ಆಂಧ್ರ: ತಿರುಪತಿಗೆ ತೆರಳುತ್ತಿದ್ದ ಕ್ರೂಸರ್ ಲಾರಿಗೆ ಡಿಕ್ಕಿ: ಐವರು ಸಾವು, 11 ಮಂದಿಗೆ ಗಾಯ

ಆಂಧ್ರಪ್ರದೇಶದ ಅನ್ನಮಯ ಜಿಲ್ಲೆಯಲ್ಲಿ ತಿರುಪತಿಗೆ ತೆರಳುತ್ತಿದ್ದ ಯಾತ್ರಾರ್ಥಿಗಳಿದ್ದ ಕ್ರೂಸರ್ ಶುಕ್ರವಾರ ಬೆಳಗ್ಗೆ ಲಾರಿಗೆ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದಾರೆ ಮತ್ತು ಹನ್ನೊಂದು ಮಂದಿ ಗಾಯಗೊಂಡಿದ್ದಾರೆ… ಅನ್ನಮಯ: ಆಂಧ್ರಪ್ರದೇಶದ ಅನ್ನಮಯ ಜಿಲ್ಲೆಯಲ್ಲಿ ತಿರುಪತಿಗೆ ತೆರಳುತ್ತಿದ್ದ ಯಾತ್ರಾರ್ಥಿಗಳಿದ್ದ ಕ್ರೂಸರ್ ಶುಕ್ರವಾರ ಬೆಳಗ್ಗೆ ಲಾರಿಗೆ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದಾರೆ ಮತ್ತು ಹನ್ನೊಂದು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಾಯಗೊಂಡವರಲ್ಲಿ ಏಳು ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದು, ಮೃತರಲ್ಲಿ ಇಬ್ಬರು ಪುರುಷರು ಮತ್ತು ಮೂವರು ಮಹಿಳೆಯರಿದ್ದಾರೆ ಎಂದು ಹೇಳಿದ್ದಾರೆ.ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ 2.25 ಕೋಟಿ ರೂ. ಪರಿಹಾರ: ಮಡಿಕೇರಿ ಕೋರ್ಟ್ ಆದೇಶ ಒಪ್ಪಿಕೊಂಡ ವಿಮಾ ಕಂಪನಿ​“ಅಪಘಾತದಲ್ಲಿ ಒಟ್ಟು ಐದು ಜನರು ಸಾವನ್ನಪ್ಪಿದ್ದಾರೆ. ಗಾಯಾಳುಗಳ ಪೈಕಿ ಏಳು ಮಂದಿಯ ಸ್ಥಿತಿ ಗಂಭೀರವಾಗಿದೆ.

ಅವರನ್ನು ತಿರುಪತಿ ರೂವಾ ಆಸ್ಪತ್ರೆಗೆ ದಾಖಲಿಸಲಾಗಿದೆ” ಎಂದು ಮೆಥಂಪಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ನಾಗಬಾಬು ಎಎನ್ಐಗೆ ತಿಳಿಸಿದ್ದಾರೆ. ಗಾಯಗೊಂಡವರಲ್ಲಿ ಏಳು ಮಂದಿಯ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಅವರು ಹೇಳಿದ್ದಾರೆ. ಅಪಘಾತಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

Please follow and like us:

tmadmin

Leave a Reply

Your email address will not be published. Required fields are marked *

Next Post

MP Election 2023: ಮಧ್ಯಪ್ರದೇಶದಲ್ಲಿ ಸಿಲಿಂಡರ್ ಬೆಲೆ 450 ರೂ.! ಎಲೆಕ್ಷನ್ ಗೆಲ್ಲಲು ಉಚಿತ ಕೊಡುಗೆ

Fri Sep 15 , 2023
ನವದೆಹಲಿ: ವರ್ಷಾಂತ್ಯದಲ್ಲಿ ಚುನಾವಣೆ ಎದುರಿಸಲಿರುವ ಮಧ್ಯ ಪ್ರದೇಶದಲ್ಲಿ (MP Election 2023) ಮತದಾರರನ್ನು ಓಲೈಸುವ ಕಸರತ್ತು ಜೋರಾಗಿ ನಡೆಯುತ್ತಿದೆ. ಆಡಳಿತ ಪಕ್ಷವಾಗಿರುವ ಬಿಜೆಪಿ (BJP) ಮತ್ತೆ ಅಧಿಕಾರಕ್ಕೇರುವ ತಂತ್ರ ಹೆಣೆಯುತ್ತಿದ್ದು, ಅಡುಗೆ ಅನಿಲ ಸಿಲಿಂಡರ್ (Gas Cylinder) ಬೆಲೆಯನ್ನು ಕನಿಷ್ಠ ಮಟ್ಟಕ್ಕೆ (Price Cut) ಇಳಿಕೆ ಮಾಡಿದೆ. ಮಧ್ಯ ಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ (CM Shivraj Singh Chouhan) ಅವರು, ಮಧ್ಯ ಪ್ರದೇಶದಲ್ಲಿ 450 ರೂ.ಗೆ ಸಿಲಿಂಡರ್ ನೀಡುವುದಾಗಿ ಹೇಳಿದ್ದಾರೆ. ಬಹುಶಃ […]

Advertisement

Wordpress Social Share Plugin powered by Ultimatelysocial