ಅಸ್ಸಾಂನಲ್ಲಿ ಭೀಕರ ಪ್ರವಾಹ

ಅಸ್ಸಾ0 ಭೀಕರ ಪ್ರವಾಹದಲ್ಲಿ ೧೦೦ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದು, ಅಪಾರ ಮೌಲ್ಯದ ಆಸ್ತಿ ಪಾಸ್ತಿ ಉಂಟಾಗಿದ್ದು, ಅಗತ್ಯ ಬಿದ್ದರೆ ಭಾರತ ಸರ್ಕಾರಕ್ಕೆ ನೆರವು ನೀಡಲು ಸಿದ್ಧವಿರುವುದಾಗಿ ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ವಕ್ತಾರರೊಬ್ಬರು ತಿಳಿಸಿದ್ದಾರೆ. ಅಸ್ಸಾಂನಲ್ಲಿ ಭೀಕರ ಪ್ರವಾಹದಿಂದಾಗಿ ಸುಮಾರು ೪ ಮಿಲಿಯನ್ ನಷ್ಟು ಜನರು ಸ್ಥಳಾಂತರವಾಗಿರುವ ಬಗ್ಗೆ ಸಹೋದ್ಯೋಗಿಗಳು ತಿಳಿಸಿದ್ದು, ಅಗತ್ಯವಿದ್ದರೆ ಭಾರತ ಸರ್ಕಾರಕ್ಕೆ ನೆರವು ನೀಡುವಾದಿಗ ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ವಕ್ತಾರ ಡುಜಾರಿಕ್ ಹೇಳಿದ್ದಾರೆ.ಅಸ್ಸಾಂನ ೨೪ ಜಿಲ್ಲೆಗಳು ಪ್ರವಾಹದಿಂದ ತತ್ತರಿಸಿದ್ದು, ಸುಮಾರು ೨೪. ೩ ಲಕ್ಷ ಜನರ ಮೇಲೆ ತೀವ್ರ ರೀತಿಯ ಪರಿಣಾಮ ಉಂಟಾಗಿದೆ ಎಂದು ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ. ಭೂಕುಸಿತದಿಂದ ೨೬ ಹಾಗೂ ಪ್ರವಾಹ ಸಂಬ0ಧಿತ ಹಾನಿಯಿಂದಾಗಿ ೮೫ ಜನರು ಮೃತಪಟ್ಟಿರುವುದಾಗಿ ಮಾಹಿತಿ ನೀಡಿದೆ.

Please follow and like us:

Leave a Reply

Your email address will not be published. Required fields are marked *

Next Post

ಮಧ್ಯ ಪ್ರದೇಶ ಮೂಲದ 6 ಜನರ ಬಂಧನ

Tue Jul 21 , 2020
ಬಕ್ರೀದ್ ಹಬ್ಬಕ್ಕಾಗಿ ಬಲಿಕೊಡಲು ತಂದಿದ್ದ 8 ಒಂಟೆಗಳನ್ನು ಕಲಬುರ್ಗಿ ಜಿಲ್ಲೆಯಲ್ಲಿ ರಕ್ಷಣೆ ಮಾಡಲಾಗಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಮೂಲದ 6 ಜನರನ್ನು ಬಂಧಿಸಲಾಗಿದೆ. ಕಲಬುರ್ಗಿ ಜಿಲ್ಲೆ ಆಳಂದ ಠಾಣಾ ವ್ಯಾಪ್ತಿಯಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಆಳಂದ ಪಟ್ಟಣದ ಹಳೆ ಚೆಕ್ ಪೋಸ್ಟ್ ಬಳಿ ಪೊಲೀಸರು ಒಂಟೆಗಳನ್ನು ವಶಕ್ಕೆ ಪಡೆದಿದ್ದಾರೆ. ಮೂಲಗಳ ಪ್ರಕಾರ ಒಂದೊಂದು ಒಂಟೆ 50 ಸಾವಿರ ರೂಪಾಯಿ ಬೆಲೆ ಬಾಳುತ್ತಿವೆ. ಒಟ್ಟು ನಾಲ್ಕು ಲಕ್ಷ ರೂಪಾಯಿ ಮೌಲ್ಯದ ಎಂಟು […]

Advertisement

Wordpress Social Share Plugin powered by Ultimatelysocial