ಈ ವರ್ಷದಿಂದ ‘ಮರು ಮೌಲ್ಯಮಾಪನದಲ್ಲಿ ‘ಒಂದು ಅಂಕ ಹೆಚ್ಚು’ ಬಂದರೂ ಪರಿಗಣನೆ.

ಬೆಂಗಳೂರು : ದ್ವಿತೀಯ ಪಿಯು ಮುಖ್ಯ ಪರೀಕ್ಷೆಯ )ಉತ್ತರ ಪತ್ರಿಕೆ ಮರುಮೌಲ್ಯಮಾಪನ ವ್ಯವಸ್ಥೆಯಲ್ಲಿ ಸುಧಾರಣೆ ತರಲಾಗಿದ್ದು, ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಗೆ ‘ಒಂದು ಅಂಕ’ ಹೆಚ್ಚು ಬಂದರೂ ಪರಿಗಣಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಈ ಕುರಿತಂತೆ ಮಾಹಿತಿ ನೀಡಿರುವಂತ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಸಚಿವ ಬಿ.ಸಿ ನಾಗೇಶ್ ( Minister BC Nagesh ) ಅವರು, 2023ರ ಮಾರ್ಚ್‌ನಲ್ಲಿ ನಡೆಯುವ ‘ವಾರ್ಷಿಕ ಪರೀಕ್ಷೆ’ಯಿಂದ ಈ ಹೊಸ ನಿಯಮ ಅನ್ವಯವಾಗಲಿದೆ. ಹಾಲಿ ಇರುವ ನಿಯಮದ ಪ್ರಕಾರ, ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗೆ ಪತ್ರಿಕೆಯ ಒಟ್ಟು ಅಂಕದ ಶೇ.6ರಷ್ಟು ಅಂಕ ಅಥವಾ ಅದಕ್ಕಿಂತ ಹೆಚ್ಚು ಅಂಕಗಳು ಬಂದಲ್ಲಿ ಮಾತ್ರ ಪರಿಗಣಿಸಲಾಗುತ್ತಿತ್ತು. ಶೇ.6ಕ್ಕಿಂತ ಕಡಿಮೆ ಅಂಕಗಳು ಬಂದಲ್ಲಿ ಪರಿಗಣಿಸುತ್ತಿರಲಿಲ್ಲ ಎಂದಿದ್ದಾರೆ.

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪ್ರತಿಯೊಂದು ಅಂಕವು ಮುಖ್ಯವಾಗುತ್ತದೆ. ಈ ಹಿನ್ನೆಲೆಯಲ್ಲಿ ‘ಒಂದು ಅಂಕ’ವನ್ನೂ ಪರಿಗಣಿಸುವ ‘ವಿದ್ಯಾರ್ಥಿ ಸ್ನೇಹಿ’ ಕ್ರಮವನ್ನು ರಾಜ್ಯ ಸರ್ಕಾರ ತೆಗೆದುಕೊಂಡಿದೆ ಎಂದು ತಿಳಿಸಿದ್ದಾರೆ.

ಈ ಸಂಬಂಧ ಶೀಘ್ರದಲ್ಲೇ ‘ಕರ್ನಾಟಕ ಪದವಿಪೂರ್ವ ಶಿಕ್ಷಣ ರಾಜ್ಯ ಮಟ್ಟದ ಪಬ್ಲಿಕ್ ಪರೀಕ್ಷೆ ನಿಯಮಗಳು-1997’ಕ್ಕೆ ತಿದ್ದುಪಡಿ ತರಲು ಕ್ರಮ ವಹಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

 

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬಿಎಸ್‍ವೈ ಹೆಸರು ಮರೆತ ಬೊಮ್ಮಾಯಿ : ಪ್ರಧಾನಿ ಮೋದಿ & ಜನರ ಆಶೀರ್ವಾದದಿಂದ ಸಿಎಂ ಆಗಿದ್ದೇನೆ

Fri Feb 10 , 2023
  ದಾವಣಗೆರೆ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ತಾವು ಸಿಎಂ ಆದ ವಿಚಾರವನ್ನು ಬಿಚ್ಚಿಟ್ಟಿದ್ದಾರೆ. ದಾವಣಗೆರೆಯ ಹರಿಹರ ತಾಲೂಕಿನ ರಾಜನಹಳ್ಳಿಯ ವಾಲ್ಮೀಕಿ ಜಾತ್ರೆಯಲ್ಲಿ ಗುರುವಾರ ಮಾತನಾಡಿದ ಅವರು, ‘ನಾನೇನು ಬಯಸಿ ಬಯಸಿ ಸಿಎಂ ಆದವನಲ್ಲ. ಪ್ರಧಾನಿ ಮೋದಿ ಹಾಗೂ ಜನರ ಆಶೀರ್ವಾದದಿಂದ ಸಿಎಂ ಆಗಿದ್ದೇನೆ’ ಎಂದು ಹೇಳಿದರು. ಸಿಎಂ ಆದ ವಿಚಾರ ಬಿಚ್ಚಿಟ್ಟ ಬೊಮ್ಮಾಯಿಯವರು ಈ ವೇಳೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರ ಹೆಸರು ಹೇಳಲು ಮರೆತರು. ‘ನಿಮ್ಮ ಆಶೀರ್ವಾದ ವ್ಯರ್ಥವಾಗಲು ಬಿಡುವುದಿಲ್ಲ. ನನ್ನ […]

Advertisement

Wordpress Social Share Plugin powered by Ultimatelysocial