ಉಡುಪಿ ಬಳಿಕ ಬೆಳಗಾವಿ ಜಿಲ್ಲೆಯಲ್ಲೂ ಹಿಜಾಬ್ ವಿವಾದ : ಕೇಸರಿ ಶಾಲು ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿಗಳು

ಬೆಳಗಾವಿ : ರಾಜ್ಯದ ಕರಾವಳಿಯ ಕಾಲೇಜುಗಳಲ್ಲಿ ಹಿಜಾಬ್ ವಿವಾದದ ಬೆನ್ನಲ್ಲೇ ಬೆಳಗಾವಿ ಜಿಲ್ಲೆಯ ಕಾಲೇಜುಗಳಲೂ ಹಿಜಾಬ್ ವಿವಾ ಆರಂಭವಾಗಿದೆ. ಕೇಸರಿ ಶಾಲು ಧರಿಸಿ ಕಾಲೇಜಿಗೆ ವಿದ್ಯಾರ್ಥಿಗಳು ಆಗಮಿಸಿರುವ ಘಟನೆ ನಡೆದಿದೆ.ಬೆಳಗಾವಿ ಜಿಲ್ಲೆಯ ರಾಮದುರ್ಗದ ಸರ್ಕಾರಿ ಪಿಯು ಕಾಲೇಜಿನ(PUC College) ವಿದ್ಯಾರ್ಥಿಗಳು ಶಾಲು ಧರಿಸಿ ಕಾಲೇಜಿಗೆ ಬಂದಿದ್ದಾರೆ.ಕೇಸರಿ ಶಾಲು ಧರಿಸಿ ಕಾಲೇಜಿಗೆ ಆಗಮಿಸುತ್ತಿದ್ದಂತೆ ಸ್ಥಳಕ್ಕೆ ತೆರಳಿದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಕೂಡಲೇ ಕೇಸರಿ ಶಾಲು ತೆಗಸಿ ವಿದ್ಯಾರ್ಥಿಗಳಿಗೆ ಬುದ್ಧಿವಾದ ಹೇಳಿದ್ದಾರೆ. ಉಡುಪಿ, ಕುಂದಾಪುರ, ಭದ್ರಾವತಿ, ಚಿಕ್ಕಮಗಳೂರಿನ ಕೊಪ್ಪ ಕಾಲೇಜಿನಲ್ಲಿ ಹಿಜಾಬ್​ ಧರಿಸಲು ಅವಕಾಶ ಬೇಕು ಎಂದು ಒಂದು ಕಡೆ ವಿದ್ಯಾರ್ಥಿಗಳು ಬೇಡಿಕೆ ಇಟ್ಟರೆ ಮತ್ತೊಂದು ಕಡೆ ಇದನ್ನು ವಿರೋಧಿಸುತ್ತಿರುವ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜುಗಳಿಗೆ ಆಗಮಿಸುತ್ತಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಅಕ್ರಮವಾಗಿ ವಶಪಡಿಸಿಕೊಂಡಿರುವ ಪ್ರದೇಶದಲ್ಲಿ ಚೀನಾದ ಪ್ಯಾಂಗಾಂಗ್ ಸೇತುವೆ: ಸರ್ಕಾರ

Sat Feb 5 , 2022
  ಪ್ಯಾಂಗೊಂಗ್ ಸರೋವರದ ಮೇಲೆ ಚೀನಾ ನಿರ್ಮಿಸಿದ ಸೇತುವೆಯು 1962 ರಿಂದ ಚೀನಾದ ಕಡೆಯಿಂದ “ಅಕ್ರಮ ಆಕ್ರಮಣ” ದಲ್ಲಿರುವ ಪ್ರದೇಶಗಳಲ್ಲಿದೆ ಎಂದು ಭಾರತ ಶುಕ್ರವಾರ ಹೇಳಿದೆ ಮತ್ತು ದೇಶದ ಪ್ರಾದೇಶಿಕ ಸಮಗ್ರತೆಯನ್ನು ಇತರ ರಾಷ್ಟ್ರಗಳು ಗೌರವಿಸಬೇಕೆಂದು ನವದೆಹಲಿ ನಿರೀಕ್ಷಿಸುತ್ತದೆ. ಲಡಾಖ್ ವಲಯದ ಆಯಕಟ್ಟಿನ ಸರೋವರದ ಉತ್ತರ ಮತ್ತು ದಕ್ಷಿಣ ದಂಡೆಗಳನ್ನು ಸಂಪರ್ಕಿಸುವ ಸೇತುವೆಯ ಕುರಿತು ಸರ್ಕಾರದ ನಿಲುವನ್ನು ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ವಿ ಮುರಳೀಧರನ್ ಲೋಕಸಭೆಯಲ್ಲಿ ಹಲವಾರು ಸಂಸದರ […]

Advertisement

Wordpress Social Share Plugin powered by Ultimatelysocial