ವಿಷ ಅನಿಲ ಸೋರಿಕೆ ಪ್ರಕರಣ…! ತುರ್ತು ಸಭೆ ಕರೆದ ಪ್ರಧಾನಿ

ವಿಶಾಖಪಟ್ಟಣಂನಲ್ಲಿ ಪಾಲಿಮರ್ ವಿಷ ಅನಿಲ ಸೋರಿಕೆ ಪ್ರಕರಣ ಹಿನ್ನೆಲೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಟೀಮ್ ಜೊತೆ ಪ್ರಧಾನಿ ಮೋದಿ ಸಭೆ ನಡೆಸಿದ್ದಾರೆ. ಗ್ಯಾಸ್ ಸೋರಿಕೆಯಿಂದಾಗಿರುವ ಬಗ್ಗೆ ಮಾಹಿತಿಗಳನ್ನು ಪಡೆದಿರುವ ಪ್ರಧಾನಿ ಮೋದಿ ಅಲ್ಲಿನ ಸ್ಥಿತಿಗತಿಗಳ ಬಗ್ಗೆ ಮತ್ತು ಮುಂದಿನ ಕ್ರಮಗಳ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ. ಇನ್ನು ಮೀಟಿಂಗ್ನಲ್ಲಿ ಗೃಹ ಮಂತ್ರಿ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಇನ್ನಿತರ ಸಚಿವರು ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದಾರೆ.

ವಿಷ ಅನಿಲ ಸೋರಿಕೆ ಪ್ರಕರಣ, 10ಕ್ಕೇರಿದ ಸಾವಿನ ಸಂಖ್ಯೆ

ವಿಶಾಖ ಪಟ್ಟಣಂನ ಆರ್.ಆರ್.ವೆಂಕಟಪುರಂ ಬಳಿಯ ಎಲ್.ಜಿ.ಪಾಲಿಮರ್ಸ್ ಕಂಪನಿಯಲ್ಲಿ ವಿಷಾನಿಲ ಸೋರಿಕೆಯಾಗಿದ್ದು, ಈವರಗೆ ಮೃತಪಟ್ಟವರ ಸಂಖ್ಯೆ 10ಕ್ಕೇರಿದೆ. ಇನ್ನು ಈ ದುರ್ಘಟನೆಯಲ್ಲಿ 5000ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದಾರೆ ಎನ್ನಲಾಗಿದೆ. ಸದ್ಯ 20ಕ್ಕೂ ಹೆಚ್ಚು ಜನರ ಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆ ಇನ್ನು ಹೆಚ್ಚಾಗುವ ಸಾಧ್ಯತೆ ಇದೆ.ಘಟನೆಯಲ್ಲಿ ಅಸ್ವಸ್ಥರಾದ ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Please follow and like us:

Leave a Reply

Your email address will not be published. Required fields are marked *

Next Post

ಆಂಧ್ರದಲ್ಲಿ ವಿಷ ಅನಿಲ ಸೋರಿಕೆ, 10ಕ್ಕೇರಿದ ಸಾವಿನ ಸಂಖ್ಯೆ..!

Thu May 7 , 2020
ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಬಹುರಾಷ್ಟ್ರೀಯ ಕಂಪೆನಿಯ ರಾಸಾಯನಿಕ ಸ್ಥಾವರದಿಂದ ವಿಷಕಾರಿ ಅನಿಲ ಸೋರಿಕೆಯಾಗಿರುವ ಪರಿಣಾಮ ಮಕ್ಕಳು ಸಹಿತ 10 ಮಂದಿ ಮೃತಪಟ್ಟಿರುವ ಘಟನೆ ಗುರುವಾರ ಬೆಳಗ್ಗೆ ವರದಿಯಾಗಿದೆ. ಸುಮಾರು 200 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆಯಂಬುಲೆನ್ಸ್, ಅಗ್ನಿಶಾಮಕ ದಳದ ಯಂತ್ರಗಳು ಹಾಗೂ ಪೊಲೀಸರು ರಾಸಾಯನಿಕ ಸ್ಥಾವರದತ್ತ ಧಾವಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲೆಯ ಆರ್‌ಆರ್ ವೆಂಕಟಪುರAನಲ್ಲಿರುವ ಎಲ್‌ಜಿ ಪಾಲಿಮರ್ಸ್ ಇಂಡಿಯಾ ಪ್ರೈ ಲಿ.ನ ಬಳಿ ಮನೆಗಳಿದ್ದು, ಇಲ್ಲಿನ ನಿವಾಸಿಗಳ ಕಣ್ಣುಗಳಲ್ಲಿ ಉರಿ […]

Advertisement

Wordpress Social Share Plugin powered by Ultimatelysocial