ಅಂಬೇಡ್ಕರ್ ಸಿದ್ಧಾಂತಗಳಿoದ ಪ್ರಭಾವಿತಳಾಗಿದ್ದ ಸಿದ್ದವ್ವ

೧೯೩೯ರಲ್ಲಿ ಬೆಳಗಾವಿಗೆ ಆಗಮಿಸಿದ್ದ ಡಾ.ಬಿ.ಆರ್ ಅಂಬೇಡ್ಕರ್ ಅವರಿಗೆ ತಮ್ಮ ಮನೆಯಲ್ಲಿ ಉಳಿದುಕೊಳ್ಳಲು ಅವಕಾಶ ನೀಡಿ ಉಟೋಪಚಾರ ಮಾಡಿದ್ದ ೯೫ರ‍್ಷ ವಯಸ್ಸಿನ ವಯೋವೃದ್ಧೆ ಸಿದ್ಧವ್ವ ಮೇತ್ರಿ ಇವತ್ತು ಬೆಳಿಗ್ಗೆ ತಮ್ಮ ನಿವಾಸ ಕಂಗ್ರಾಳಿ ಗಲ್ಲಿಯಲ್ಲಿ ಕೊನೆಯುಸಿರೆಳೆದಿದ್ದಾರೆ. ಉಟೋಪಚಾರದಿಂದ ತೀವ್ರ ಸಂತೋಷಗೊಂಡ ಅಂಬೇಡ್ಕರ್ ಅವರು, ನಿಮ್ಮಂತ ಹೆಣ್ಣು ಮಕ್ಕಳು ವಿದ್ಯಾಭ್ಯಾಸ ಮಾಡಿ, ಸಮಾಜದಲ್ಲಿ ಬೆಳೆಯಬೇಕೆಂದು ಸಲಹೆ ನೀಡಿದ್ದರು. ಇದರಿಂದ ತೀವ್ರ ಪ್ರಭಾವಿತಳಾಗಿದ್ದ ಸಿದ್ಧವ್ವ, ಜೀವಿತ ಅವಧಿಯಲ್ಲಿ ಅಂಬೇಡ್ಕರ್ ಸಿದ್ಧಾಂತದ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದರು. ಇವತ್ತು ಬೆಳಿಗ್ಗೆ ೧೨ಗಂಟೆಗೆ ಸದಾಶಿವ ನಗರದ ಸ್ಮಶಾನದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ರಾಜ್ಯದಲ್ಲಿ ಭಂಡ ಸರ್ಕಾರ ಆಡಳಿತ ನಡೆಸುತ್ತಿದೆ- ಮಾಜಿ ಸಚಿವ ರಮಾನಾಥ ರೈ

Sat Aug 1 , 2020
 ರಾಜ್ಯದಲ್ಲಿ ಭಂಡ ಸರ್ಕಾರ ಆಡಳಿತ ನಡೆಸುತ್ತಿದೆ’ ಎಂದು ಮಾಜಿ ಸಚಿವ ರಮಾನಾಥ ರೈ ಕಿಡಿಕಾರಿದರು. ಮಡಿಕೇರಿಯಲ್ಲಿ ಮಾತನಾಡಿದ ಅವರು,‘ವೈದ್ಯಕೀಯ ಉಪಕರಣ ಖರೀದಿಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪ ಬಂದರೂ ತನಿಖೆ ನಡೆಸುತ್ತಿಲ್ಲ. ಅಧಿಕಾರಕ್ಕೆ ಬಿಜೆಪಿಯುವರು ಏನು ಬೇಕಾದರೂ ಮಾಡಲು ಸಿದ್ಧರಿದ್ದಾರೆ. ಇವರಿಗೆ ಜನಹಿತ ಬೇಕಿಲ್ಲ. ಕೋವಿಡ್‌ ಹೆಸರಿನಲ್ಲಿ ದುಡ್ಡು ಹೊಡೆದಿರುವ ಸರ್ಕಾರದ ವಿರುದ್ದ ನಮ್ಮ ಹೋರಾಟ ನಡೆಯುತ್ತಿದೆ. ಪ್ರತಿ ಗ್ರಾಮಕ್ಕೂ ತೆರಳಿ ಸರ್ಕಾರದ ಭ್ರಷ್ಟಾಚಾರದ ಮಾಹಿತಿ ನೀಡುತ್ತೇವೆ’.ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ […]

Advertisement

Wordpress Social Share Plugin powered by Ultimatelysocial