ಇಮ್ರಾನ್‌ ಖಾನ್‌ ಅವರ ‘ಪಾಕಿಸ್ತಾನ್‌ ತೆಹ್ರೀಕ್ ಎ ಇನ್ಸಾಫ್‌ ‘

 

ಲಾಹೋರ್‌: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಅವರ ‘ಪಾಕಿಸ್ತಾನ್‌ ತೆಹ್ರೀಕ್ ಎ ಇನ್ಸಾಫ್‌ ‘ (ಪಿಟಿಐ) ಪಕ್ಷದ 8 ಮಂದಿ ಸಾಮಾಜಿಕ ಮಾಧ್ಯಮ ಕಾರ್ಯಕರ್ತರನ್ನು ಬಂಧಿಸಲಾಗಿದೆ. ಅವರ ವಿರುದ್ಧ ಪಾಕ್‌ ಸೇನಾ ಮುಖ್ಯಸ್ಥ ಜ.

ಖಮರ್‌ ಜಾವೇದ್‌ ಬಾಜ್ವಾ ಹಾಗೂ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳ ವಿರುದ್ಧ ನಿಂದನೆ ಹಾಗೂ ಅಪಪ್ರಚಾರ ನಡೆಸಿದ ಆರೋಪ ಹೊರಿಸಲಾಗಿದೆ.

ಪಂಜಾಬ್‌ನ ವಿವಿಧ ಪ್ರದೇಶಗಳಲ್ಲಿದ್ದ 8 ಮಂದಿ ಪಿಟಿಐ ಕಾರ್ಯಕರ್ತರನ್ನು ಪಾಕಿಸ್ತಾನದ ಫೆಡರಲ್‌ ಇನ್ವೆಸ್ಟಿಗೇಷನ್‌ ಏಜೆನ್ಸಿ (ಎಫ್‌ಐಎ) ಮಂಗಳವಾರ ಬಂಧಿಸಿದೆ.

ಮಾರ್ಚ್‌ 8ರಂದು ಇಮ್ರಾನ್‌ ಖಾನ್‌ ತಮ್ಮ ಸರ್ಕಾರ ವಿರುದ್ಧದ ‘ಅವಿಶ್ವಾಸ ನಿರ್ಣಯ’ದಲ್ಲಿ ಪರಾಭವಗೊಂಡು, ಪ್ರಧಾನಿ ಹುದ್ದೆಯಿಂದ ಪದಚ್ಯುತಗೊಳ್ಳುತ್ತಿದ್ದಂತೆ ಟ್ವಿಟರ್‌ನಲ್ಲಿ ಜ. ಬಾಜ್ವಾ ವಿರುದ್ಧದ ಆಪಾದನೆಗಳನ್ನು ಒಳಗೊಂಡ ಅಭಿಯಾನ ಟ್ರೆಂಡಿಂಗ್‌ನಲ್ಲಿತ್ತು.

‘ಸೇನಾ ಮುಖ್ಯಸ್ಥ ಮತ್ತು ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳ ವಿರುದ್ಧದ ಸಾವಿರಾರು ಟ್ವೀಟ್‌ಗಳ ಮೂಲಕ ಅಪಪ್ರಚಾರದಲ್ಲಿ ಭಾಗಿಯಾಗಿದ್ದ 50 ಮಂದಿ ಶಂಕಿತರ ಪಟ್ಟಿಯನ್ನು ಗುಪ್ತಚರ ಸಂಸ್ಥೆಗಳು ನೀಡಿದ್ದವು. ಈ ಪೈಕಿ 8 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಎಫ್‌ಐಎ ಹೇಳಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಗೌತಮ್ ಅದಾನಿ ಮತ್ತು ಮುಖೇಶ್ ಅಂಬಾನಿ ಫೋರ್ಬ್ಸ್ ವಿಶ್ವದ ಟಾಪ್-10 ಶ್ರೀಮಂತರ ಪಟ್ಟಿಯಲ್ಲಿ!

Wed Apr 13 , 2022
  ವಿಶ್ವದ ಟಾಪ್ 10 ಶ್ರೀಮಂತ ಬಿಲಿಯನೇರ್‌ಗಳ ಪಟ್ಟಿಯಲ್ಲಿ ಇದೀಗ ಇಬ್ಬರು ಭಾರತೀಯರು ಸ್ಥಾನ ಪಡೆದಿದ್ದಾರೆ. ಗೌತಮ್ ಅದಾನಿ ಮತ್ತು ಮುಖೇಶ್ ಅಂಬಾನಿ ಫೋರ್ಬ್ಸ್ ವಿಶ್ವದ ಟಾಪ್-10 ಶ್ರೀಮಂತರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. 2022 ರ ವಿಶ್ವದ ಟಾಪ್-10 ಬಿಲಿಯನೇರ್‌ಗಳು ಯಾರ್ಯಾರು ಬನ್ನಿ ನೋಡೋಣ..ಟೆಸ್ಲಾ ಸಿಇಒ ಎಲೋನ್ ಮಸ್ಕ್ ಡಾಲರ್ 274.3 ಬಿಲಿಯನ್ ಡಾಲರ್ ನಿವ್ವಳ ಮೌಲ್ಯವನ್ನು ಹೊಂದಿದ್ದಾರೆ. ಈ ಸಮಯದಲ್ಲಿ ಅವರು ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿದ್ದಾರೆ. ಅವರ […]

Advertisement

Wordpress Social Share Plugin powered by Ultimatelysocial