ಬೆಂಗಳೂರು: ಲಾಕ್ಡೌನ್ನಿಂದ ದೇಶದ ಪ್ರಮುಖ ನಗರಗಳಲ್ಲಿ ಲಕ್ಷಾಂತರ ವಲಸೆ ಕಾರ್ಮಿಕರು ಸಿಲುಕಿಕೊಂಡಿದ್ದಾರೆ. ಕೈಯಲ್ಲಿ ದುಡ್ಡಿಲ್ಲದೆ ಅನೇಕ ಕಾರ್ಮಿಕರು ಸ್ವಂತ ಊರುಗಳಿಗೆ ಹೋಗಲಾಗದೇ ಪರದಾಡುತ್ತಿದ್ದಾರೆ. . ಇಂತಹ ಕಾರ್ಮಿಕರಿಗೆ ಕರ್ನಾಟಕ ಸರ್ಕಾರ ಸಂತಸದ ಸುದ್ದಿ ನೀಡಿದೆ. ಶ್ರಮಿಕ್ ರೈಲುಗಳ ಮೂಲಕ ಸ್ವಗ್ರಾಮಗಳಿಗೆ ತೆರಳ ಬಯಸುವ ವಲಸೆ ಕಾರ್ಮಿಕರು ಹಾಗೂ ಲಾಕ್ ಡೌನ್ ನಲ್ಲಿ ಸಿಲುಕಿರುವವರ ಪ್ರಯಾಣ ವೆಚ್ಚವನ್ನು ಸರ್ಕಾರವೇ ಭರಿಸಲಿದೆ’ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ. ಈ ಕುರಿತು ಸಿಎಂ ಕಚೇರಿಯ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿ ನೀಡಿದ್ದು, ತಮ್ಮ ಸ್ವಗ್ರಾಮಗಳಿಗೆ ಹಿಂದಿರುಗಲು ಪ್ರಯಾಣದ ವೆಚ್ಚವನ್ನು ಭರಿಸಲು ಸಾಧ್ಯವಾಗುತ್ತಿಲ್ಲವೆಂಬ ವಲಸೆ ಕಾರ್ಮಿಕರ ಮನವಿಯನ್ನು ಸರ್ಕಾರವು ಪರಿಗಣಿಸಿದೆ. ನಮ್ಮ ದೇಶದ ದೂರದ ಭಾಗಗಳಿಂದ ಬಂದಿರುವ ವಲಸೆ ಕಾರ್ಮಿಕರನ್ನು ನಾವು ನಮ್ಮದೇ ರಾಜ್ಯದ ಜನರು ಎಂದು ಭಾವಿಸುತ್ತೇವೆ & ಅವರ ಕಷ್ಟಕ್ಕೆ ಸರ್ಕಾರವು ಸ್ಪಂದಿಸಬೇಕೆಂಬುದು ನನ್ನ ದೃಢ ನಿರ್ಧಾರ” ಎಂದು ಟ್ವೀಟ್ ಮಾಡಿದೆ. ಮೇ 31ರ ವರೆಗೆ ಶ್ರಮಿಕ್ ರೈಲುಗಳ ಮೂಲಕ ಸ್ವಗ್ರಾಮಗಳಿಗೆ ತೆರಳಬಯಸುವ ವಲಸೆ ಕಾರ್ಮಿಕರು ಹಾಗೂ ಲಾಕ್ ಡೌನ್ ನಲ್ಲಿ ಸಿಲುಕಿರುವವರ ಪ್ರಯಾಣ ವೆಚ್ಚವನ್ನು ಸರ್ಕಾರವೇ ಭರಿಸಲಿದೆ.
ವಲಸೆ ಕಾರ್ಮಿಕರಿಗೆ ಸಿಹಿ ಸುದ್ದಿ

Please follow and like us: