ಆನ್ ಲೈನ್ ಮೂಲಕ ಮಾದಪ್ಪನ ದರ್ಶನಕ್ಕೆ ಅವಕಾಶ

ಚಾಮರಾಜನಗರ : ರಾಜ್ಯದ ಪ್ರಮುಖ ದೇಗುಲಗಳಲ್ಲೊಂದಾದ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ದೇಗುಲದಲ್ಲಿ ಇಂದಿನಿಂದ ಆನ್‌ಲೈನ್ ದರ್ಶನ ಸೇವೆ ಆರಂಭವಾಗಿದೆ. ಲಾಕ್‌ಡೌನ್ ಹಿನ್ನೆಲೆಯಲ್ಲಿ ದೇಗುಲಕ್ಕೆ ಭಕ್ತರ ಪ್ರವೇಶ ನಿರ್ಬಂಧ ಇರುವುದರಿಂದ ಪ್ರಾಧಿಕಾರದ ವೆಬ್‌ಸೈಟ್ WWW.mmhillstemple.com ನಲ್ಲಿ ಬೆಳಗ್ಗೆ 4 ರಿಂದ 5.30 ರವರೆಗೆ ಹಾಗೂ ಸಂಜೆ 6.45 ರಿಂದ 8 ರವರೆಗೆ ನಡೆಯುವ ಅಭಿಷೇಕವನ್ನು ಭಕ್ತರು ಆನ್‌ಲೈನ್ ಮೂಲಕ ಕಣ್ಣುಂಬಿಕೊಳ್ಳಬಹುದಾಗಿದೆ.ಆನ್‌ಲೈನ್ ಮೂಲಕವೇ ಭಕ್ತರು ಸೇವೆಯನ್ನು ಕಾಯ್ದಿರಿಸಿ ತಮ್ಮ ತಮ್ಮ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸಬಹುದು. ರಾಜ್ಯದೊಳಗಿನ ಭಕ್ತಾದಿಗಳಿಗೆ ಅಂಚೆ ಮೂಲಕ ಬಿಲ್ವಪತ್ರೆ, ವಿಭೂತಿ, ಒಣದ್ರಾಕ್ಷಿಯನ್ನು ಕಳುಹಿಸಿಕೊಡಲಾಗುವುದು ಎಂದು ಶ್ರೀ ಕ್ಷೇತ್ರ ಮಲೆಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮಿ ಮಾಹಿತಿ ನೀಡಿದ್ದಾರೆ. ಪಂಚ ಕಳಸ ಸಮೇತ ನವರತ್ನ ಕಿರೀಟ ಧಾರಣೆಗೆ 600 ರೂ., ಏಕದಶವಾರ ರುದ್ರಾಭಿಷೇಕ, ನವರತ್ನ ಕಿರೀಟ ಧಾರಣೆಗೆ 750 ರೂ., ರುದ್ರಾಭಿಷೇಕಕ್ಕೆ 300 ರೂ., ಅಷ್ಟೋತ್ತರ ಬಿಲ್ವಾರ್ಚನೆ 300 ರೂ., ಪಂಚಾಮೃತ ಅಭಿಷೇಕ 300 ರೂ., 1 ತಾಸು ವಿದ್ಯುತ್ ದೀಪಾಲಂಕಾರಕ್ಕೆ 1200 ರೂ., ಅರ್ಧ ತಾಸಿಗೆ 750., ಕಾಲು ತಾಸಿಗೆ 500 ರೂ., ಹುಲಿ ವಾಹನ, ಬೆಳ್ಳಿ ವಾಹನ, ಬಸವ ವಾಹನ ಸೇವೆಗೆ 200 ರೂ., ನಿಗದಿ ಪಡಿಸಲಾಗಿದೆ. ಇನ್ನೂ ಕೋವಿಡ್ -19 ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಉದ್ದೇಶದಿಂದ ಮಹಾರುದ್ರಾಭಿಷೇಕ, ರುದ್ರತ್ರಿಶತಿ, ನಾಮಕರಣ, ಲಾಡು ಸೇವೆ, ಕಜ್ಜಾಯ ಸೇವೆ, ಬಂಗಾರದ ರಥೋತ್ಸವ, ಸಂಕಷ್ಟಹರ ಚತುರ್ಥಿ, ಉರೊಟ್ಟಿನ ಸೇವೆ, ಅನ್ನ ಬ್ರಹೋತ್ಸವ ಸೇವೆಗಳನ್ನು ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ ಎಂದು ಪ್ರಾಧಿಕಾರ ತಿಳಿಸಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಬೀದರ್ ಕ್ಷೇತ್ರದ ಶಾಸಕರಿಂದ ಪ್ರಧಾನಮಂತ್ರಿಗೆ ಮನವಿ

Fri May 29 , 2020
ಬೀದರ್ : ತಾವು 20 ಲಕ್ಷ ಕೋಟಿ ಪ್ಯಾಕೇಜ್ ಘೋಷಣೆ ಮಾಡಿದ್ದೀರಿ ಆದರೆ ಕಡು ಬಡವರಿಗೆ  ಯಾವುದೆ ಲಾಭವಾಗಿಲ್ಲ, ಅದರ ಬದಲು ತಾವು ಪ್ರತಿಯೊಬ್ಬ ಬೀದಿ ವ್ಯಾಪಾರಿಗಳಿಗೆ ಕಡು ಬಡವರಿಗೆ ತಲಾ 10, 000 ರೂಪಾಯಿಯಂತ್ತೆ ನೇರವಾಗಿ ಬ್ಯಾಂಕ್ ಖಾತೆಯಲ್ಲಿ ಹಾಕಿದರೆ ಅವರಿಗೆ 2, 3 ತಿಂಗಳು ಕುಟುಂಬಕ್ಕೆ ಸಹಾಯವಾಗುತ್ತದೆ ಎಂದು ಪ್ರಧಾನಮಂತ್ರಿಗಳಿಗೆ ಬೀದರ್ ಕ್ಷೇತ್ರದ ಶಾಸಕ ರಹೀಮ್ ಖಾನ್ ಮನವಿ ಮಾಡಿದ್ದಾರೆ. ಹೊರರಾಜ್ಯದಲ್ಲಿ ಲಾಕ್ ಡೌನ್ ನಲ್ಲಿ ಸಿಲುಕಿರುವ […]

Advertisement

Wordpress Social Share Plugin powered by Ultimatelysocial