ಹೆದ್ದಾರಿಗಳಲ್ಲಿ ಇಂದಿನಿಂದ ಟೋಲ್ ಸಂಗ್ರಹ

ಕೋವಿಡ್ ೧೯ ಲಾಕ್‌ಡೌನ್ ಮಧ್ಯೆ ದೇಶಾದ್ಯಂತ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹವು ಇಂದಿನಿಂದ ಪುನರಾರಂಭಗೊಂಡಿದೆ. ಸ್ಥಗಿತಗೊಂಡ ಆರ್ಥಿಕ ಚಟುವಟಿಕೆಗಳನ್ನು ಪುನರುಜ್ಜೀವನಗೊಳಿಸುವ ಸಲುವಾಗಿ ಭಾರತವು ಇಂದಿನಿಂದ ಕೊರೋನಾವೈರಸ್ ನಿರ್ಬಂಧಗಳನ್ನು ನಿಧಾನವಾಗಿ ಸಡಿಲಿಸುತ್ತಿರುವ ಭಾಗವಾಗಿ ಈ ಉಪಕ್ರಮ ಜಾರಿಯಾಗಿದೆ. ಮಾರ್ಚ್ ೨೪ ರಂದು ೨೧ ದಿನಗಳ ರಾಷ್ಟ್ರವ್ಯಾಪಿ ಲಾಕ್ ಡೌನ್ ಘೋಷಣೆಯಾದ ನಂತರ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹವನ್ನು ಸ್ಥಗಿತಗೊಳಿಸಿತ್ತು. ಮುಂಬೈನ ವಾಶಿ, ನಾಗ್ಪುರದ ಬೋರ್ಖೆಡಿ, ಗುರುಗ್ರಾಮ್, ಚೆನ್ನೈನ ಪುರೂರ್ ವಾರಣಾಸಿಯ ದಾಫಿಯಲ್ಲಿ ಟೋಲ್ ಪ್ಲಾಜಾಗಳು ಚಾಲನೆಗೊಂಡಿದ್ದು ಅಲ್ಲಿನ ನೌಕರರು ಕೈಗ್ಲೌಸ, ಮಾಸ್ಕ್ ಮತ್ತು ಸ್ಯಾನಿಟೈಸರ್ ಬಳಸುತ್ತಿರುವುದು ಕಂಡುಬಂದಿದೆ.

 

 

Please follow and like us:

Leave a Reply

Your email address will not be published. Required fields are marked *

Next Post

ಕೇಂದ್ರ ಗೃಹ ಇಲಾಖೆ ಗರಂ

Mon Apr 20 , 2020
ದೇಶದಲ್ಲಿ ಮಾರಕ ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತೆಯಾಗಿ ಲಾಕ್ ಡೌನ್‌ನ್ನು ಮೇ.೩ರವರೆಗೆ ವಿಸ್ತರಿಸಲಾಗಿದೆ. ಆದರೆ ಕೆಲ ರಾಜ್ಯಗಳಲ್ಲಿ ಲಾಕ್ ಡೌನ್ ನಿಯಮಗಳ ಕಟ್ಟುನಿಟ್ಟಿನ ಪಾಲನೆ ಯಾಕೆ ಆಗುತ್ತಿಲ್ಲ. ವಾಹನಗಳ ಸಂಚಾರ ಹೆಚ್ಚಾಗುತ್ತಿದೆ ಎಂದು ಕೇಂದ್ರ ಗೃಹ ಸಚಿವಾಲಯ ರಾಜ್ಯ ಸರ್ಕಾರಗಳ ವಿರುದ್ಧ ಕಿಡಿಕಾರಿದೆ. ಕಳೆದ ರಾತ್ರಿ ಬೆಂಗಳೂರಿನ ಪಾದರಾಯನಪುರದಲ್ಲಿ ಆರೋಗ್ಯ ಹಾಗೂ ಬಿಬಿಎಂಪಿ ಸಿಬ್ಬಂದಿ ಮೇಲೆ ಹಾಗೂ ಪೊಲೀಸರ ಮೇಲೆ ನಡೆದ ದಬ್ಬಾಳಿಕೆಯ ಬೆನ್ನಲ್ಲೇ ಕೇಂದ್ರ ಸರ್ಕಾರ […]

Advertisement

Wordpress Social Share Plugin powered by Ultimatelysocial