ಹಾಪ್ ಕಾಮ್ಸ್ ನೌಕರರ ವಿರುದ್ಧ ಕಠಿಣ ಕ್ರಮ

ಇಂದು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಕೃಷಿ, ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಕೋವಿಡ್-19 ಸೋಕು ಹರಡುತ್ತಿರುವ ಹಿನ್ನೆಲೆಯಲ್ಲಿ ಕಳೆದ 3 ತಿಂಗಳಿನಿಂದ ಕೆಲಸಕ್ಕೆ ಹಾಜರಾಗದ 150 ಜನ ಹಾಪ್‍ಕಾಮ್ಸ್ ನೌಕರರ ವಿರುದ್ಧ ಪರಿಶೀಲಿಸಿ ನಂತರ ಕಠಿಣ ಕ್ರಮ ಜಾರಿಗೊಳಿಸುವಂತೆ  ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಹಾಗೂ ರಾಜ್ಯದ 550 ಹಾಪ್‍ಕಾಮ್ಸ್ ಮಳಿಗೆಗಳ ಪೈಕಿ ಕೇವಲ 250 ಮಳಿಗೆಗಳು ಕಾರ್ಯನಿರ್ವಹಿಸುತ್ತಿದ್ದು . ಬಾಕಿ ಉಳಿದ ಮಳಿಗೆಗಳು ತೆರೆಯದೇ ಇರುವವರ ವಿರುದ್ಧ ಶಿಸ್ತಿನ ಕ್ರಮ ಜರುಗಿಸಬೇಕೆಂದು ಅವರು ಸೂಚಿಸಿದರು.

 

Please follow and like us:

Leave a Reply

Your email address will not be published. Required fields are marked *

Next Post

ಕಾರವಾರ ತಾಲ್ಲೂಕಿನಲ್ಲಿ ಗುಡುಗು ಸಹಿತ ಧಾರಕಾರ ಮಳೆ

Tue Jun 2 , 2020
ಕಾರವಾರ ತಾಲ್ಲೂಕಿನ ವಿವಿಧೆಡೆ ಇಂದು ಬೆಳಿಗ್ಗೆಯಿಂದ ಗುಡುಗು ಸಹಿತ ಧಾರಕಾರ ಮಳೆ ಬರುತ್ತಿದ್ದು.ನಿನ್ನೆ ಸಂಜೆಯೂ ನಗರದಲ್ಲಿ ಉತ್ತಮ ಮಳೆಯಾಗಿದೆ.ಉತ್ತರ ಕನ್ನಡದ ಭಾಗದಲ್ಲಿ ಭತ್ತದ ವ್ಯವಸಾಯ ಮಾಡುವವರು ಹೊಲಗಳನ್ನು ಉಳುಮೆ ಬಿತ್ತನೆಗೆ ಸಿದ್ಧತೆ ಆರಂಭಿಸಿದ್ದಾರೆ. ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳು ಆರಂಭವಾಗಿದೆ. ಉತ್ತಮವಾಗಿ ಮಳೆ ಬೀಳಲಿದೆ ಎಂದು ಸಂತಸದಿಂದ ರೈತರು ಅಭಿಪ್ರಾಯಪಟ್ಟಿದ್ದಾರೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಮಂಗಳವಾರದಂದು ಚಂಡಮಾರುತವಾಗಿ ಪರಿವರ್ತನೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮೂನ್ಸೂಚನೆ […]

Advertisement

Wordpress Social Share Plugin powered by Ultimatelysocial