ಇನ್ನೂ 15 ದಿನ ಲಾಕ್ ಡೌನ್ ವಿಸ್ತರಿಸುವಂತೆ ಗೋವಾ ಸಿಎಂ ಮನವಿ

ಪಣಜಿ: ಮೇ 31 ರಂದು ಲಾಕ್‌ಡೌನ್  ಮುಕ್ತಾಯಗೊಳ್ಳಲಿದ್ದು, ಜೂನ್ 1 ರ ಬಳಿಕ ಏನು ಕಾರ್ಯತಂತ್ರ ಅನುಸರಿಸಬೇಕು ಎಂಬುದರ ಕುರಿತು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಹಿನ್ನೆಲೆಯಲ್ಲಿ ಲಾಕ್‌ಡೌನ್ 5.0 ಜಾರಿ ಮಾಡಬೇಕು ಎಂದು ಆಗ್ರಹಿಸಿರುವ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್.  ಇನ್ನೂ ಎರಡು ವಾರವಾದರೂ ಅಂದರೆ ಜೂನ್ 15ರವರೆಗೂ ಲಾಕ್‌ಡೌನ್ ಮುಂದುವರೆಸಬೇಕೆಂದು ಹೇಳಿದ್ದಾರೆ. ಈ ಕುರಿತು ಮಾತನಾಡಿರುವ ಪ್ರಮೋದ್ ಸಾವಂತ್, ದೇಶದಲ್ಲಿ ಕೊರೊನಾ ವೈರಸ್ ಪ್ರಕರಣಗಳನ್ನು ಹೆಚ್ಚುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು ಲಾಕ್‌ಡೌನ್‌ನ್ನು ವಿಸ್ತರಿಸಬೇಕು ಎಂದು ಆಗ್ರಹಿಸಿದ್ದಾರೆ.ಈ ಕುರಿತು ತಾವು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಮಾತನಾಡಿದ್ದು, ಹೆಚ್ಚುತ್ತಿರುವ ಕೊರೊನಾ ವೈರಸ್ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಜೂನ್ 15ರವರೆಗೆ ಲಾಕ್‌ಡೌನ್ ಅವಧಿಯನ್ನು ವಿಸ್ತರಿಸುವಂತೆ ಮನವಿ ಮಾಡಿಕೊಂಡಿರುವುದಾಗಿ ಪ್ರಮೋದ್ ಸಾವಂತ್ ಸ್ಪಷ್ಟಪಡಿಸಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಪಾರ್ಟಿಯೊಂದರಲ್ಲಿ ಕುಣಿಯುತ್ತಿದ್ದ ಮಹಿಳೆಯ ನಿಗೂಡ ಸಾವು

Fri May 29 , 2020
ಹೈದರಾಬಾದ್ ನ ಮೀನಾಕ್ಷಿ ಟವರ್ ನಲ್ಲಿ ಆಯೋಜಿಸಿದ್ದ ಪಾರ್ಟಿಯೊಂದರಲ್ಲಿ ಭಾಗವಹಿಸಿದ ಆಂಧ್ರ ಪ್ರದೇಶದ ಬಿಜೆಪಿ ಅಧ್ಯಕ್ಷರಾದ  ಕನ್ನಾ ಲಕ್ಷ್ಮಿ ನಾರಾಯಣ್ ರವರ ಸೊಸೆ ಸುಹಾರಿಕ ರೆಡ್ಡಿ ಸುಮಾರು ಒಂದು ಗಂಟೆಯವರೆಗೆ ಕುಣಿದು ಕುಪ್ಪಳಿಸಿ ನಂತರ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಮೃತಪಟ್ಟಿರುವುದು ಆತಂಕ ಅಲ್ಲದೇ ಸಾಕಷ್ಟು ಅನುಮಾನಗಳನ್ನು ಮೂಡಿಸಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ‌. ಇನ್ನು ಈ ಸಂಬಂಧ ಮಧುಪುರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ, ಹಾಗೂ ಪೊಲೀಸ್ […]

Advertisement

Wordpress Social Share Plugin powered by Ultimatelysocial