ರಾಷ್ಟ್ರಪತಿ ಭವನಕ್ಕೂ ಹಬ್ಬಿದ ಕೊರೊನಾ ಸೋಂಕು

ನವದೆಹಲಿ: ನವದೆಹಲಿಯಲ್ಲಿರುವ ರಾಷ್ಟ್ರಪತಿ ಭವನದ ೧೦೦ಕ್ಕೂ ಅಧಿಕ ಸಿಬ್ಬಂದಿಗಳಿಗೆ ಕ್ವಾರಂಟೈನ್‌ನಲ್ಲಿರಲು ಸೂಚನೆ ನೀಡಲಾಗಿದೆ. ನಾಲ್ಕು ದಿನಗಳ ಹಿಂದೆ ಇಲ್ಲಿನ ಸಿಬ್ಬಂದಿಯೊಬ್ಬರಿಗೆ ಕೊರೊನಾ ಸೋಂಕು ತಗುಲಿರುವುದು ಖಚಿತವಾಗಿದೆ. ರಾಷ್ಟ್ರಪತಿ ಭವನದ ಸ್ವಚ್ಛತೆಯ ಕಾರ್ಯ ನಿರ್ವಹಣೆ ಮಾಡುವ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದೆ. ಇದರಿಂದಾಗಿ ಸ್ವಚ್ಛತೆಯ ಕೆಲಸ ಮಾಡುತ್ತಿದ್ದ ಎಲ್ಲರಿಗೂ ಕೇಂದ್ರ ದೆಹಲಿಯ ಪ್ರದೇಶದಲ್ಲಿ ಕ್ವಾರಂಟೈನ್‌ಗೆ ವ್ಯವಸ್ಥೆ ಮಾಡಲಾಗಿದೆ. ಕಾರ್ಯದರ್ಶಿ ಹಂತದ ಅಧಿಕಾರಿಗಳು, ಅವರ ಕುಟುಂಬ ಸದಸ್ಯರಿಗೆ ಹೋಂ ಕ್ವಾರಂಟೈನ್‌ನಲ್ಲಿರಲು ಸೂಚನೆ ನೀಡಲಾಗಿದೆ. ಒಬ್ಬ ಸಿಬ್ಬಂದಿ ಹೊರತುಪಡಿಸಿ ಉಳಿದವರಿಗೆ ಕೊರೊನಾ ಸೋಂಕು ತಗುಲಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಸ್ವಚ್ಛತೆಯ ಕೆಲಸ ಮಾಡುತ್ತಿದ್ದ ಸಿಬ್ಬಂದಿ ವಾಸ ಮಾಡುತ್ತಿದ್ದ ಅಕ್ಕ-ಪಕ್ಕದ ಮನೆಯ ೨೫ ಸದಸ್ಯರಿಗೆ ಕ್ವಾರಂಟೈನ್‌ನಲ್ಲಿರಲು ಸೂಚನೆ ನೀಡಲಾಗಿದೆ. ಭವನದಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಕಟ್ಟು ನಿಟ್ಟಿನ ಸೂಚನೆ ಕೊಡಲಾಗಿದೆ. ರಾಷ್ಟ್ರಪತಿಗಳ ಕಾರ್ಯದರ್ಶಿ, ಹೆಚ್ಚುವರಿ ಕಾರ್ಯದರ್ಶಿಗಳಿಂದ ಹಿಡಿದು ಭದ್ರತೆ, ಸ್ವಚ್ಛತಾ ಸಿಬ್ಬಂದಿ ತನಕ ಹಲವಾರು ಸಿಬ್ಬಂದಿಗಳು ರಾಷ್ಟ್ರಪತಿ ಭವನದಲ್ಲಿ ಪ್ರತಿನಿತ್ಯ ಕಾರ್ಯ ನಿರ್ವಹಣೆ ಮಾಡುತ್ತಾರೆ. ಕೊರೊನಾ ಸೋಂಕು ಪತ್ತೆಯಾದ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕೈಗೊಳ್ಳಲಾಗಿದೆ.

Please follow and like us:

Leave a Reply

Your email address will not be published. Required fields are marked *

Next Post

ಶಾಸಕ ಬಿ. ನಾಗೇಂದ್ರ  ದೇಣಿಗೆ 

Tue Apr 21 , 2020
ದೇಶದಾದ್ಯಂತ ಕೋವಿಡ್ 19 ನಿಂದ ಜನತೆ ತುಂಬಾ ಸಂಕಷ್ಟಕ್ಕೆ ಸಿಲುಕಿದ್ದು  ನಮ್ಮ ರಾಜ್ಯದಲ್ಲೂ ಕೂಡ ಬಡವರಿಗೆ ಜೀವನಕ್ಕೆ ಅಗತ್ಯ ವಸ್ತುಗಳನ್ನು ಕೊಳ್ಳಲು ಕಷ್ಟವಾದ ಹಿನ್ನೆಲೆ  ಕಾಂಗ್ರೆಸ್ ಪಕ್ಷದ ಕೆಪಿಸಿಸಿ ಅಧ್ಯಕ್ಷರು ಡಿ ಕೆ ಶಿವಕುಮಾರ್ ಅವರ ಆದೇಶದಂತೆ ಮೇರೆಗೆ   ಪರಿಹಾರ ನಿಧಿ ಸ್ಥಾಪಿಸಿದ್ದು ಪಕ್ಷದ ಶಾಸಕರೆಲ್ಲ ತಮ್ಮ ದೇಣಿಗೆಯನ್ನು ನೀಡಿದ್ದು ಅದೇ ರೀತಿ ಗಣಿನಾಡು ಬಳ್ಳಾರಿ ಜಿಲ್ಲೆಯ ಗ್ರಾಮಾಂತರ ಕ್ಷೇತ್ರದ ಶಾಸಕ ಬಿ. ನಾಗೇಂದ್ರ ರವರು ಇಂದು ಬಳ್ಳಾರಿ ನಗರದಲ್ಲಿ […]

Advertisement

Wordpress Social Share Plugin powered by Ultimatelysocial