ಬೆಂಗಳೂರು: ಮಲ್ಲೇಶ್ವರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನ ಬಳಕೆ ಮೂಲಕ ಇ-ಲರ್ನಿಂಗ್ ವ್ಯವಸ್ಥೆ ಸಾಧ್ಯವಾಗಿಸುವ ಜತೆಗೆ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಒತ್ತು ನೀಡುವ ವ್ಯವಸ್ಥೆ ಜಾರಿ ಮಾಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಕಲಿಕೆಯ ಗುಣಮಟ್ಟ ಸುಧಾರಿಸುವ ಸಂಬಂಧ ಶಿಕ್ಷಣ ತಜ್ಞರ ಜತೆ ಇಂದು ಸಮಾಲೋಚನೆ ನಡೆಸಿದ ನಂತರ ಮಾತನಾಡಿದರು. ಮಲ್ಲೇಶ್ವರದ 11 ಕ್ಯಾಂಪಸ್ಗಳಲ್ಲಿರುವ ಒಟ್ಟು 22 ಸರ್ಕಾರಿ ಶಾಲೆಗಳಲ್ಲಿ ಬೋಧನಾ ವಿಧಾನದಲ್ಲಿ ಬದಲಾವಣೆ ತರುವ ಮೂಲಕ ಮಕ್ಕಳ ಕಲಿಕೆಯನ್ನು ಸುಧಾರಿಸುವ ಸಂಬಂಧ ಶಿಕ್ಷಣ ತಜ್ಞರ ಜತೆ ಸಮಾಲೋಚನೆ ನಡೆಸಲಾಯಿತು. ಸರ್ಕಾರಿ ಶಾಲೆಗಳ ಕಲಿಕಾ ಗುಣಮಟ್ಟ ಯಾವುದೇ ಖಾಸಗಿ ಶಾಲೆಯ ಕಲಿಕೆಯ ಗುಣಮಟ್ಟಕ್ಕಿಂತ ಕಡಿಮೆ ಇರಬಾರದು. ಈ ನಿಟ್ಟಿನಲ್ಲಿ ತಂತ್ರಜ್ಞಾನದ ಬಳಕೆಗೆ ಒತ್ತು ನೀಡಲಾಗುವುದು. ಈ ಮೂಲಕ ಮಕ್ಕಳನ್ನು ಆಕರ್ಷಿಸಿ ಸರ್ಕಾರಿ ಶಾಲೆಗಳಲ್ಲಿ ಪ್ರವೇಶಾತಿಯನ್ನು ಹೆಚ್ಚಿಸುವುದು ನಮ್ಮ ಉದ್ದೇಶ ಎಂದು ತಿಳಿಸಿದರು.
ಸರ್ಕಾರಿ ಶಾಲೆಗಳಲ್ಲಿ ಸ್ಮಾರ್ಟ್ ಕಲಿಕೆ : ಅಶ್ವತ್ಥನಾರಾಯಣ

Please follow and like us: