ವೈದ್ಯಕೀಯ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯ

ಪಾದರಾಯಪುರ ಗಲಭೆ ಪ್ರಕರಣದ ಆರೋಪಿಗಳನ್ನು ಈಗಾಗಲೇ ರಾಮನಗರ ಜೈಲಿಗೆ ಶಿಫ್ಟ್ ಮಾಡಲಾಗಿದ್ದು, ಸಮಾಜದ ಸ್ವಾಸ್ಥ್ಯ ಕದಡುವ ಗೂಂಡಾಗಳ ವರ್ತನೆಗೆ ಕಡಿವಾಣ ಹಾಕಲು ಹೊಸ ಕಾಯ್ದೆ ಜಾರಿಗೆ ತರಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾದಿಂದ ಜನರನ್ನು ರಕ್ಷಣೆ ಮಾಡಲು ಹಗಲು ರಾತ್ರಿ ಎನ್ನದೆ ಪೊಲೀಸರು,ವೈದ್ಯರು ಕರ್ತವ್ಯದಲ್ಲಿ ತೊಡಗಿದ್ದಾರೆ. ಅವರ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯ. ಇಂತಹ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಸಮಾಜವಿರೋಧಿ ಗೂಂಡಗಳಿಗೆ ಕಡಿವಾಣ ಹಾಕಲು ಹೊಸ ಕಾಯ್ದೆ ಜಾರಿಗೆ ತರುತ್ತೇವೆ ಎಂದು ಹೇಳಿದರು.ಇನ್ನು ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಿರುವ ಮೈಸೂರು, ಬೆಳಗಾವಿ, ಬಾಗಲಕೋಟೆಗಳಲ್ಲಿ ಕಟ್ಟುನಿಟ್ಟಿನ ಲಾಕ್ ಡೌನ್ ಗೆ ಸರ್ಕಾರ ಚಿಂತಿಸುತ್ತಿದೆ. ಉಳಿದಂತೆ ಶೂನ್ಯ ಫಲಿತಾಂಶ ಬಂದಿರುವ ಜಾಗಗಳ ಕುರಿತು ಮುಂದಿನ ನಡೆ ಬಗ್ಗೆ ಸಿಎಂ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು.

Please follow and like us:

Leave a Reply

Your email address will not be published. Required fields are marked *

Next Post

ಬಾಲ್ಯವಿವಾಹ ಪ್ರಕರಣ ದಾಖಲು

Wed Apr 22 , 2020
ಮೈಸೂರು: ಕೊರೊನಾ ಸೋಕು ಹರಡುವ ಹಿನ್ನಲೆಯಲ್ಲಿ ಲಾಕ್‌ಡೌನ್ ಜಾರಿ ಮಾಡಲಾದೆ. ಈ ಮಧ್ಯೆ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಹಲ್ಲರೆ ಗ್ರಾಮದ ಹೊರವಲಯದ ದೇವಾಲಯವೊಂದರಲ್ಲಿ ಬಾಲ್ಯವಿವಾಹ ನಡೆದಿರುವ ಕುರಿತು ನಂಜನಗೂಡು ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕವಿತಾ ಅವರು ಪೊಲೀಸ್ ಠಾಣೆಗೆ ನೀಡಿದ ದೂರಿನ ಮೇರೆಗೆ ಬಾಲ್ಯ ವಿವಾಹಕ್ಕೊಳಗಾಗಿದ್ದ ಬಾಲಕಿಯನ್ನು ರಕ್ಷಿಸಿ ಪಾಲಕರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಗ್ರಾಮದ […]

Advertisement

Wordpress Social Share Plugin powered by Ultimatelysocial