ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಆನ್ಲೆöÊನ್ ತರಗತಿ ಮೂಲಕ ಮೇ ೩ರೊಳಗೆ ಎಲ್ಲಾ ವಿಷಯವನ್ನು ಬೋಧಿಸಿ ಪರೀಕ್ಷೆ ನಡೆಸಲು ಮುಂದಾಗಿರುವುದು ಸರ್ಕಾರದ ಆತುರದ ಕ್ರಮವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ. ಈ ಕುರಿತು ಮಾಡಿದ ಎಚ್‌ಡಿಕೆ ಮುಂದಿನ ತಿಂಗಳು ಪರೀಕ್ಷಾ ವೇಳಾಪಟ್ಟಿಯನ್ನು ಘೋಷಿಸುವುದಾಗಿ ಸರ್ಕಾರ ನಿರ್ಧರಿಸಿರುವುದು ವಿಶೇಷವಾಗಿ ಗ್ರಾಮೀಣ ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕವಾಗಲಿದೆ. ಸರ್ಕಾರ ಈ ಬಗ್ಗೆ ಮರು ಚಿಂತನೆ ನಡೆಸುವ ತುರ್ತು ಅಗತ್ಯವಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ನೆಟ್‌ವರ್ಕ್ ಸಮಸ್ಯೆಯಿಂದ ಆನ್‌ಲೈನ್ ತರಗತಿ ನಡೆಸುವುದು ಕಷ್ಟ. ಪ್ರತೀ ವಿದ್ಯಾರ್ಥಿಯೂ ಕೂಡ ಆನ್‌ಲೈನ್ ಮುಖಾಂತರ ಪರಿಪೂರ್ಣವಾಗಿ ಕಲಿಯಲು ಸಾಧ್ಯವಿಲ್ಲ ಎಂದರು.
ವಿವಿ ವಿದ್ಯಾರ್ಥಿಗಳಿಗೆ ಆನ್‌ಲೈನ್ ಪಾಠ ಸಮಂಜಸವಲ್ಲ: ಎಚ್‌ಡಿಕೆ

Please follow and like us: