ಅರಸಿಕೆರೆ ಸಂಪೂರ್ಣ ಸೀಲ್ ಡೌನ್

ಅರಸೀಕೆರೆ  ನಗರದ ಶಾನುಭೋಗರ ಬೀದಿ ಹಾಗೂ ಸಂತೆಪೇಟೆ ಮೈದಾನದ ಮುಖ್ಯರಸ್ತೆ ಯನ್ನು ತಾಲ್ಲೂಕು ಆಡಳಿತ ಹಾಗೂ ನಗರಸಭೆ ವತಿಯಿಂದ ಸಂಪೂರ್ಣ ಸೀಲ್ ಡೌನ್ ಮಾಡಲಾಗಿದೆ. ಆದ್ದರಿಂದ ನಗರದ ಪ್ರಮುಖ ಕಟಿಂಗ್ ಶಾಪ್ ನಲ್ಲಿ ಕೆಲಸ ಮಾಡುವ ಪ್ರಮುಖ ವ್ಯಕ್ತಿಗಳಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಿದ್ದರು. ನಂತರ ಇಬ್ಬರಿಗೆ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಸಂಪೂರ್ಣ ನಗರದ 2 ಬೀದಿಗಳನ್ನು ಸೀಲ್ ಡೌನ್ ಮಾಡಲಾಗಿದೆ, ಎಂದು ತಹಸೀಲ್ದಾರ್ ಸಂತೋಷ್ ಕುಮಾರ್ ತಿಳಿಸಿದರು. ಕೊರೊನಾ ದಿಂದ ಜನ ಭಯಬೀತರಾಗಬಾರದು ಎಂದು ತಹಸೀಲ್ದಾರ್ ಮತ್ತು ತಾಲ್ಲೂಕು ಆರೋಗ್ಯ ಅಧಿಕಾರಿ ನಾಗಪ್ಪ ತಿಳಿಸಿದ್ದಾರೆ. ಈ ವೇಳೆ ನಗರಸಭಾ ವತಿಯಿಂದ ಸ್ಯಾನಿಟೈಸ್ ಸಿಂಪಡಣೆ ಮಾಡಲಾಯಿತು.

 

 

Please follow and like us:

Leave a Reply

Your email address will not be published. Required fields are marked *

Next Post

ನಷ್ಟಕ್ಕೆ ಸಿಲುಕಿದ ರೈತರು

Sun Jun 28 , 2020
ಸೋಯಾಬೀನ್ ಬಿತ್ತನೆ ಮಾಡಿ ನಷ್ಟಕ್ಕೆ ಸಿಲುಕಿದ ರೈತರಿಗೆ ಪರಿಹಾರ ನೀಡಿ ಎಂದು ಮಾಜಿ ಸಚಿವ ಬಂಡೆಪ್ಪ ಕಾಶಂಪೂರ್ ಆಗ್ರಹಿಸಿದರು. ಬೀದರ್ ನಗರದ ಚನ್ನಬಸವ ಪಟ್ಟದ್ದೇವರು ರಂಗ ಮಂದಿರದಲ್ಲಿ  ಸಹಕಾರ ಇಲಾಖೆ ಹಾಗೂ ಬೀದರ್ ಜಿಲ್ಲೆ, ಹಾಗೂ ಸಹಕಾರಿ ಬ್ಯಾಂಕುಗಳ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ಬೀದರ್ ಜಿಲ್ಲೆಯ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ಚೆಕ್ ವಿತರಣಾ  ಸಮಾರಂಭದಲ್ಲಿ ಭಾಗವಹಿಸಿದ್ದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೀದರ್ ಜಿಲ್ಲೆಯಲ್ಲಿ ಕೃಷಿ ಇಲಾಖೆಯಿಂದ ವಿತರಣೆ ಮಾಡಿದ […]

Advertisement

Wordpress Social Share Plugin powered by Ultimatelysocial