ಇವತ್ತು ಚಿನ್ನದ ಬೆಲೆ, ಇಳಿಕೆಯಾಗಿದೆ ಆಭರಣ ಖರೀದಿಸಲು ಸರಿಯಾದ ಸಮಯ

 

Gold Rate on Jan 28, 2022: ದೇಶದಲ್ಲಿಂದು ಚಿನ್ನದ ಬೆಲೆ (Gold Price)ಯಲ್ಲಿ ಇಳಿಕೆಯಾಗಿದೆ. ಬೆಂಗಳೂರಿನಲ್ಲಿ (Bengaluru) ಸಹ ಇಂದು ಬಂಗಾರದ ಬೆಲೆ ಕಡಿಮೆಯಾಗಿದೆ. ಭಾರತದಲ್ಲಿ ನಿನ್ನೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 45,900 ರೂ. ಇತ್ತು. ಇಂದು 400 ರೂ. ಕಡಿಮೆಯಾಗಿ 45,500 ರೂ. ಆಗಿದೆ. ಅಂತೆಯೇ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ನಿನ್ನೆ 49,830 ರೂ. ಇತ್ತು.
ಇಂದು 190 ರೂ. ಕಡಿಮೆಯಾಗಿ 49,640 ರೂ. ಆಗಿದೆ. ಇನ್ನು, ಬೆಂಗಳೂರು ಸೇರಿ ದೇಶದ ವಿವಿಧ ನಗರಗಳಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ದರ ಎಷ್ಟಿದೆ ಎಂಬುದನ್ನು ವಿವರವಾಗಿ ನೋಡೋಣ.
ಬೆಂಗಳೂರಿನಲ್ಲಿ ಚಿನ್ನದ ಬೆಲೆ ಎಷ್ಟಿದೆ..?
ನೀವು ಚಿನ್ನ ಖರೀದಿಸುವ ಪ್ಲ್ಯಾನ್‌ ಮಾಡುತ್ತಿದ್ದೀರಾ, ಹಾಗಾದ್ರೆ ದೇಶದ ಪ್ರಮುಖ ನಗರಗಳಲ್ಲಿ ಇಂದು ಚಿನ್ನಕ್ಕೆ ಎಷ್ಟು ಬೆಲೆ ಇದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ (Gold Price) 50,100 ರೂ. ಇತ್ತು. ಇಂದು 460 ರೂ. ಇಳಿಕೆಯಾಗಿ 49,640 ರೂ. ಆಗಿದೆ. ಅದೇ ರೀತಿ 22 ಕ್ಯಾರೆಟ್ 10 ಗ್ರಾಂ ಚಿನ್ನ ನಿನ್ನೆ 45,900 ರೂ. ಇತ್ತು. ಇಂದು 400 ರೂ. ಇಳಿಕೆಯಾಗಿ 45,500 ರೂ. ಆಗಿದೆ. ಇನ್ನು, ರಾಜ್ಯದ ಇತರೆ ಪ್ರಮುಖ ನಗರಗಳಾದ ಮೈಸೂರು, ಮಂಗಳೂರಿನಲ್ಲೂ ಇದೇ ಬೆಲೆ ಇದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಥೈರಾಯ್ಡ್‌ ಬಗ್ಗೆ ಅನುಮಾನಗಳಿಗೆ ಇಲ್ಲಿದೆ ಸಲಹೆ

Fri Jan 28 , 2022
  ಥೈರಾಯ್ಡ್.. ಇದು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ಕೇಳುತ್ತಿರುವ ಆರೋಗ್ಯ ಸಮಸ್ಯೆಗಳಲ್ಲಿ ಒಂದು. ಅದರಲ್ಲೂ ಪುರಷರಿಗಿಂತ ಮಹಿಳೆಯರಲ್ಲೇ ಈ ಸಮಸ್ಯೆ ಹೆಚ್ಚಾಗಿ ಕಾಡುತ್ತಿದೆ. ಆದರೆ, ಕೆಲವೊಮ್ಮೆ ಥೈರಾಯ್ಡ್ ಬಗ್ಗೆ ಸೂಕ್ತ ಮಾಹಿತಿ ಇಲ್ಲದೇ ಎಲ್ಲಾ ಲಕ್ಷಣಗಳನ್ನೂ ಥೈರಾಯ್ಡ್ ಎಂಬ ಭಾವಿಸಿ, ಅದಕ್ಕೆ ಅನೌಚಾರಿಕೆ ಚಿಕಿತ್ಸೆ ಪಡೆಯುತ್ತಿರುವುದು ಇನ್ನಷ್ಟು ಸಮಸ್ಯೆ ಹೆಚ್ಚಳಕ್ಕೆ ಕಾರಣವಾಗುತ್ತಿದೆ ಎನ್ನುವುದು ಅಧ್ಯಯನಗಳಿಂದ ತಿಳಿದು ಬರುತ್ತಿದೆ. ಹೀಗಾಗಿ ಥೈರಾಯ್ಡ್ ಬಗ್ಗೆ ಸೂಕ್ತ ಅರಿವು ಮೂಡಿಸುವ ದೃಷ್ಟಿಯಿಂದ ಜನವರಿ ತಿಂಗಳನ್ನು […]

Advertisement

Wordpress Social Share Plugin powered by Ultimatelysocial