ಆಶಾ ಕಾರ್ಯಕರ್ತೆಯರಿಂದ ತೀವ್ರ ಹೋರಾಟ

ಬೀದರ್ ಜಿಲ್ಲೆಯಲ್ಲಿ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಪ್ರತಿಭಟನೆ ೨೦ದಿನ ಪೂರೈಸಿದೆ. ಜುಲೈ ೧೦ರಿಂದ ಆಶಾ ಕಾರ್ಯಕರ್ತೆಯರಿಂದ ಆರೋಗ್ಯ ಸೇವೆ ಸ್ಥಗಿತಗೊಳಿಸಿ ತೀವ್ರ ಹೋರಾಟ ನಡೆಯುತ್ತಿದೆ. ಆದರೆ ಸರಕಾರ ಈವರೆಗೂ ತಮ್ಮ ಬೇಡಿಕೆಗಳಿಗೆ ಸ್ಪಂದಿಸಿಲ್ಲ, ಮಾತುಕತೆಯನ್ನೂ ನಡೆಸಿಲ್ಲ ಎನ್ನುವುದು ಅವರ ಆರೋಪವಾಗಿದೆ. ಪ್ರೋತ್ಸಾಹಧನ ಮತ್ತು ಗೌರವಧನ ಎರಡನ್ನೂ ಒಟ್ಟಿಗೆ ಸೇರಿಸಿ ಮಾಸಿಕ ಒಂದೇ ನಿಶ್ಚಿತ ಗೌರವಧನ ರೂ.೧೨,೦೦೦ ಪ್ರತಿ ತಿಂಗಳು ನೀಡಬೇಕು ಎನ್ನುವುದು ಪ್ರಧಾನ ಬೇಡಿಕೆಯಾಗಿದೆ. ಸೋಂಕಿತರ ನಡುವೆ ದಿನನಿತ್ಯವೂ ಕೆಲಸ ಮಾಡುವ ಈ ಕಾರ್ಯಕರ್ತೆಯರ ಆರೋಗ್ಯರಕ್ಷಣೆ ಸರ್ಕಾರದ ಜವಾಬ್ದಾರಿಯಾಗಿದೆ. ಆದರೆ, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಈ ಕಾರ್ಯಕರ್ತೆಯರಿಗೆ ಅಗತ್ಯವಾಗಿ ಬೇಕಾದ ಮಾಸ್ಕ್, ಫೇಸ್ಶೀಲ್ಡ್, ಹ್ಯಾಂಡ್‌ಗ್ಲೌಸ್, ಸ್ಯಾನಿಟೈಜ್‌ರ ಇತ್ಯಾದಿಗಳನ್ನು ನೀಡಲಾಗಿಲ್ಲ. ಅದರಿಂದ ಅವರೆಲ್ಲರೂ ಮುಖಕ್ಕೆ ಕರವಸ್ತçವನ್ನು ಕಟ್ಟಿಕೊಂಡು ಸೋಂಕಿತರ ನಡುವೆ ಕೆಲಸ ಮಾಡುತ್ತಿದ್ದಾರೆ. ಅದರಿಂದಾಗಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸೋಂಕು ತಗುಲಿಸಿಕೊಂಡು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸರ್ಕಾರವೇ ಅಂದಾಜು ಮಾಡಿರುವಂತೆ ಈ ಮುಂದಿನ ದಿನಗಳಲ್ಲಿ ಸೋಂಕು ಇನ್ನೂ ವ್ಯಾಪಕವಾಗಿ ಹರಡುವ ಸಾಧ್ಯತೆ ಹೆಚ್ಚು ಇರುವುದರಿಂದ, ಪ್ರತಿ ದಿನವೂ ಜನರೊಂದಿಗೆ ಬೆರೆತು ಕೆಲಸ ಮಾಡುವ ಆಶಾಕಾರ್ಯಕರ್ತೆಯರು ಹೆಚ್ಚು ಸೋಂಕಿಗೆ ಬಲಿಯಾಗುವ ಸಾಧ್ಯತೆ ಇದೆ. ಆದ್ದರಿಂದ ಕೊರೊನಾ ಸೋಂಕು ನಿಯಂತ್ರಿಸಲು ಅಮೂಲ್ಯವಾದ ಸೇವೆಸಲ್ಲಿಸುತ್ತಿರುವ ಆಶಾಕಾರ್ಯಕರ್ತೆಯರ ಆರೋಗ್ಯವನ್ನು ರಕ್ಷಿಸುವ ಎಲ್ಲಾ ರಕ್ಷಣಾಸಾಮಗ್ರಿಗಳನ್ನು ಸಾಕಷ್ಟು ಪ್ರಮಾಣದಲ್ಲಿ ನೀಡಬೇಕೆನ್ನುವುದು ಅವರ ಮತ್ತೊಂದು ಬೇಡಿಕೆ. ಈ ಸಂದರ್ಭದಲ್ಲಿ ಮುಂತಾದ ಆಶಾಕಾರ್ಯಕರ್ತೆಯರು

Please follow and like us:

Leave a Reply

Your email address will not be published. Required fields are marked *

Next Post

ವಿಜಯಪುರ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿ ನೇಮಕ 

Thu Jul 30 , 2020
ವಿಜಯಪುರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಪೊಮ್ಮಲ ಸುನೀಲ್ ಕುಮಾರ್ ಅಧಿಕಾರ ಸ್ವೀಕರಿಸಿದರು. ಈ ಮೊದಲಿದ್ದ ವೈ.ಎಸ್.ಪಾಟೀಲ ಇವರನ್ನು ಮೈಸೂರಿನ ಆಡಳಿತ ತರಬೇತಿ ಕೇಂದ್ರದ ನಿರ್ದೇಶಕರಾಗಿ ವರ್ಗಾಯಿಸಲಾಗಿದೆ.  ಪೊಮ್ಮಲ ಸುನೀಲ್‍ ಕುಮಾರ್ ಅವರು ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡರು.  ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಔದ್ರಮಾ ಪುಷ್ಪ ಗುಚ್ಚ ನೀಡಿ‌ ಸ್ವಾಗತಿಸಿದರು.  ಪೊಮ್ಮಲ ಸುನೀಲ್‍ ಕುಮಾರ್ ಅವರು 2011ನೇ ಬ್ಯಾಚ್ ಐಎಎಸ್ ಅಧಿಕಾರಿ ಯಾಗಿದ್ದಾರೆ. ಕೊಪ್ಪಳ ಜಿಲ್ಲಾಧಿಕಾರಿ ಯಾಗಿ ಕಾರ್ಯನಿರ್ವಹಿಸಿದ್ದರು ಇದೀಗ ವಿಜಯಪುರ ಜಿಲ್ಲೆಯ ಜಿಲ್ಲಾಧಿಕಾರಿಗಳಾಗಿ […]

Advertisement

Wordpress Social Share Plugin powered by Ultimatelysocial