ಆತ್ಮಹತ್ಯೆಗೆ ಶರಣಾದ ಕಂದಾಯ ಇಲಾಖೆ ಲೆಕ್ಕಾಧಿಕಾರಿ ̤

 

ಕಾರವಾರ: ಕಂದಾಯ ಇಲಾಖೆ ಲೆಕ್ಕಾಧಿಕಾರಿಯೊಬ್ಬರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ಉತ್ತರ ಕನ್ನಡ ಜಿಲ್ಲೆ ಕಾರವಾರದಲ್ಲಿ ನಡೆದಿದೆ.ಈಶ್ವರ್ ಭಟ್ (38) ಆತ್ಮಹತ್ಯೆಗೆ ಶರಣಾದ ಕಾರವಾರ ಉಪವಿಭಾಗ ಕಚೇರಿ ಕಂದಾಯ ಇಲಾಖೆ ಲೆಕ್ಕಾಧಿಕಾರಿ.ಕಾರವಾರದ ಪ್ರಿಮಿಯರ್ ಹೋಟೆಲ್ ನ ರೂಮಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.ಸಾವಿಗೂ ಮುನ್ನ ಈಶ್ವರ್ ಭಟ್ ಬರೆದಿಟ್ಟಿರುವ ಡೆತ್ ನೋಟ್ ಪತ್ತೆಯಾಗಿದ್ದು, ತಾನು ಹೆಂಡತಿ ಮಕ್ಕಳಿಗಾಗಿ ಯಾವುದೇ ಆಸ್ತಿ ಮಾಡಿಟ್ಟಿಲ್ಲ ತನ್ನನ್ನು ಕ್ಷಮಿಸು. ಮಕ್ಕಳನ್ನು ಚೆನ್ನಾಗಿ ನೋಡಿಕೊ ಎಂದು ಬರೆದಿದ್ದಾರೆ.ಅನಾರೋಗ್ಯ ಕಾರಣದಿಂದ ಈಶ್ವರ್ ಭಟ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಕಾರವಾರ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಉತ್ತರಪ್ರದೇಶ: ಸಹರಾನ್‌ಪುರದಲ್ಲಿ ಮೂವರು ವ್ಯಕ್ತಿಗಳಿಂದ ಚಾಕು ತೋರಿಸಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ; ಆರೋಪಿ ಅತ್ಯಾಚಾರದ ವಿಡಿಯೋ ವೈರಲ್

Thu Feb 3 , 2022
  ಉತ್ತರ ಪ್ರದೇಶದಲ್ಲಿ ಮಹಿಳೆಯರ ಮೇಲಿನ ಅಪರಾಧಗಳಿಗೆ ಕೊನೆಯೇ ಇಲ್ಲದಂತಾಗಿದೆ. ಮತ್ತೊಂದು ಆಘಾತಕಾರಿ ಘಟನೆಯಲ್ಲಿ, ಮಹಿಳೆಯೊಬ್ಬಳು ಕಾಡು ಸಂಗ್ರಹಿಸಲು ಹೊಲಕ್ಕೆ ಹೋದಾಗ ಚಾಕುವಿನಿಂದ ಮೂವರು ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಸಹರಾನ್‌ಪುರ ಜಿಲ್ಲೆಯ ಫತೇಪುರ್ ಪೊಲೀಸ್ ಠಾಣೆ ವ್ಯಾಪ್ತಿಯ ಚುಟ್ಮಲ್‌ಪುರ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಆರೋಪಿಗಳು ಕೃತ್ಯದ ವಿಡಿಯೋವನ್ನು ಕೂಡ ಚಿತ್ರೀಕರಿಸಿ ವೈರಲ್ ಮಾಡಿದ್ದಾರೆ. ಆರೋಪಿಗಳಲ್ಲಿ ಒಬ್ಬ ವೃದ್ಧನೂ ಸೇರಿದ್ದಾನೆ. ಆರೋಪಿಗಳು ಅತ್ಯಾಚಾರದ ವಿಡಿಯೋವನ್ನು ವೈರಲ್ ಮಾಡಿದ ನಂತರ ವಿಷಯ […]

Advertisement

Wordpress Social Share Plugin powered by Ultimatelysocial