ದೊಡ್ಡಬಳ್ಳಾಪುರ : ಎಪಿಎಂಸಿ ಕಾಯ್ದೆ ತಿದ್ದುಪಡಿ ಸುಗ್ರೀವಾಜ್ಞೆ, ಕಾರ್ಮಿಕ ಕಾಯ್ದೆ ತಿದ್ದುಪಡಿ ಹಾಗೂ ಗ್ರಾಮ ಪಂಚಾಯಿತಿಗಳಿಗೆ ಆಡಳಿತ ಸಮಿತಿ ನೇಮಕ ಮಾಡುತ್ತಿರುವ ಸರ್ಕಾರದ ಕ್ರಮಗಳನ್ನು ವಿರೋಧಿಸಿ ಹಾಗೂ ಮಾತೃಪೂರ್ಣ ಯೋಜನೆಯನ್ನು ಪುನರಾರಂಭಿಸಬೇಕೆಂದು ಒತ್ತಾಯಿಸಿ ಕಾಂಗ್ರೆಸ್ ತಾಲೂಕು ಸಮಿತಿ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ತಹಸೀಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಎಪಿಎಂಸಿ ಹಾಗೂ ಟಿಎಪಿಎಂಸಿ ನಿರ್ದೇಶಕ ನಾರನಹಳ್ಳಿ ಎಂ.ಗೋವಿಂದರಾಜು ಮಾತನಾಡಿ, ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೆ ತರುತ್ತಿರುವ ಎಪಿಎಂಸಿ ಕಾಯ್ದೆ ತಿದ್ದುಪಡಿಗೆ ಕಾಂಗ್ರೆಸ್ನ ವಿರೋಧವಿದೆ. ಕಾಯ್ದೆಯಲ್ಲಿ ರೈತರ ಹಿತಕ್ಕೆ ಮಾರಕವಾಗಿರುವ ಅಂಶಗಳಿದ್ದು, ಬಹುರಾಷ್ಟ್ರೀಯ ಕಂಪನಿಗಳಿಗೆ ಅನುಕೂಲವಾಗಲಿದೆ. ಪಿಎಂಸಿಯ ಸಮಸ್ಯೆಗಳನ್ನು ಬಗೆಹರಿಸಿ ಆಧುನೀಕರಣ ಮಾಡಿ ಸಮಸ್ಯೆಗಳನ್ನು ಬಗೆಹರಿಸಿ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

Please follow and like us: