದಿನಗಳಲ್ಲಿ ಒಂದೂ ಪ್ರಕರಣ ದಾಖಲಾಗದೇ ಹಸಿರು ವಲಯದಲ್ಲೇ ರಾಜ್ಯಕ್ಕೆ ಮಾದರಿಯಾಗಿದೆ. ಇಲ್ಲಿಯವರೆಗೆ ಕೊರೊನಾ ಕಾಣಿಸಿಕೊಳ್ಳದ ಚಾಮರಾಜನಗರ ಮಾತ್ರ ಜಿಲ್ಲೆಗೆ ಕೊರೊನಾ ಸೋಂಕು ತಗುಲದಂತೆ ಕಾಪಾಡುವುದು ದೊಡ್ಡ ಸವಾಲಾಗಿದೆ ಇದಕ್ಕೆ ಜಿಲ್ಲೆಯ ಜನತೆಯ ಸಹಕಾರ ಮತ್ತು ಜಿಲ್ಲಾಡಳಿತದ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವ ಮೂಲಕ ಇಲ್ಲಿಯವರೆಗೂ ಕೊರೊನಾ ವಕ್ಕರಿಸದಂತೆ ನೋಡಿಕೊಂಡಿದ್ದಾರೆ.
ರಾಜ್ಯದ ಈ ಜಿಲ್ಲೆಗೆ ಕೊರೋನಾ ಮುಕ್ತ ಜಿಲ್ಲೆ ಎಂಬ ಹೆಗ್ಗಳಿಕೆ…!

Please follow and like us: