ಪ್ರತಿ ಪಕ್ಷ ನಾಯಕ ಸಿದ್ದರಾಮಯ್ಯ ಅವರು ಬಿಜೆಪಿಗೆ ಬಂದರೂ ಅಚ್ಚರಿಪಡಬೇಕಿಲ್ಲ, ರಾಜಕೀಯದಲ್ಲಿ ಯಾವುದೂ ಅಸಾಧ್ಯವಲ್ಲ ಎಂದೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ. ರವಿ ಮಾರ್ಮಿಕವಾಗಿ ನುಡಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಡುವಿನ ಶೀತಲ ಸಮರ ಯಾವ ಘಟ್ಟಕ್ಕೆ ಬೇಕಾದರೂ ತಲುಪಬಹುದು ಎಂದರು. ಬಿ.ಎಸ್. ಯಡಿಯೂರಪ್ಪ, ಎಚ್.ಡಿ.ದೇವೇಗೌಡ ಅವರಂತೆಯೇ ಸಿದ್ದರಾಮಯ್ಯ ಕೂಡಾ ಜನನಾಯಕ. ಅವರು ಇರಬೇಕಾದ ಪಕ್ಷ ಬಿಜೆಪಿ ಎಂದರು. ಅವರು ಬಿಜೆಪಿ ಹೊಗಳಲು ಸಾಧ್ಯವಿಲ್ಲ. ಬಿಜೆಪಿಗೆ ಬಂದಾಗ ಮಾತ್ರ ಖಂಡಿತಾ ಹೋಗಳುತ್ತಾರೆ ಎಂದು ಪ್ರತಿಕ್ರಿಯಿಸಿದರು.
ಸಿದ್ದರಾಮಯ್ಯ ಬಿಜೆಪಿಗೆ ಬಂದರೆ ಅಚ್ಚರಿಪಡಬೇಕಿಲ್ಲ
Please follow and like us: