ನವದೆಹಲಿ: ಸುಪ್ರೀಂ ಕೋರ್ಟ್ ವಲಸೆ ಕಾರ್ಮಿಕರ ಕುರಿತಂತೆ ಮಹತ್ವದ ಸೂಚನೆ ನೀಡಿದೆ. ವಲಸೆ ಕಾರ್ಮಿಕರನ್ನು ೧೫ ದಿನದೊಳಗೆ ಅವರ ಊರಿಗೆ ವಾಪಸ್ ಕಳುಹಿಸಲು ಎಲ್ಲ ರಾಜ್ಯ ಸರ್ಕಾರಗಳು ಕ್ರಮ ಕೈಗೊಳ್ಳಬೇಕೆಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಅಷ್ಟೇ ಅಲ್ಲದೆ ತಮ್ಮ ತವರು ರಾಜ್ಯಗಳಿಗೆ ಹಿಂದಿರುಗುವ ಕಾರ್ಮಿಕರಿಗೆ ಅಲ್ಲಿಯೇ ಉದ್ಯೋಗದ ಅವಕಾಶ ಕಲ್ಪಿಸಲು ಅಲ್ಲಿನ ಸರ್ಕಾರಗಳು ಕ್ರಮಕೈಗೊಳ್ಳಬೇಕೆಂದು ತಿಳಿಸಿದೆ
ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ದೇಶದಾದ್ಯಂತ ಲಾಕ್ ಡೌನ್ ಜಾರಿಗೊಳಿಸಿದ್ದರಿಂದ ಬಹುತೇಕ ಎಲ್ಲ ವರ್ಗದ ಜನತೆ ಸಂಕಷ್ಟಕ್ಕೆ ಸಿಲುಕಿತ್ತು. ಅದರಲ್ಲೂ ವಲಸೆ ಕಾರ್ಮಿಕರು ಕೆಲಸವಿಲ್ಲದೆ ಒಂದೊತ್ತಿನ ಊಟಕ್ಕೂ ಪರದಾಡುವಂತಾಗಿತ್ತು. ಹೀಗಾಗಿ ವಲಸೆ ಕಾರ್ಮಿಕರು ತಮ್ಮ ತಮ್ಮ ಊರುಗಳಿಗೆ ತೆರಳಲು ಮುಂದಾಗಿದ್ದರಾದರೂ ಸಹ, ಬಸ್, ರೈಲು ಸಂಚಾರ ಸ್ಥಗಿತಗೊಂಡಿದ್ದ ಕಾರಣ ಬಹುತೇಕರು ಕಾಲ್ನಡಿಗೆಯಲ್ಲೇ ತೆರಳಿದ್ದರು. ಈ ಸಂದರ್ಭದಲ್ಲಿ ನಡೆದ ದುರ್ಘಟನೆಗಳಲ್ಲಿ ಬಹಳಷ್ಟು ಕಾರ್ಮಿಕರು ಸಾವಿಗೀಡಾಗಿದ್ದರು. ಆ ಬಳಿಕ ಕೇಂದ್ರ ಸರ್ಕಾರ ವಲಸೆ ಕಾರ್ಮಿಕರಿಗಾಗಿ ಶ್ರಮಿಕ್ ರೈಲಿನ ವ್ಯವಸ್ಥೆ ಮಾಡಿತ್ತು.
ವಲಸೆ ಕಾರ್ಮಿಕರಿಗೆ ಸಿಹಿ ಸುದ್ದಿ , ಉದ್ಯೋಗದ ಅವಕಾಶಕ್ಕೆ ಸುಪ್ರೀಂ ಕೋರ್ಟ್ ಅಸ್ತು

Please follow and like us: