ನವದೆಹಲಿ : ಲಾಕ್ ಡೌನ್ ನಿಂದ ದೇಶದಲ್ಲಿ ಆರ್ಥಿಕ ಸಂಕಷ್ಟ ಎದುರಾಗಿದೆ. ಈ ಕಾರಣದಿಂದ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆ, ಆತ್ಮ ನಿರ್ಭರ್ ಭಾರತ ಅಡಿ ಯೋಜನೆಗಳನ್ನು ಮಾತ್ರವೇ ಆರಂಭಿಸಬೇಕು. ಇತರೆ ಬೇರಾವುದೇ ಯೋಜನೆಗಳನ್ನು ಆರಂಭಿಸದಂತೆ ಕೇಂದ್ರ ಸರ್ಕಾರ ಹೊಸ ಆದೇಶ ಹೊರಡಿಸಿದೆ. ಈ ಮೂಲಕ ಕೇಂದ್ರ ಸರ್ಕಾರ ಹೊಸ ಯೋಜನೆಗಳಿಗೆ ಬ್ರೇಕ್ ಹಾಕಿದೆ. ದೇಶದಲ್ಲಿ ಕೊರೋನಾದಿಂದ ಆರ್ಥಿಕ ಸಂಕಷ್ಟ ಎದುರಾಗಿದೆ. ಹೀಗಾಗಿ ಯಾವುದೇ ಹೊಸ ಯೋಜನೆ ಜಾರಿ ಮಾಡುತ್ತಿಲ್ಲ. 2021ರ ಮಾರ್ಚ್ ವರೆಗೆ ಹೊಸ ಯೋಜನೆಗೆ ತಡೆ ನೀಡಲಾಗಿದೆ. ಕೇವಲ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆ, ಆತ್ಮ ನಿರ್ಭರ್ ಭಾರತ ಅಡಿ ಮಾತ್ರವೇ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ ಎಂದು ತಿಳಿಸಿದೆ. ಖಡಕ್ ಆಗಿ ಆದೇಶ ಹೊರಡಿಸಿರುವ ಕೇಂದ್ರ ಸರ್ಕಾರ, ಈ ಮೂಲಕ ಹಣಕಾಸು ಕೊರತೆ ಸರಿದೂಗಿಸಲು ಕ್ರಮ ಕೈಗೊಂಡಿದೆ. ಹೀಗಾಗಿ 2021ರ ಮಾರ್ಚ್ ವರೆಗೆ ದೇಶದಲ್ಲಿ ಹೊಸ ಯೋಜನೆಗಳಿಗೆ ತಡೆ ನೀಡಲಾಗಿದೆ. ಹೊಸ ಯೋಜನೆಗಳಿಗೆ ಬ್ರೇಕ್ ಹಾಕುವ ಮೂಲಕ ಆರ್ಥಿಕ ಚೇತರಿಕೆಗೆ ಕ್ರಮ ಕೈಗೊಂಡಿದೆ.
ಸರಕಾರಿ ಹೊಸ ಯೋಜನೆಗಳಿಗೆ ಬ್ರೇಕ್

Please follow and like us: