ಅಧಿವೇಶನ ನಡೆಸುತ್ತಿರುವ ಮೊದಲ ರಾಜ್ಯ

ಆಂಧ್ರಪ್ರದೇಶದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 6720 ಕ್ಕೆ ಏರಿಕೆಯಾಗಿದೆ, 88 ಜನರು ಇದುವರೆಗೂ ಮೃತಪಟ್ಟಿದ್ದಾರೆ. ರಾಜ್ಯದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 3119. ಈ ಕೊರೊನಾ ವೈರಸ್ ಸೋಂಕಿನ ಭೀತಿಯ ನಡುವೆಯೇ ಆಂಧ್ರಪ್ರದೇಶದಲ್ಲಿ ಬಜೆಟ್ ಅಧಿವೇಶನ ಆರಂಭವಾಗಿದೆ. ಕೊರೊನಾ ಸಂದರ್ಭದಲ್ಲಿ ಅಧಿವೇಶನ ನಡೆಸುತ್ತಿರುವ ಮೊದಲ ರಾಜ್ಯ ಇದಾಗಿದ್ದು. ಜೂನ್ 30ರೊಳಗೆ ಬಜೆಟ್‌ಗೆ ಅನುಮೋದನೆ ಪಡೆಯಲಾಗುತ್ತದೆ. ರಾಜ್ಯಪಾಲ ಬಿಸ್ವಾ ಭೂಷಣ್‌ ಹರಿಚಂದನ್‌ ವಿಧಾನಸಭೆಯ ಉಭಯ ಕಲಾಪಗಳನ್ನು ಉದ್ದೇಶಿಸಿ ಮಾತನಾಡುವ ಮೂಲಕ ಬಜೆಟ್ ಅಧಿವೇಶನಕ್ಕೆ ಚಾಲನೆ ನೀಡಿದರು. ರಾಜಭವನದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಅವರು ಕಲಾಪ ಉದ್ದೇಶಿಸಿ ಭಾಷಣ ಮಾಡಿದರು. ಅಧಿವೇಶನದ ಮೊದಲ ದಿನವೇ ಹಣಕಾಸು ಸಚಿವ ಬುಗ್ಗನ್ ರಾಜೇಂದ್ರನಾಥ್ ರೆಡ್ಡಿ ಬಜೆಟ್ ಮಂಡನೆ ಮಾಡಿದರು. ವಿಧಾನಸಭೆಯಲ್ಲಿಯೂ ಸಾಮಾಜಿಕ ಅಂತರ ಕಾಪಾಡಲು ಅಗತ್ಯ ವ್ಯವಸ್ಥೆ ಮಾಡಲಾಗಿದೆ. ಮಾಧ್ಯಮಗಳನ್ನು ಹೊರತುಪಡಿಸಿ ಬೇರೆ ಯಾರೂ ಸಹ ಪ್ರವೇಶ ಮಾಡದಂತೆ ನಿಷೇಧ ಹೇರಲಾಗಿದೆ.

 

Please follow and like us:

Leave a Reply

Your email address will not be published. Required fields are marked *

Next Post

ಪರೀಕ್ಷಾ ಕೇಂದ್ರಗಳಿಗೆ ಸ್ಯಾನಿಟೈಜರ್ ಸಿಂಪಡಣೆ

Wed Jun 17 , 2020
ಕೊವಿಡ್-19 ರೋಗದ ಹಿನ್ನೆಲೆಯಲ್ಲಿ ಜೂ.18ರಂದು ನಿಗದಿಯಾಗಿರುವ ಬಾಕಿ ಉಳಿದಿದ್ದ ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆಗಾಗಿ ಜಿಲ್ಲಾಡಳಿತ ಸರ್ವ ಸಿದ್ದತೆ ಮಾಡಿಕೊಂಡಿದೆ. ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಮುನ್ನೆಚ್ಚರಿಕೆ ಕ್ರಮವಾಗಿ ಕೊಪ್ಪಳ ಜಿಲ್ಲೆಯ ಎಲ್ಲಾ 18 ಪರೀಕ್ಷಾ ಕೇಂದ್ರಗಳಿಗೆ ನಗರಸಭೆ ಪಟ್ಟಣ ಪಂಚಾಯ್ತಿ ಪುರಸಭೆ ಗ್ರಾಮ ಪಂಚಾಯ್ತಿಗಳ ಮೂಲಕ ಸ್ಯಾನಿಟೈಜರ್ ಸಿಂಪಡಣೆ ಮಾಡಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 13892 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಇವರಲ್ಲಿ 792 ವಿದ್ಯಾರ್ಥಿಗಳು ಹೊರಜಿಲ್ಲೆಯಲ್ಲಿ ಓದುತ್ತಿದ್ದು ಆ ವಿದ್ಯಾರ್ಥಿಗಳು […]

Advertisement

Wordpress Social Share Plugin powered by Ultimatelysocial