ಉದಯನಿಧಿ ವಿರುದ್ಧ ಮಹಾರಾಷ್ಟ್ರದಲ್ಲಿ ಎಫ್‍ಐಆರ್

ಥಾಣೆ, ಸೆ.13- ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ಬಗ್ಗೆ ನೀಡಿರುವ ಹೇಳಿಕೆಗಳ ದೂರಿನ ಮೇರೆಗೆ ಇಲ್ಲಿನ ಮೀರಾರೋಡ್ ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಇತ್ತೀಚೆಗೆ ಸನಾತನ ಧರ್ಮವು ಜನರಲ್ಲಿ ವಿಭಜನೆ ಮತ್ತು ತಾರತಮ್ಯವನ್ನು ಉತ್ತೇಜಿಸುತ್ತಿದೆ ಅದನ್ನು ನಿರ್ಮೂಲನೆ ಮಾಡಬೇಕು ಎಂದು ಹೇಳಿದ್ದರು.

ಸ್ಥಳೀಯ ನಿವಾಸಿಗಳ ದೂರಿನ ಆಧಾರದ ಮೇಲೆ, ಮೀರಾ ರೋಡ್ ಪೊಲೀಸರು ಮಂಗಳವಾರ ರಾತ್ರಿ ಸ್ಟಾಲಿನ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 295-ಎ (ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು, ಯಾವುದೇ ವರ್ಗದ ಧರ್ಮ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವ ಮೂಲಕ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶದಿಂದ ಎಫ್‍ಐಆರ್ ದಾಖಲಿಸಿದ್ದಾರೆ. ) ಮತ್ತು 153-ಎ (ಧರ್ಮ, ಜನಾಂಗ, ಹುಟ್ಟಿದ ಸ್ಥಳ, ನಿವಾಸ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಎಫ್‍ಐಆರ್ ದಾಖಲಾಗಿದೆ ಎಂದು ಹೇಳಿದರು.

ಉಗ್ರರ ಜೊತೆ ಗುಂಡಿನ ಚಕಮಕಿ ವೇಳೆ ಯೋಧನ ಜೀವ ಉಳಿಸಿ ಪ್ರಾಣ ಬಿಟ್ಟ ಸೇನಾ ಶ್ವಾನ

ಎಫ್‍ಐಆರ್‍ನ ಪ್ರಕಾರ ಸನಾತನ ಧರ್ಮವನ್ನು ಅನುಸರಿಸುವವರ ಭಾವನೆಗಳು ಮತ್ತು ಧಾರ್ಮಿಕ ಭಾವನೆಗಳಿಗೆ ಸ್ಟಾಲಿನ್ ಅವರ ಹೇಳಿಕೆ ನೋವುಂಟು ಮಾಡಿದೆ ಎಂದು ದೂರುದಾರರು ತಿಳಿಸಿದ್ದಾರೆ.

Please follow and like us:

tmadmin

Leave a Reply

Your email address will not be published. Required fields are marked *

Next Post

ನಾಳೆ ಮಧ್ಯಪ್ರದೇಶ, ಛತ್ತೀಸ್‌ಗಢಕ್ಕೆ ಪ್ರಧಾನಿ ಭೇಟಿ: ವಿವಿಧ ಯೋಜನೆಗಳಿಗೆ ಉದ್ಘಾಟನೆ, ಶಂಕುಸ್ಥಾಪನೆ

Wed Sep 13 , 2023
ಹೊಸದಿಗಂತ ಡಿಜಿಟಲ್‌ ಡೆಸ್ಕ್: ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢಕ್ಕೆ ಭೇಟಿ ನೀಡಲಿದ್ದು, ಮಧ್ಯಪ್ರದೇಶದಲ್ಲಿ 50 ಸಾವಿರದ 700 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಛತ್ತೀಸ್‌ಗಢದಲ್ಲಿ ಪ್ರಧಾನಿ ಮೋದಿ ಅವರು ಸುಮಾರು ಆರು ಸಾವಿರದ 350 ಕೋಟಿ ರೂಪಾಯಿ ಮೌಲ್ಯದ ಪ್ರಮುಖ ರೈಲು ಕ್ಷೇತ್ರದ ಯೋಜನೆಗಳನ್ನು ದೇಶಕ್ಕೆ ಸಮರ್ಪಿಸಲಿದ್ದಾರೆ. ಇದೇ ವೇಳೆ ಛತ್ತೀಸ್‌ಗಢದ ಒಂಬತ್ತು ಜಿಲ್ಲೆಗಳಲ್ಲಿ 50 ಹಾಸಿಗೆಗಳ ಕ್ರಿಟಿಕಲ್ ಕೇರ್ […]

Advertisement

Wordpress Social Share Plugin powered by Ultimatelysocial