ಆಂಧ್ರದ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅರೆಸ್ಟ್

ಮರಾವತಿ, ಸೆ.9- ಕೌಶಲ್ಯಭಿವೃದ್ದಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥರಾಗಿರುವ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಅವರನ್ನು ಇಂದು ಬಂಧನ ಕ್ಕೊಳಪಡಿಸಲಾಗಿದೆ. ಈ ಹಗರಣದಲ್ಲಿ 371 ಕೋಟಿ ರೂಪಾಯಿ ಅಕ್ರಮ ಮಾಡಲಾಗಿತ್ತು ಎಂಬ ಆರೋಪ ಕೇಳಿ ಬಂದಿತ್ತು.

ಪ್ರಕರಣ ಕುರಿತು ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಅವರು ಸಿಐಡಿಗೆ ವಹಿಸಿದ್ದರು. ಈ ಪ್ರಕರಣದಲ್ಲಿ ಚಂದ್ರಬಾಬು ನಾಯ್ಡು ಅವರು ಎ 1 ಆರೋಪಿಯಾಗಿದ್ದಾನೆ. ಹೈಕೋರ್ಟ್ ಸೂಚನೆಯಂತೆ ಚಂದ್ರಬಾಬು ನಾಯ್ಡು ಅವರನ್ನು ಬಂಧಿಸಲಾಗಿದೆ.

ಪೊಲೀಸರು ನೀಡಿದ ನೋಟಿಸ್ ಪ್ರಕಾರ, ನಾಯ್ಡು ಅವರನ್ನು ಐಪಿಸಿ ಸೆಕ್ಷನ್ 120 (8), 166, 167, 418, 420, 465, 468, 471, 409, 201, 34 37 ಹಾಗೂ ಭ್ರಷ್ಟಾಚಾರ ತಡೆ ಕಾಯಿದೆ, 1988 ಇತರ ವಿಭಾಗಗಳಡಿ ಬಂಧಿಸಲಾಗಿದೆ. ಅಲ್ಲದೇ ನೋಟಿಸ್‍ನಲ್ಲಿ ಜಾಮೀನು ರಹಿತ ಅಪರಾಧ, ಜಾಮೀನಿನ ಮೇಲೆ ಬಿಡುಗಡೆಯಾಗುವಂತಿಲ್ಲ ಎಂದು ತಿಳಿಸಲಾಗಿದೆ. ಆದರೆ, ನ್ಯಾಯಾಲಯದ ಮೂಲಕ ಮಾತ್ರ ಜಾಮೀನು ಪಡೆಯಬಹುದು ಎಂದು ಸಿಐಡಿ ಉಪ ಪೊಲೀಸ್ ವರಿಷ್ಠಾಧಿಕಾರಿ ಎಂ.ಧನುಂಜಯುಡು ಅವರು ತಿಳಿಸಿದ್ದಾರೆ.

ಸನಾತನದ ಧರ್ಮ ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ : ಯೋಗಿ

ನಂದ್ಯಾಲ್ ರೇಂಜ್ ಡಿಐಜಿ ರಘುರಾಮಿ ರೆಡ್ಡಿ ಮತ್ತು ಅಪರಾಧ ತನಿಖಾ ದಳ (ಸಿಐಡಿ) ನೇತೃತ್ವದ ಪೊಲೀಸರ ತಂಡ ನಂದ್ಯಾಲ ಪಟ್ಟಣದಲ್ಲಿ ಆರ್‍ಕೆ ಫಂಕ್ಷನ್ ಹಾಲ್‍ನಲ್ಲಿ ಶಿಬಿರದಲ್ಲಿದ್ದ ಚಂದ್ರಬಾಬು ನಾಯ್ಡು ಅವರನ್ನು ಬೆಳಗಿನ ಜಾವ 3 ಗಂಟೆ ಸುಮಾರಿಗೆ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಈ ಸಂದರ್ಭದಲ್ಲಿ ನಾಯ್ಡು ಅವರು ತಮ್ಮ ಕಾರವಾನ್‍ನಲ್ಲಿ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದರು ಎಂದು ತಿಳಿದುಬಂದಿದೆ.

ಚಂದ್ರಬಾಬು ನಾಯ್ಡು ಅವರನ್ನು ಬಂಧಿಸಲು ಪೊಲೀಸರು ಬಂದಿದ್ದಾರೆ ಎಂಬ ವಿಷಯ ತಿಳಿಯುತ್ತಿದ್ದಂತೆ ಆ ರಾತ್ರಿಯಲ್ಲೂ ಟಿಡಿಪಿ ಕಾರ್ಯಕರ್ತರು ಸ್ಥಳಕ್ಕೆ ಆಗಮಿಸಿ ಪ್ರತಿರೋಧ ಒಡ್ಡಿದರು. ಆದರೆ ಕಾರ್ಯಕರ್ತರ ಪ್ರತಿರೋಧಕ್ಕೆ ಬಗ್ಗದ ಪೊಲೀಸರು ಮತ್ತು ಎಸ್ಪಿಜಿ ಪಡೆಗಳು ಯಾರಿಗೂ ಸಹ ಹತ್ತಿರ ಬರುವಂತೆ ಅನುಮತಿಸಲಿಲ್ಲ. ಮೊದಲೇ ಪ್ಲಾನ್ ಮಾಡಿಕೊಂಡಿದ್ದ ಪೊಲೀಸರು ಎಲ್ಲದಕ್ಕೂ ಸಿದ್ಧರಾಗಿ ಬಂದಂತೆ ಕಾಣುತ್ತಿತ್ತು.

ತೆಲುಗು ದೇಶಂ ಪಕ್ಷದ ಅಧ್ಯಕ್ಷ ಹಾಗೂ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಅವರ ಬಂಧನ ಇಡೀ ಆಂಧ್ರಪ್ರದೇಶದ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ್ದು, ರಾಜಕೀಯ ತಿರುವುಗಳಿಗೆ ಸಾಕ್ಷಿಯಾಗುವ ಸಾಧ್ಯತೆ ಇದೆ.

Please follow and like us:

tmadmin

Leave a Reply

Your email address will not be published. Required fields are marked *

Next Post

ದಾಖಲೆಗಳನ್ನು ಸೃಷ್ಟಿಸುತ್ತಿರುವ ಶಾರುಖ್‌ ಅಭಿನಯದ “ಜವಾನ್” ಸಿನೆಮಾ

Sat Sep 9 , 2023
ಪಠಾಣ್‌ನ ಯಶಸ್ಸಿನ ನಂತರ, ಶಾರುಖ್ ಖಾನ್ ಕಾಲಿವುಡ್‌ ಡೈರೆಕ್ಟರ್‌ ಅಟ್ಲೀ ಅವರೊಂದಿಗೆ  ಜವಾನ್‌ ಚಿತ್ರದೊಂದಿಗೆ ದೊಡ್ಡ ಪರದೆಗೆ ಮರಳಿದ್ದಾರೆ. ಚಿತ್ರದಲ್ಲಿ ನಯನತಾರಾ ನಾಯಕಿಯಾಗಿ ಮತ್ತು ವಿಜಯ್ ಸೇತುಪತಿ ಖಳನಟನಾಗಿ  ನಟಿಸಿದ್ದಾರೆ .  ಸೆಪ್ಟೆಂಬರ್ 7 ರಂದು ಬಿಡುಗಡೆಯಾದ ಈ ಚಿತ್ರವು ಕೇವಲ ಎರಡು ದಿನಗಳಲ್ಲಿ ವಿಶ್ವದಾದ್ಯಂತ   200 ಕೋಟಿ  ಗಳಿಸಿದೆ ಹಾಗು ದಾಖಲೆಗಳನ್ನು ಉರುಳಿಸುತ್ತಲೇ  ಇದೆ. 2ನೇ ದಿನ ಥಿಯೇಟರ್‌ಗಳಲ್ಲಿ ಜವಾನ್ 100 ಕೋಟಿ ರೂ.ಗಳ ಗಡಿ ದಾಟಿದೆ. ಆಕ್ಷನ್-ಡ್ರಾಮಾದ […]

Advertisement

Wordpress Social Share Plugin powered by Ultimatelysocial