ಸಿನಿಮಾ ಚಿತ್ರೀಕರಣ ಬಿಟ್ಟು ಉಳಿದ ತಾಂತ್ರಿಕ ಕೆಲಸ ಮಾಡಿಕೊಳ್ಳಬಹುದು

ಕೊರೊನಾ ಸೋಂಕು ಹರಡುವ ಭೀತಿ ಇರುವುದರಿಂದ ಸದ್ಯ ಸಿನಿಮಾ ಚಿತ್ರೀಕರಣಕ್ಕೆ ಅನುಮತಿ ನೀಡಲು ಸಾಧ್ಯವಿಲ್ಲ. ಆದರೆ, ಉಳಿದ ತಾಂತ್ರಿಕ ಕೆಲಸಗಳನ್ನು ಮಾಡಿಕೊಳ್ಳಬಹುದು’ ಎಂದು ಸಚಿವ ಆರ್. ಅಶೋಕ್‌ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,’ಚಿತ್ರೀಕರಣಕ್ಕೆ ಅವಕಾಶ ನೀಡಿದರೆ ಕೊರೊನಾ ಸೋಂಕು ನಿಯಂತ್ರಣ ನಿಯಮ ಪಾಲನೆ ಕಷ್ಟವಾಗಬಹುದು. ಆದರೆ, ಡಬ್ಬಿಂಗ್, ಎಡಿಟಿಂಗ್, ಗ್ರಾಫಿಕ್ಸ್‌, ರಿರೆಕಾರ್ಡಿಂಗ್‌ನಂತಹ ಚಟುವಟಿಕೆಯನ್ನು ನಡೆಸಬಹುದು. ಈ ವೇಳೆಯೂ, ಸರ್ಕಾರದ ಆದೇಶ ಮತ್ತು ನಿಯಮ ಪಾಲಿಸಬೇಕು’ ಎಂದು ಹೇಳಿದ್ದಾರೆ.

ವರದಿ:ಪೊಲಿಟಿಕಲ್ ಬ್ಯೂರೋ ಸ್ಪೀಡ್ ನ್ಯೂಸ್ ಕನ್ನಡ

Please follow and like us:

Leave a Reply

Your email address will not be published. Required fields are marked *

Next Post

ಗ್ರೀನ್ ಜೋನ್ ನಲ್ಲಿ  ವಾಣಿಜ್ಯ ವಹಿವಾಟು ನಡೆಸಲು ಅನುಮತಿ

Sun May 10 , 2020
ಧಾರವಾಡ ಜಿಲ್ಲೆಯಲ್ಲಿ ಸೋಮವಾರದಿಂದ ವಾಣಿಜ್ಯ ವಹಿವಾಟು ನಡೆಸಲು ಅವಕಾಶ ಮಾಡಿಕೊಡಲಾಗುವುದು ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಅವರು,ಹುಬ್ಬಳ್ಳಿ ನಗರ ಹೊರತುಪಡಿಸಿ ಜಿಲ್ಲೆಯಾದ್ಯಂತ ಆರ್ಥಿಕ ಚಟುವಟಿಕೆಗಳು ಪ್ರಾರಂಭವಾಗಿದೆ. ಸೋಮವಾರದಿಂದ ಸೀಲ್‌ಡೌನ್ ಪ್ರದೇಶಗಳನ್ನು ಹೊರತುಪಡಿಸಿ ಉಳಿದೆಡೆ ವಾಣಿಜ್ಯ ವಹಿವಾಟು ನಡೆಸಲು ಆದೇಶ ಹೊರಡಿಸಲಾಗುವುದು. ಮಾಲ್, ಮಾರುಕಟ್ಟೆ ಸಂಕೀರ್ಣ, ಬಾರ್ ಅಂಡ್ ರೆಸ್ಟೋರೆಂಟ್, ಜಿಮ್, ಧಾರ್ಮಿಕ ಚಟುವಟಿಕೆಗಳು, ಸಭೆ ಸಮಾರಂಭಗಳ ಮೇಲಿನ ನಿರ್ಬಂಧ ಮುಂದುವರೆಯಲಿದೆ. ಈಗಾಗಲೇ ಜಿಲ್ಲೆಯಲ್ಲಿ ಶೇ.25ರಷ್ಟು ಕೈಗಾರಿಕಾ […]

Advertisement

Wordpress Social Share Plugin powered by Ultimatelysocial