ಬೆಂಗಳೂರು : ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆ ಜೊತೆಗೆ ರಾಜ್ಯ ಸರ್ಕಾರದ ಹಲವಾರು ಪ್ಯಾಕೇಜ್ ಸೇರಿದಂತೆ ಇನ್ನಿತ್ತರ ಪ್ರಯೋಜಗಳನ್ನು ಪಡೆದುಕೊಳ್ಳುವ ಸಲುವಾಗಿ ಕೂಡಲೇ ರೈತರು ತಮ್ಮ ಬ್ಯಾಂಕ್ ಖಾತೆಗಳಿಗೆ ಆಧಾರ್ ಕಾರ್ಡ್ ಅನ್ನು ಲಿಂಕ್ ಮಾಡುವಂತೆ ಸಚಿವ ಬಿ.ಸಿ ಪಾಟೀಲ್ ಅವರು ಮನವಿ ಮಾಡಿದ್ದಾರೆ. ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡದ ರೈತರು ಶೀಘ್ರ ಜೋಡಣೆ ಮಾಡಲು ಸಚಿವರು ಮನವಿ ಮಾಡಿದ್ದಾರೆ. ಮೆಕ್ಕೆಜೋಳ ಹಾಗೂ ಹೂವು ಬೆಳೆದ ಹತ್ತು ಲಕ್ಷ ರೈತರಿಗೆ ತಲಾ ಐದು ಸಾವಿರ ರೂ ನಂತೆ ಪರಿಹಾರ ಧನದ ಮೊದಲ ಕಂತು ಬಿಡುಗಡೆ ಮಾಡಲಾಗಿದೆ. ಆನ್ ಲೈನ್ ಮೂಲಕ ಪರಿಹಾರ ವರ್ಗಾವಣೆಯಾಗುತ್ತಿದೆ. ಸೌಲಭ್ಯ ಪಡೆಯಲು ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆ ಜೋಡಣೆ ಮಾಡಬೇಕು ಹೀಗಾಗಿ ಕೂಡಲೇ ರೈತರಿ ಮ್ಮ ಬ್ಯಾಂಕ್ ಖಾತೆ ಸಂಖ್ಯೆಯನ್ನು ಆಧಾರ್ ಸಂಖ್ಯೆಗೆ ಜೋಡಣೆ ಮಾಡಿದರೆ ಹಣವನ್ನು ಪಡೆದುಕೊಳ್ಳಬಹುದು ಎಂದು ಹೇಳಿದರು.
ರೈತರು ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಲು ಸೂಚನೆ

Please follow and like us: