ಬೆಂಗಳೂರು: ತಮ್ಮ ವೈಯಕ್ತಿಕ ಖಾತೆಗೆ ಆಧಾರ್ ಲಿಂಕ್ ಮಾಡದ ಪರಿಣಾಮ ರೈತರಿಗೆ ಸಿಗಬೇಕಾಗಿರುವ ಪರಿಹಾರದ ಹಣ ಏರ್‌ಟೇಲ್ ಖಾತೆಗೆ ಜಮೆ ಆಗುವ ಮೂಲಕ ಗೊಂದಲ ಸೃಷ್ಟಿಯಾಗಿದೆ. ಈ ಕುರಿತಾಗಿ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಕೃಷಿ ಸಚಿವ ಬಿ.ಸಿ ಪಾಟೀಲ್ ಕೂಡಲೇ ರೈತರು ತಪ್ಪದೇ ಆಧಾರ್ ಸಂಖ್ಯೆಗೆ ಬ್ಯಾಂಕ್ ಅಕೌಂಟನ್ನು ಜೋಡಣೆ ಮಾಡಿ ಎಂದು ಮನವಿ ಮಾಡಿಕೊಂಡರು.ಸರ್ಕಾರ ರೈತರಿಗೆ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಸೇರಿದಂತೆ ರಾಜ್ಯದ ವಿವಿಧ ಯೋಜನೆಯಡಿ ಡಿಬಿಟಿ ಮಾರ್ಗಸೂಚಿಯಂತೆ ವಿದ್ಯುನ್ಮಾನವಾಗಿ ನೇರವಾಗಿ ರೈತರ ಖಾತೆಗೆ ಆಧಾರ್ ಆಧಾರಿತ ವ್ಯವಸ್ಥೆಯ ಮೂಲಕ ವರ್ಗಾಯಿಸಲಾಗುತ್ತಿದೆ. ಬಹುತೇಕ ರೈತರು ತಮ್ಮ ಆಧಾರ್ ಕಾರ್ಡನ್ನು ಅಕೌಂಟ್ ನಂಬರ್‌ಗೆ ಲಿಂಕ್ ಮಾಡಿಲ್ಲ. ರೈತರು ತಮ್ಮ ತಮ್ಮ ಆಧಾರ್ ಕಾರ್ಡನ್ನು ತಾವು ಉಪಯೋಗಿಸುತ್ತಿರುವ ಬ್ಯಾಂಕ್ ಖಾತೆಗೆ ಕಡ್ಡಾಯವಾಗಿ ಜೋಡಣೆ ಮಾಡಬೇಕು ಎಂದು ಮನವಿ ಮಾಡಿದರು. ಮೆಕ್ಕೆಜೋಳ ಹಾಗೂ ಹೂವುಬೆಳೆದ ರೈತರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಹತ್ತು ಲಕ್ಷ ರೈತರಿಗೆ ತಲಾ ಐದು ಸಾವಿರದಂತೆ ಪರಿಹಾರ ಧನದ ಮೊದಲ ಕಂತು ಬಿಡುಗಡೆ ಮಾಡಿದ್ದಾರೆ. ಇದಕ್ಕೆ ಆನ್ಲೈನ್ ಮೂಲಕ ಪರಿಹಾರ ಯೋಜನೆಗೆ ಚಾಲನೆ ನೀಡಲಾಗಿದೆ.ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಸಂಖ್ಯೆ ಜೋಡಣೆ ಮಾಡಿದ ರೈತರಿಗೆ ಪರಿಹಾರ ತಲುಪಿದೆ. ಆದರೆ ಇನ್ನೂ ಕೆಲವು ರೈತರು ತಮ್ಮ ಬ್ಯಾಂಕ್ ಖಾತೆ ಸಂಖ್ಯೆಯನ್ನು ಆಧಾರ್ ಸಂಖ್ಯೆಗೆ ಜೋಡಣೆ ಮಾಡಿಲ್ಲ. ಬದಲಾಗಿ ಏರ್‌ಟೇಲ್ ಪೇಮೆಂಟ್ ಬ್ಯಾಂಕ್ ಖಾತೆಯನ್ನು ಲಿಂಕ್ ಮಾಡಿದ್ದಾರೆ.ಹೀಗಾಗಿ ಏರ್‌ಟೇಲ್ ಪೇಮೆಂಟ್ ಬ್ಯಾಂಕ್ ಖಾತೆಗೆ ಪರಿಹಾರದ ಹಣ ಹೋಗಿರುವುದು ತಮ್ಮ ಗಮನಕ್ಕೆ ಬಂದಿದೆ ಎಂದು ವಿವರಣೆ ನೀಡಿದರು.
ರೈತರ ಪರಿಹಾರದ ದುಡ್ಡು ಏರ್‌ಟೇಲ್ ಅಕೌಂಟ್‌ಗೆ ಜಮಾ

Please follow and like us: