ಆಸ್ಪತ್ರೆಯಿಂದ ಪರಾರಿಯಾದ ಆರೋಪಿ

ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಮತ್ತೊಂದು ಆತಂಕಕಾರಿ ಘಟನೆ ನಡೆದಿದೆ. ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಸೋಂಕು ದೃಢಪಟ್ಟಿದ್ದ ಆರೋಪಿ ಇಂದು ಮುಂಜಾನೆ ತಪ್ಪಿಸಿಕೊಂಡಿದ್ದು, ಸ್ಥಳೀಯರಲ್ಲಿ ಆತಂಕ ಹೆಚ್ಚಿಸಿದೆ. ಹುಬ್ಬಳ್ಳಿಯ ಉಪನಗರ ಠಾಣೆಯ ಪೊಲೀಸರು ಕಳ್ಳತನದ ಆರೋಪದ ಮೇಲೆ ಓರ್ವನನ್ನು ಬಂಧಿಸಿದ್ದರು. ಕಳೆದ ಎರಡು ದಿನಗಳ ಹಿಂದೆ ಆತನಿಗೆ ಅನಾರೋಗ್ಯ ಹಿನ್ನಲೆಯಲ್ಲಿ ಕಿಮ್ಸ್ ಗೆ ದಾಖಲು ಮಾಡಲಾಗಿತ್ತು. ವೈದ್ಯಕೀಯ ತಪಾಸಣೆ ವೇಳೆ ಅವರಿಗೆ ಸೋಂಕು ತಗುಲಿದೆ ಎಂದು ದೃಢಪಟ್ಟಿತ್ತು. ಆದರೆ ಇಂದು ಮುಂಜಾನೆ ಹೊತ್ತಿಗೆ ಆತನ ವಾರ್ಡ್ ಬಳಿ ಇದ್ದ ಇಬ್ಬರು ಪೊಲೀಸ್ ಸಿಬ್ಬಂದಿ ಕಣ್ತಪ್ಪಿಸಿ ಸೋಂಕಿತ ಆರೋಪಿ ಆಸ್ಪತ್ರೆಯಿಂದ ಪರಾರಿಯಾಗಿದ್ದಾನೆ. ಆದರೆ ಆತ ವಾರ್ಡ್ ನಿಂದ ತೆರಳುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸೋಂಕಿತ ನಾಪತ್ತೆಯಾಗಿರುವುದು ಆಸ್ಪತ್ರೆ ಸಿಬ್ಬಂದಿ ಹಾಗೂ ಸ್ಥಳೀಯರಲ್ಲಿ ಭೀತಿ ಉಂಟು ಮಾಡಿದೆ.

 

 

 

Please follow and like us:

Leave a Reply

Your email address will not be published. Required fields are marked *

Next Post

ಸೋಂಕಿತರ ಅಂತ್ಯಕ್ರಿಯೆಗೆ ೩೫ ಎಕರೆ ಜಮೀನು

Fri Jul 3 , 2020
ಕೋವಿಡ್-19 ಸೋಂಕಿತರ ಅಂತ್ಯಕ್ರಿಯೆಗೆ ಬೆಂಗಳೂರು ನಗರ ಜಿಲ್ಲಾಡಳಿತದಿಂದ ಸರ್ಕಾರದ ಸ್ವತ್ತಿನ 35 ಎಕರೆ 18 ಗುಂಟೆ ಸ್ಥಳವನ್ನು ಗುರುತಿಸಲಾಗಿದೆ. ಹಾಗೂ ಬಿಬಿಎಂಪಿ ವ್ಯಾಪ್ತಿಯಲ್ಲಿ ವಿದ್ಯುತ್ ಚಿತಾಗಾರಗಳನ್ನು ಬಳಕೆ ಮಾಡಲಾಗುತ್ತಿದೆ. ಸೋಂಕಿನಿಂದ ಸಾವನ್ನಪ್ಪಿದವರನ್ನು ಸಾಮಾನ್ಯ ಸ್ಮಶಾನ ಗಳಲ್ಲಿ ಅಂತ್ಯಕ್ರಿಯೆ ಮಾಡಲು ಸಾರ್ವ ಜನಿಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರ ಈ ಕ್ರಮಕ್ಕೆ ಮುಂದಾಗಿದ್ದು, ಸರ್ಕಾರದ ಗೋಮಾಳ ಜಮೀನುಗಳಲ್ಲಿ ಮೃತರ ಅಂತ್ಯಕ್ರಿಯೆಗೆ ಅವಕಾಶ ನೀಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ […]

Advertisement

Wordpress Social Share Plugin powered by Ultimatelysocial