ಎಸ್‌ಎಸ್‌ಎಲ್‌ಸಿ ಪರೀಕ್ಷೆ ರದ್ದು ಮಾಡುವುದಿಲ್ಲ

ಕೆಲವು ರಾಜ್ಯಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ರದ್ಧು ಮಾಡಿರುವಂತೆ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ರದ್ದು ಮಾಡುವುದಿಲ್ಲ ಎಂದು ಆರೋಗ್ಯ ಸಚಿವ ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ. ಮಡಿಕೇರಿಯಲ್ಲಿ ಮಾತನಾಡಿದ ಅವರು, ಪರೀಕ್ಷೆಗೆ ಬರುವ ವಿದ್ಯಾರ್ಥಿಗಳು ಆತಂಕ ಪಡುವ ಅಗತ್ಯವಿಲ್ಲ. ಪರೀಕ್ಷಾ ಕೇಂದ್ರಕ್ಕೆ ವಿದ್ಯಾರ್ಥಿಗಳು ಒಂದು ಗಂಟೆ ಮುಂಚಿತವಾಗಿಯೇ ಬರಲು ವ್ಯವಸ್ಥೆ ಮಾಡಲಾಗುವುದು. ಎಲ್ಲಾ ವಿದ್ಯಾರ್ಥಿಗಳಿಗೆ ತಪ್ಪದೇ ಥರ್ಮಲ್ ಸ್ಕ್ರೀನಿಂಗ್ ಮಾಡಲಾಗುವುದು. ಅಲ್ಲದೆ ಸ್ಯಾನಿಟೈಸರ್ ಕೂಡ ಮಾಡಲಾಗುವುದು. ಅದಕ್ಕಾಗಿ ಆರೋಗ್ಯ ಮತ್ತು ಶಿಕ್ಷಣ ಇಲಾಖೆಯಿಂದ ವಿಶೇಷ ಸಿದ್ಧತೆ ಮಾಡಿಕೊಳ್ಳಲಾಗಿದೆ. ಇನ್ನು ಗ್ರಾಮೀಣ ಭಾಗಗಳಿಂದ ಬರುವ ವಿದ್ಯಾರ್ಥಿಗಳಿಗೆ ಓಡಾಡಲು ಸಮಸ್ಯೆಯಾದಲ್ಲಿ ಅಂತ ವಿದ್ಯಾರ್ಥಿಗಳಿಗೆ ಉಳಿದುಕೊಳ್ಳಲು ಹಾಸ್ಟೆಲ್ ವ್ಯವಸ್ಥೆ ಕೂಡ ಮಾಡಿದ್ದೇವೆ. ಹೀಗಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ರದ್ದು ಮಾಡುವ ಪ್ರಮೇಯವೇ ಇಲ್ಲ” ಎಂದು ಹೇಳಿದರು.

Please follow and like us:

Leave a Reply

Your email address will not be published. Required fields are marked *

Next Post

ಜಿಂದಾಲ್ ನೌಕರರಿಗೆ ವಕ್ಕರಿಸಿದ ಕೊರೊನಾ..!

Wed Jun 10 , 2020
ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆ, ಜಿಂದಾಲ್ ನ 20 ನೌಕರರಿಗೆ ಕೊರೊನಾ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದೆ. ಈಗಾಗಲೆ 13 ನೌಕರರಲ್ಲಿ ಸೋಂಕು ಧೃಢ ಪಟ್ಟಿದೆ.ಈ ಸಂಬಂಧ ಬಳ್ಳಾರಿ ಡಿಸಿ ನಕುಲ್, ಜಿಂದಾಲ್ ಮುಖ್ಯಸ್ಥರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ನೌಕರರ ಬಗ್ಗೆ ಯಾವ ರೀತಿ ಕಾಳಜಿವಹಿಸಿದ್ದೀರಿ? ಈ ಕುರಿತು ಕೂಡಲೆ ಮಾಹಿತಿ ನೀಡಬೇಕೆಂದು ತಾಕೀತು ಮಾಡಿದ್ದಾರೆ. ಸಿಬ್ಬಂದಿಯ ನಿರ್ಲಕ್ಷ್ಯದಿಂದ ಸೋಂಕು ಹರಡಿರುವ ಸಾಧ್ಯತೆ ಕಂಡುಬಂದಿದೆ. Please follow and like us:

Advertisement

Wordpress Social Share Plugin powered by Ultimatelysocial