೨೪ ಗಂಟೆಯಲ್ಲಿ ೧೪೨೯ ಮಂದಿಗೆ ಕೊರೊನಾ ಸೋಂಕು

ನವದೆಹಲಿ : ದೇಶಾದ್ಯಂತ ಮಾರಕ ಕೊರೊನಾ ವೈರಸ್ ತಲ್ಲಣ ಸೃಷ್ಟಿಸಿದ್ದು, ದಿನೇ ದಿನೇ ಸೋಂಕು ಪೀಡಿತರ ಸಂಖ್ಯೆ ಹೆಚ್ಚಳವಾಗಿದೆ.  ಸೋಂಕು ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಂಡಿದ್ದರೂ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ದೇಶದಲ್ಲಿ ಸೋಂಕು ಪೀಡಿತರ ಸಂಖ್ಯೆ  24,506ಕ್ಕೆ ಏರಿಕೆಯಾಗಿದ್ದು, 24 ಗಂಟೆಯಲ್ಲಿ 1429 ಮಂದಿಯಲ್ಲಿ ಮಾರಕ ಸೋಂಕು ದೃಢಪಟ್ಟಿದೆ.  ಈ ಕುರಿತಂತೆ ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 1429 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 57 ಮಂದಿ ಬಲಿಯಾಗಿದ್ದಾರೆ. ಇನ್ನು ಸೋಂಕು ಪೀಡಿತರ ಸಂಖ್ಯೆ 24,506 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಈ ಪೈಕಿ 18,668 ಮಂದಿ ದೇಶದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಈವರೆಗೆ 5,063 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದು ಸಂಪೂರ್ಣ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಡೆಡ್ಲಿ ಕೊರೊನಾಗೆ ಈವರಗೆ ಬಲಿಯಾದವರ ಸಂಖ್ಯೆ 775ಕ್ಕೆ ಏರಿಕೆಯಾಗಿದೆ.

 

 

 

Please follow and like us:

Leave a Reply

Your email address will not be published. Required fields are marked *

Next Post

489ಕ್ಕೆ ಏರಿಕೆ ಕಂಡ ಕೊರೊನಾ ಸೋಂಕಿತರ ಸಂಖ್ಯೆ  

Sat Apr 25 , 2020
ಬೆಂಗಳೂರು : ರಾಜ್ಯದಲ್ಲಿ ಮಾರಕ ಕೊರೊನಾ ಸೋಂಕು ದಿನೇ ದಿನೇ ವ್ಯಾಪಕವಾಗಿ ಹರಡುತ್ತಿದೆ . ರಾಜ್ಯದಲ್ಲಿ ಇಂದು ಮತ್ತೆ 15 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 489ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ರಾಜ್ಯದ ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ, ಇಂದು ಮತ್ತೆ 15 ಮಂದಿಯಲ್ಲಿ ಮಾರಕ ಸೋಂಕು ದೃಢಪಟ್ಟಿದೆ. ಹೊಸದಾಗಿ ಸೋಂಕು ಪೀಡಿತರ ಪೈಕಿ ಬೆಂಗಳೂರಿನವರು 6 ಮಂದಿ, ಬೆಳಗಾವಿಯಲ್ಲಿ 6 ಮಂದಿ. […]

Advertisement

Wordpress Social Share Plugin powered by Ultimatelysocial