ವಲಸೆ ಕಾರ್ಮಿಕರಿಗೆ ಸರ್ಕಾರದಿಂದ ಗುಡ್‌ನ್ಯೂಸ್

ಲಾಕ್‌ಡೌನ್‌ನಿಂದ ವಲಸೆ ಕಾರ್ಮಿಕರು ತಮ್ಮ ತಮ್ಮ ಊರುಗಳಿಗೆ ತೆರಳಲು ನಿಗದಿಯಾದ ಬಸ್ಸುಗಳ ಪ್ರಯಾಣಕ್ಕೆ ದುಪ್ಪಟ್ಟು ದರ ವಿಧಿಸುವಂತಿಲ್ಲ ಎಂದು ರಾಜ್ಯ ಸರ್ಕಾರ ಆದೇಶಿಸಿದೆ. ಅಲ್ಲದೆ ಸರ್ಕಾರಿ ಬಸ್ಸುಗಳಲ್ಲಿ ಮೂಲದರದೊಂದಿಗೆ ಊರಿಗೆ ತೆರಳಲು ಅನುಮತಿ ನೀಡಲಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ತಿಳಿಸಿದ್ದಾರೆ. ತಮ್ಮ ಊರುಗಳಿಗೆ ಹೊರಟಿದ್ದ ವಲಸೆ ಕಾರ್ಮಿಕರಿಂದ ದುಪ್ಪಟ್ಟು ಹಣ ವಸೂಲಿ ಮಾಡಲಾಗುತ್ತಿತ್ತು. ಇದಕ್ಕೆ ಬ್ರೇಕ್ ಹಾಕಲು ಬಿ.ಎಸ್. ಯಡಿಯೂರಪ್ಪ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಚರ್ಚೆ ನಡೆಸಿ ಪ್ರಯಾಣ ದರವನ್ನು ಕಡಿಮೆ ಮಾಡಿದೆ. ಬೆಂಗಳೂರಿನ ಕೇಂದ್ರ ಬಸ್ ನಿಲ್ದಾಣದಲ್ಲಿ ಕಾದಿರುವ ಕಾರ್ಮಿಕರಿಗೆ ಕಡಿಮೆ ದರದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳ ಮೂಲಕ ತಮ್ಮ-ತಮ್ಮ ಸ್ಥಳಗಳಿಗೆ ಹೋಗಲು ಮುಖ್ಯಮಂತ್ರಿಗಳು ಹಸಿರು ನಿಶಾನೆ ತೋರಿಸಿದ್ದಾರೆ ಎಂದು ಸುರೇಶ್ ಕುಮಾರ್ ಟ್ವೀಟ್ ಮೂಲಕ ಹೇಳಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಮೇ 4ರಿಂದ ಬಸ್ ಸಂಚಾರಕ್ಕೆ ಅನುಮತಿ…!

Sat May 2 , 2020
ರೆಡ್ ಝೋನ್ ಅಲ್ಲದ ತಾಲೂಕುಗಳಲ್ಲಿ ಮೇ 4ರಿಂದ ಬಸ್ ಸಂಚಾರಕ್ಕೆ ಅನುಮತಿ ನೀಡುತ್ತೇವೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ.ಬೆಳಗಾವಿಯಲ್ಲಿ  ಮಾತನಾಡಿದ ಅವರು, ತಾಲೂಕುವಾರು ಕೊರೊನಾ ಹಾಟ್‍ಸ್ಟಾಟ್‍ಗಳನ್ನು ಗುರುತಿಸಲಾಗಿದೆ. ಕೊರೊನಾ ಸೋಂಕು ಇರುವ ತಾಲೂಕುಗಳಲ್ಲಿ ಸಾರಿಗೆ ಸಂಚಾರ ಇರುವುದಿಲ್ಲ. ಅವುಗಳನ್ನು ಬಿಟ್ಟು ಉಳಿದ ತಾಲೂಕುಗಳಲ್ಲಿ ಗ್ರಾಮೀಣ ಭಾಗಕ್ಕೂ ಸೇರಿ ಸಾರಿಗೆ ವ್ಯವಸ್ಥೆಯನ್ನು ಮೇ 4ರಿಂದ ಮಾಡುತ್ತೇವೆ ಎಂದು ಹೇಳಿದರು. ಇದೇ ವೇಳೆ ವಲಸೆ ಕಾರ್ಮಿಕರಿಂದ ಕೆ.ಎಸ್.ಆರ್.ಟಿ.ಸಿ ಬಸ್‍ಗಳಲ್ಲಿ ದುಪ್ಪಟ್ಟು ದರ […]

Advertisement

Wordpress Social Share Plugin powered by Ultimatelysocial