ಸರ್ಕಾರಕ್ಕೆ ದೇವೇಗೌಡ ಪತ್ರ

ರಾಜ್ಯದಲ್ಲಿ ಲಾಕ್‌ಡೌನ್ ಜಾರಿಯಾಗಿ ಒಂದು ತಿಂಗಳಾಯಿತು. ಲಾಕ್‌ಡೌನ್‌ನಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿರುವುದು ರೈತಾಪಿ ಸಮುದಾಯ. ಈ ಸಂದರ್ಭದಲ್ಲಿ ಸಂಘಟಿತ ಹಾಗೂ ಅಸಂಘಟಿತ ವಲಯದ ಕೂಲಿ ಕಾರ್ಮಿಕರು ಸಾಕಷ್ಟು ತೊಂದರೆಗೊಳಗಾಗಿದ್ದಾರೆ. ಅದರಲ್ಲೂ ಹಣ್ಣು, ತರಕಾರಿ, ಹೂವು ಬೆಳೆದವರು ಕಣ್ಣೀರಿಡುವಂತಾಗಿದೆ. ರೈತರಿಗೆ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸಬೇಕೆಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರದ ಮೂಲಕ ಆಗ್ರಹಿಸಿದ್ದಾರೆ.
ಹಾಲು ಖರೀದಿಸಿ ಹಾಲು ಉತ್ಪಾದಕರಿಗೆ ನೇರವಾಗಿದ್ದೀರಿ ಹಾಗೆಯೇ ಲಾಕ್‌ಡೌನ್‌ನಿಂದ ನಷ್ಟ ಹೊಂದಿರುವ ರೈತರಿಗೆ ವಿಶೇಷ ಪ್ಯಾಕೇಜ್ ಘೋಷಿಸಿ ಅನ್ನದಾತನ ಕೈ ಬಿಡಬೇಡಿ ಎಂದು ಪತ್ರದ ಮೂಲಕ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ನಾಳೆ ಶಿಕ್ಷಣ ಸಚಿವರೊಂದಿಗೆ ಕೇಂದ್ರ ಸಚಿವರ ಸಭೆ

Mon Apr 27 , 2020
ನವದೆಹಲಿ: ಲಾಕ್‌ಡೌನ್ ಹಿನ್ನಲೆ ಪರೀಕ್ಷೆಗಳು ಸ್ಥಗೀತಗೊಂಡಿರುವುದರಿAದ ಲಾಕ್‌ಡೌನ್ ತೆರವುಗೊಳ್ಳುತ್ತಿದ್ದಂತೆಯೇ ಪರೀಕ್ಷೆಗಳನ್ನು ನಡೆಸಲಾಗುತ್ತದೆ ಆ ವಿಚಾರವಾಗಿ ನಾನು ನಾಳೆ ರಾಜ್ಯಗಳ ಶಿಕ್ಷಣ ಸಚಿವರ ಜತೆ ಸಭೆ ನಡೆಸಿ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೋಖ್ರಿಯಾಲ್ ತಿಳಿಸಿದ್ದಾರೆ.  ಜೆಇಇ ಮೇನ್, ನೀಟ್ ಮೊದಲಾದ ಪ್ರವೇಶ ಪರೀಕ್ಷೆಗಳನ್ನು ವಿಳಂಬಗೊಳಿಸಲಾಗಿದೆಯಷ್ಟೇ. ಮೇ,ಜೂನ್ ತಿಂಗಳಲ್ಲಿ ಪರೀಕ್ಷೆ ನಡೆಸಲು ಉದ್ದೇಶಿಸಲಾಗಿದೆ ಎಂದರು. Please follow and like us:

Advertisement

Wordpress Social Share Plugin powered by Ultimatelysocial