ಬೆಂಗಳೂರಿನ ಅಡುಗೋಡಿ ಸಿಎಆರ್ ಮೈದಾನದಲ್ಲಿ ಶ್ವಾನ ದಳದ ಚಟುವಟಿಕೆಗೆಂದೇ ಆಧುನಿಕ ಉದ್ಯಾನವನ ನಿರ್ಮಿಸಲಾಗಿದೆ. ಅಪರಾಧ ಪ್ರಕರಣ ಪತ್ತೆ, ಭಯೋತ್ಪಾದನೆ ವಿರುದ್ಧದ ಕಾರ್ಯಾಚರಣೆಗಾಗಿ ಶ್ವಾನ ದಳವನ್ನು ಮತ್ತಷ್ಟು ಚುರುಕುಗೊಳಿಸಲು ಇಲ್ಲಿಂದ್ದ ಮೊದಲಿದ್ದ ಉದ್ಯಾನವನ್ನೇ ನವೀಕರಿಸಲಾಗಿದೆ ಎಂದು ಉದ್ಯಾನ ಉದ್ಘಾಟಿಸಿದ ನಗರ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ತಿಳಿಸಿದ್ದಾರೆ. ಪೊಲೀಸ್ ಶ್ವಾನದಳವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ 2.5 ಕೋಟಿ ವೆಚ್ಚದಲ್ಲಿ 50 ಶ್ವಾನಗಳನ್ನು ಅಳವಡಿಸಿಕೊಳ್ಳಲಾಗುವುದು ಎಂದರು. ಸ್ಪೋಟಕ ವಸ್ತುಗಳನ್ನು, ಡ್ರಗ್ಸ್‌ಗಳನ್ನು ಪತ್ತೆಹಚ್ಚುವ ಹಾಗೂ ಅಪರಾಧ ಸ್ಥಳದಲ್ಲಿ ಅಪರಾಧಿಯನ್ನು ಪತ್ತೆಹಚ್ಚುವಲ್ಲಿ ನಮ್ಮ ಇಲಾಖೆಯ ಶ್ವಾನಗಳು ಬಹಳ ಮಹತ್ವದ ಪಾತ್ರವನ್ನು ವಹಿಸುತ್ತವೆ. ಈ ತಂಡವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಅವುಗಳಿಗೆ ಅತ್ಯುತ್ತಮ ತರಬೇತಿ ನೀಡುವುದು ನಮ್ಮ ಗುರಿಯಾಗಿದೆ. ಈ ನಿಟ್ಟಿನಲ್ಲಿ ಸಿಎಆರ್ (ದಕ್ಷಿಣ) ನಲ್ಲಿ ಡಿಸಿಪಿ ಯೋಗೇಶ್ ಹಾಗೂ ಎಸಿಪಿ ನಿಂಗಾರೆಡ್ಡಿ ಪಾಟೀಲ್ ಅವರ ನೇತೃತ್ವದಲ್ಲಿ ಶ್ವಾನ ಚಟುವಟಿಕೆಯ ಉದ್ಯಾನವನ್ನು ಉನ್ನತೀಕರಿಸಲಾಗಿದೆ ಎಂದರು.
ಶ್ವಾನ ಪಡೆಯ ಚಟುವಟಿಕೆ ಉದ್ಯಾನ ಆರಂಭ

Please follow and like us: