ಅದ್ದೂರಿಯಾಗಿ ಮಾವಳ್ಳಿಯಲ್ಲಿ ವರಮಹಾಲಕ್ಷ್ಮೀ ಹಬ್ಬ ಆಚರಣೆ

ಶ್ರಾವಣ ಮಾಸ ಎಂದರೆ ಹಬ್ಬಗಳ ಮಾಸ. ಹೆಣ್ಣು ಮಕ್ಕಳಿಗಂತೂ ಪ್ರಿಯವಾದ ಮಾಸ. ಪ್ರತಿಯೊಂದು ಹಬ್ಬದಲ್ಲೂ ಚೆನ್ನಾಗಿ ಅಲಂಕಾರ ಮಾಡಿಕೊಂಡು ಸಡಗರ ಸಂಭ್ರಮದಿಂದ ಖುಷಿಪಡುತ್ತಾರೆ. ಈ ಎಲ್ಲಾ ಹಬ್ಬಗಳಲ್ಲಿ ವರಮಹಾಲಕ್ಷ್ಮಿ ಹಬ್ಬ ಎಂದರೆ ಎಲ್ಲರಿಗೂ ಬಹಳ ಪ್ರಿಯವಾದುದು. ಪ್ರತಿ ವರ್ಷ ಪೌರ್ಣಮಿಯ ಸಮೀಪದ ಶ್ರಾವಣ ಮಾಸದ ಎರಡನೇ ಶುಕ್ರವಾರ ಬರುವ ಈ ವರಲಕ್ಷ್ಮಿ ವ್ರತವನ್ನು ಎಲ್ಲಾ ಮುತ್ತೈದೆಯರು ಭಕ್ತಿ ಶ್ರದ್ಧೆಯಿಂದ ಆಚರಿಸುತ್ತಾರೆ. ಭವಿಷ್ಯೋತ್ತರ ಪುರಾಣದ ಪ್ರಕಾರ, ಲಕ್ಷ್ಮಿಯು ಕ್ಷೀರ ಸಾಗರದಿಂದ ಅವತಾರ ತಾಳಿದಳೆಂದು ಹೇಳಲಾಗುತ್ತದೆ.

ಜುಲೈ 31ಕ್ಕೆ ವರಮಹಾಲಕ್ಷ್ಮಿ ಹಬ್ಬ. ಭಾಗ್ಯದ ಲಕ್ಷ್ಮಿ ಬಾರಮ್ಮಾ… ಎಂದು ಕರೆದು ಲಕ್ಷ್ಮಿಯನ್ನು ಮನೆ ತುಂಬಿಕೊಳ್ಳುವ ಸಮಯ. ಈ ವ್ರತವನ್ನು ಯಾರು ನಿಷ್ಠೆಯಿಂದ ಮಾಡುತ್ತಾರೋ ಅದೃಷ್ಟ ಒಲಿಯುತ್ತದೆ ಹಾಗೂ ಎಲ್ಲಾ ಕೆಲಸದಲ್ಲಿ ಏಳಿಗೆ ಆಗುತ್ತದೆಂಬ ನಂಬಿಕೆಯೂ ಇದೆ. ಹೀಗಾಗಿ ವರಮಹಾಲಕ್ಷ್ಮೀ ಹಬ್ಬ ತನ್ನದೆಯಾದ ಮಹತ್ವವನ್ನ ಪಡೆದುಕೊಂಡಿದೆ. ಕೊರೊನಾ ಸಂದರ್ಭದಲ್ಲಿ ಕೂಡ ಸಿಲಿಕಾನ್ ಸಿಟಿ ಜನ ಹಬ್ಬವನ್ನ ಶ್ರದ್ದಾ ಭಕ್ತಿಯಿಂದ ಪೂಜೆ ಮಾಡುತ್ತಿದ್ದಾರೆ.ಪ್ರತಿ ಮನೆ ಮನೆಯಲ್ಲೂ ಕೂಡ ಸಂಭ್ರಮದಿಂದ ಆಚರಣೆ ಮಾಡಿದ್ದಾರೆ ಅದರಂತೆ ಲಾಲ್ ಬಾಗ್ ನ ಮಾವಳ್ಳಿಯಲ್ಲಿ ಕೂಡ ವಿಜೃಂಭಣೆಯಿಂದ ಹಬ್ಬವನ್ನ ಆಚರಿಸಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

೫ವರ್ಷಗಳಲ್ಲಿ ೧೧ಲಕ್ಷಕೋಟಿ ಬಿಡಿಭಾಗ ಉತ್ಪಾದಿಸಲಾಗುವುದು

Sat Aug 1 , 2020
ಮುಂದಿನ ಐದು ವರ್ಷಗಳಲ್ಲಿ ಪ್ರೊಡಕ್ಷನ್-ಲಿಂಕ್ಡ್ ಇನ್ಸೆಂಟಿವ್ಸ್ (ಪಿಎಲ್‌ಐ) ಯೋಜನೆಯಡಿ ಭಾರತದಲ್ಲಿ ೧೧.೫ ಲಕ್ಷ ಕೋಟಿ ಮೌಲ್ಯದ ಮೊಬೈಲ್ ಫೋನ್ ಹಾಗೂ ಬಿಡಿಭಾಗಗಳನ್ನು ಉತ್ಪಾದಿಸಲಾಗುವುದು ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವ ರವಿಶಂಕರ್ ಪ್ರಸಾದ್ ತಿಳಿಸಿದ್ದಾರೆ. ಪಿಎಲ್‌ಐ ಯೋಜನೆಯಡಿ, ಸುಮಾರು ೨೨ ಕಂಪನಿಗಳು ಅರ್ಜಿ ಸಲ್ಲಿಸಿವೆ. ಈ ಕಂಪನಿಗಳು ಮುಂಬರುವ ಐದು ವರ್ಷಗಳಲ್ಲಿ ಭಾರತದಲ್ಲಿ ೧೧.೫ ಲಕ್ಷ ಕೋಟಿ ಮೌಲ್ಯದ ಮೊಬೈಲ್ ಫೋನ್ ಮತ್ತು ಬಿಡಿಭಾಗಗಳನ್ನು ಉತ್ಪಾದಿಸಲಿವೆ, ಅದರಲ್ಲಿ ೭ […]

Advertisement

Wordpress Social Share Plugin powered by Ultimatelysocial