ಆರೋಗ್ಯ ಇಲಾಖೆ ಅಧಿಕಾರಿಗಳ ಕರ್ತವ್ಯ ಲೋಪ

ಕೊರೊನಾ ವೈರಸ್ ಪಾಸಿಟಿವ್ ವ್ಯಕ್ತಿಗೆ ಆ್ಯಂಬುಲೆನ್ಸ್ ವ್ಯವಸ್ಥೆ ಕಲ್ಪಿಸದೆ ಆರೋಗ್ಯ ಇಲಾಖೆ ಅಧಿಕಾರಿಗಳು ಕರ್ತವ್ಯ ಲೋಪ ಎಸಗಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಕೊರೊನಾ ಸೋಂಕು ದೃಢವಾದ ವ್ಯಕ್ತಿಗೆ ಚಿಕಿತ್ಸೆ ಸಿಗದೆ ಮನೆಯಲ್ಲಿಯೇ ನರಳಾಟ ಅನುಭವಿಸಿದ್ದಾನೆ ಎಂದು ತಿಳಿದು ಬಂದಿದೆ. ಜುಲೈ 13 ರಂದು ಕೊರೊನಾ ವೈರಸ್ ಪರೀಕ್ಷೆ ಮಾಡಿಸಿದ್ದ 33 ವರ್ಷದ ವ್ಯಕ್ತಿಗೆ ನಿನ್ನೆ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ.  ಚಿತ್ರದುರ್ಗದ ನೆಹರೂ ನಗರದ ಮನೆಯಲ್ಲಿ ವಾಸವಿರುವ ಸೋಂಕಿತ ವ್ಯಕ್ತಿಯನ್ನು ಕೋವಿಡ್ ಆಸ್ಪತ್ರೆಗೆ ಕರೆದೊಯ್ಯಲು ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ. ಸೋಂಕಿತ ವ್ಯಕ್ತಿಯು ಮನೆಯ ಕೊಠಡಿಯಲ್ಲಿಯೇ ಕ್ವಾರಂಟೈನ್ ಆಗಿದ್ದಾರೆ ಎನ್ನಲಾಗಿದೆ. ವ್ಯಕ್ತಿಗೆ ಕೊರೊನಾ ಸೋಂಕು ದೃಢವಾದ ಬಳಿಕ ಅಧಿಕಾರಿಗಳು ಮನೆಯ ಸುತ್ತಮುತ್ತಲಿನ ಪ್ರದೇಶವನ್ನು ಸೀಲ್ ಡೌನ್ ಮಾಡಿದ್ದು, ನಗರಸಭೆಯಿಂದ ಸ್ಯಾನಿಟೈಸರ್ ಸಿಂಪಡಿಸಲಾಗಿದೆ. ಸೋಂಕಿತ ವ್ಯಕ್ತಿಯನ್ನು ಆಸ್ಪತ್ರೆಗೆ ಕರೆದೊಯ್ಯಲು ಆ್ಯಂಬುಲೆನ್ಸ್ ವ್ಯವಸ್ಥೆ ಕಲ್ಪಿಸಲು ಕುಟುಂಬಸ್ಥರು ಮನವಿ ಮಾಡಿದ್ದಾರೆ. ಇದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಉಸ್ತುವಾರಿ ಜಿಲ್ಲೆಯ ಆರೋಗ್ಯ ಅಧಿಕಾರಿಗಳ ಕರ್ತವ್ಯ ಲೋಪ ಕಂಡು ಬಂದಿದ್ದರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.

Please follow and like us:

Leave a Reply

Your email address will not be published. Required fields are marked *

Next Post

ಬಿಜೆಪಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ಧ್ವನಿ

Wed Jul 22 , 2020
ಘಾಜಿಯಾಬಾದ್​ನಲ್ಲಿ ನಡೆದ ಪತ್ರಕರ್ತನ ಕೊಲೆ ಪ್ರಕರಣವನ್ನು ಖಂಡಿಸಿ ಕಾಂಗ್ರೆಸ್​ ಸಂಸದ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. ಉತ್ತರ ಪ್ರದೇಶದ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಅಧಿಕಾರಕ್ಕೆ ಬರುವಾಗ ಜನರಿಗೆ ರಾಮರಾಜ್ಯ ಸ್ಥಾಪನೆಯ ಭರವಸೆ ನೀಡಿತ್ತು. ಆದರೆ ಈಗ ಗೂಂಡಾ ರಾಜ್ಯ ನಿರ್ಮಾಣ ಮಾಡಿದೆ ಎಂದು ಕಟುವಾಗಿ ಆರೋಪಿಸಿದ್ದಾರೆ. ಪತ್ರಕರ್ತ ವಿಕ್ರಂ ಜೋಶಿ ಅವರು ತಮ್ಮ ಸಹೋದರಿಗೆ ದುಷ್ಕರ್ಮಿಗಳು ಕಿರುಕುಳ ನೀಡಿದ್ದನ್ನು ವಿರೋಧಿಸಿ ಜೀವ ಕಳೆದುಕೊಂಡರು. ಅವರ ಕುಟುಂಬಕ್ಕೆ […]

Advertisement

Wordpress Social Share Plugin powered by Ultimatelysocial