ಅಕ್ಟೋಬರ್ 01ರಿಂದ ಶಾಲಾ,ಕಾಲೇಜುಗಳು ಆರಂಭ

ಕೊರೋನಾ ಭೀತಿಯಿಂದಾಗಿ ಈ ಪ್ರಸ್ತುತ ಸಾಲಿನ ಶಾಲಾ-ಕಾಲೇಜುಗಳ ಶೈಕ್ಷಣಿಕ ತರಗತಿಗಳು ಆರಂಭವಾಗುವುದು ಅನುಮಾನ ಎನ್ನಲಾಗಿತ್ತು. ಆದರೆ, ಅಕ್ಟೋಬರ್‌ 01 ರಿಂದ ಕಾಲೇಜುಗಳು ತೆರೆಯಲಿವೆ, ಎಂದಿನಂತೆ ತರಗತಿಗಳು ಪ್ರಾರಂಭವಾಗಲಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಕೊರೊನಾ ಶುರುವಾದ ನಂತರ ಆನ್‌ಲೈನ್‌ ತರಗತಿ ಕುರಿತು ರಾಜ್ಯಾದ್ಯಂತ ದೊಡ್ಡ ಮಟ್ಟದ ಚರ್ಚೆ ಶುರುವಾಗಿದೆ. ಕೆಲವರು ಆನ್‌ಲೈನ್ ತರಗತಿಗಳು ಬೇಕು ಎಂದರೆ, ಕೆಲವರು ಆನ್‌ಲೈನ್‌ ತರಗತಿಯನ್ನು ವಿರೋಧಪಡಿಸುತ್ತಿದ್ದಾರೆ. ಆದರೆ, ಈ ಎಲ್ಲಾ ಅನುಮಾನಗಳಿಗೆ ರಾಜ್ಯ ಸರ್ಕಾರ ಇಂದು ತೆರೆ ಎಳೆದಿದೆ. ಇಂದು ಪತ್ರಿಕಾಗೋಷ್ಠಿ ನಡೆಸಿ ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡಿರುವ ಡಿಸಿಎಂ ಅಶ್ವತ್ಥ್‌ ನಾರಾಯಣ್, ಕಾಲೇಜು ಮತ್ತು ವಿಶ್ವವಿದ್ಯಾಲಯದ ಮಟ್ಟದಲ್ಲಿ ಸೆಪ್ಟೆಂಬರ್‌ ತಿಂಗಳಿನಿಂದ ಆನ್‌ಲೈನ್‌ ತರಗತಿಗಳು ನಡೆಯಲಿವೆ. ಹಾಗೂ, ಅಕ್ಟೋಬರ್‌ 01 ರಿಂದ ಈ ವರ್ಷದ ಶೈಕ್ಷಣಿಕ ತರಗತಿಗಳು ಎಂದಿನಂತೆ ನಡೆಯಲಿವೆ ಎಂದು ಸ್ಪಷ್ಟಪಡಿಸಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಸಾರ್ವಜನಿಕರ ಪಾತ್ರ ಅತಿಮುಖ್ಯ-ಸ್ವಾತಿ ದರಗಿ ಹೇಳಿಕೆ

Fri Jul 10 , 2020
ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದರ ನಿಯಂತ್ರಣಕ್ಕಾಗಿ ರಾಯಚೂರು ಜಿಲ್ಲೆಯ ಸಿರವಾರ ತಾಲ್ಲೋಕಿನ ಕವಿತಾಳ್ ಪಟ್ಟಣದಲ್ಲಿ ಟಾಸ್ಕ್ ಫೋರ್ಸ್ ಬ್ಲೋಕ್ ಲೇವಲ್ ಕಮಿಟಿ ನಿರ್ಮಾಣ ಮಾಡಲು ಪೂರ್ವ ಭಾವಿ ಸಭೆ ಹಮ್ಮಿಕೊಳ್ಳಲಾಯಿತು. ಸಭೆಯಲ್ಲಿ ಮಾತನಾಡಿದ ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿಯಾದ ಸ್ವಾತಿ ದರಗಿ, ಕೊರೊನಾ ನಿಯಂತ್ರಣ ಮಾಡುವಲ್ಲಿ ಸಾರ್ವಜನಿಕರ ಪಾತ್ರ ಅತಿಮುಖ್ಯ. ಸಮುದಾಯದ ಎಲ್ಲಾ ಜನರು ಸಹಕಾರ ಕೂಡ ಅಷ್ಟೇ ಅಗತ್ಯವಾಗಿರುತ್ತದೆ ಎಂದು ಹೇಳಿದರು.     ಇದೇ […]

Advertisement

Wordpress Social Share Plugin powered by Ultimatelysocial