ಅಂಗನವಾಡಿ ಕಾರ್ಯಕರ್ತೆಯವರಿಗೆ ಸಂತಸದ ವಿಷಯ :ಬೇಡಿಕೆ ಈಡೇರಿಸುವಂತೆ ಸಿಎಂ ಜೊತೆ ಮಾತುಕತೆ :ಎಚ್‌ಡಿಕೆ ಭರವಸೆ

ಬಿಡದಿ(ರಾಮನಗರ): ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಸಂಬಂಧಪಟ್ಟ ಸಚಿವರ ಜತೆ ಮಾತುಕತೆ ನಡೆಸುವುದಾಗಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ರಾಜ್ಯ ಸಮಿತಿಯು ಅಧ್ಯಕ್ಷೆ ಎಸ್.ವರಲಕ್ಷ್ಮೀ ನೇತೃತ್ವದಲ್ಲಿ ಬಿಡದಿಯ ಕೇತಿಗಾನಹಳ್ಳಿ ತೋಟದ ಮನೆಯಲ್ಲಿ ಎಚ್​ಡಿಕೆ ಅವರನ್ನ ಭೇಟಿಯಾಗಿ ಮನವಿ ಸಲ್ಲಿಸಿದರು.ಬಳಿಕ ಮಾತನಾಡಿದ ಎಚ್​ಡಿಕೆ, ಈ ಬಗ್ಗೆ ಮುಂದಿನ ವಿಧಾನಮಂಡಲ ಅಧಿವೇಶನದಲಳು ಪ್ರಸ್ತಾಪಿಸುವೆ ಎಂದರು.ಅನೇಕ ವರ್ಷದಿಂದ ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳು ನೆನೆಗುದಿಗೆ ಬಿದ್ದಿವೆ. ರಾಜ್ಯದಲ್ಲಿ 47.37 ಲಕ್ಷ ಅಂಗನವಾಡಿ ಕಾರ್ಯಕರ್ತೆಯರಿದ್ದು, ಕೋವಿಡ್‌ ಸೋಂಕಿನ ಕಾಲದಲ್ಲಿ ಜೀವದ ಹಂಗು ತೊರೆದು ಕೆಲಸ ಮಾಡಿದ್ದಾರೆ. ಆ ವಿಷಮ ಪರಿಸ್ಥಿತಿಯಲ್ಲಿ 59 ಕಾರ್ಯಕರ್ತೆಯರು ಸೋಂಕಿಗೆ ಬಲಿಯಾಗಿದ್ದಾರೆ. ಅನೇಕರು ಸೋಂಕಿನ ಸಾವಿನ ದವಡೆಯಿಂದ ಪಾರಾಗಿದ್ದಾರೆ. ಸರ್ಕಾರ ಮಾನವೀಯ ನೆಲೆಗಟ್ಟಿನಲ್ಲಿ ಇವರ ಸಮಸ್ಯೆ ಬಗೆಹರಿಸಬೇಕು. ಗ್ರಾಮೀಣ ಮಟ್ಟದಲ್ಲಿ ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಇವರ ನಿರ್ಲಕ್ಷ್ಯ ಸಲ್ಲ. ಗೌರವಧನ ಹೆಚ್ಚಿಸುವ ಜತೆಗೆ, ಎನ್​ಪಿಎಸ್​ ವಂಚಿತರಾಗಿ ನಿವೃತ್ತಿಯಾದ ಎಲ್ಲರಿಗೂ ಪರಿಹಾರ ನೀಡಬೇಕು. ಅದಕ್ಕಾಗಿ ಬಜೆಟ್​ನಲ್ಲಿ 339.49 ಲಕ್ಷ ರೂ. ಮೀಸಲಿಡಬೇಕು ಎಂದು ಸರ್ಕಾರವನ್ನ ಎಚ್​​ಡಿಕೆ ಆಗ್ರಹಿಸಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ʼಪಪ್ಪಾಯʼದಿಂದ ಏನೆಲ್ಲಾ ಆರೋಗ್ಯ ಪ್ರಯೋಜನಗಳಿವೆ ಗೊತ್ತಾ..?

Mon Jan 31 , 2022
  ಪಪ್ಪಾಯ ಹಣ್ಣುಗಳನ್ನು ಕೆಲವರು ಇಷ್ಟಪಡುವುದಿಲ್ಲ. ಆದರೆ, ಒಮ್ಮೆ ಪಪ್ಪಾಯಿ ರುಚಿ ಹಿಡಿಸಿದ್ರೆ ಚಪ್ಪರಿಸಿ ತಿನ್ನುತ್ತಾರೆ. ಸಾಮಾನ್ಯವಾಗಿ ಈ ಹಣ್ಣುಗಳನ್ನು ಉಷ್ಣವಲಯದ ಹವಾಮಾನದಲ್ಲಿ ಬೆಳೆಯಲಾಗುತ್ತದೆ. ಪಪ್ಪಾಯವನ್ನು ಸೇವಿಸುವುದರಿಂದ ಬಾಯಿಗೆ ರುಚಿಯಾಗಿರುವುದು ಮಾತ್ರವಲ್ಲದೆ ವಿವಿಧ ರೀತಿಯ ಆರೋಗ್ಯ ಪ್ರಯೋಜನಗಳು ಇವೆ.ಪಪ್ಪಾಯ ಹಣ್ಣಿನಲ್ಲಿ ವಿಟಮಿನ್ ಸಿ ಹಾಗೂ ಎ ಹೇರಳವಾಗಿದೆ. ಫೈಬರ್ ಅಂಶವೂ ಇದರಲ್ಲಿದೆ. ಹೃದ್ರೋಗ, ಕ್ಯಾನ್ಸರ್ ಬರದಂತೆ ತಡೆಯುತ್ತದೆ. ಜೀರ್ಣಕ್ರಿಯೆಗೆ ಸಹಕಾರಿ, ಮಧುಮೇಹ ಇರುವವರಲ್ಲಿ ರಕ್ತದಲ್ಲಿನ ಗ್ಲೂಕೋಸ್ ನಿಯಂತ್ರಣವನ್ನು ಸುಧಾರಿಸುವುದು, ರಕ್ತದೊತ್ತಡವನ್ನು […]

Advertisement

Wordpress Social Share Plugin powered by Ultimatelysocial