ಐಟಿ ಇಲಾಖೆ ಮಾಹಿತಿ ಬರುವವರೆಗೂ ಪ್ರತಿಕ್ರಿಯೆ ನೀಡಲು ಆಗುವುದಿಲ್ಲ: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌

ನೀರಾವರಿ ಇಲಾಖೆ ವಿಚಾರವಾಗಿ ಗುತ್ತಿಗೆದಾರರು ಹಾಗೂ ಯಡಿಯೂರಪ್ಪ ಅವರ ಆಪ್ತ ಸಹಾಯಕರ ಮನೆ ಮೇಲೆ ತೆರಿಗೆ ಇಲಾಖೆ ದಾಳಿ ನಡೆದಿದೆ ಎಂದು ಮಾಧ್ಯಮಗಳಲ್ಲಿ ನೋಡಿದೆ. ಇದರ ಹಿಂದೆ ಅನೇಕ ಲೆಕ್ಕಾಚಾರಗಳಿವೆ. ತೆರಿಗೆ ಇಲಾಖೆ ಕಡೆಯಿಂದ ಅಧಿಕೃತ ಹೇಳಿಕೆ ಬರುವವರೆಗೂ ನಾವು ಪ್ರತಿಕ್ರಿಯೆ ನೀಡಲು ಆಗುವುದಿಲ್ಲ. ಏಕಾಏಕಿಯಾಗಿ ಇದು ರಾಜಕೀಯ ಪ್ರೇರಿತ ಎಂದು ಹೇಳಲು ನನ್ನ ಬಳಿ ಖಚಿತ ಮಾಹಿತಿ ಇಲ್ಲ. ಯಾರ ಮನೆಯಲ್ಲಿ ಎಷ್ಟು ಹಣ ಸಿಕ್ಕಿದೆ, ಏನು ದಾಖಲೆ ಸಿಕ್ಕಿದೆ ಎಂದು ಮಾಹಿತಿ ಬರುವವರೆಗೂ ಮಾತನಾಡಲು ಸಾಧ್ಯವಿಲ್ಲ. ಆಂತರಿಕ ರಾಜಕೀಯ ಇದ್ದೇ ಇರುತ್ತದೆ.

ಕೇಂದ್ರದಲ್ಲಿ ಬಿಜೆಪಿ ಸರ್ಕಾರವೇ ಅಧಿಕಾರದಲ್ಲಿದೆ. ಅವರು ಯಾರನ್ನಾದರೂ ನಿಯಂತ್ರಣಕ್ಕೆ ತೆಗೆದುಕೊಳ್ಳಬೇಕು ಎಂದರೆ ಅದನ್ನು ಮಾಡುತ್ತಾರೆ. ಆತ ಯಡಿಯೂರಪ್ಪ ಅವರ ಆಪ್ತ ಸಹಾಯಕ ಅಲ್ಲ ಎಂದು ಹೇಳಲು ಸಾಧ್ಯವಿಲ್ಲ ಅಲ್ಲವೇ? ಕೇವಲ ಅವರು ಮಾತ್ರವಲ್ಲ. ಈ ಹಿಂದೆ ಇದ್ದ ಮಾಜಿ ನೀರಾವರಿ ಮಂತ್ರಿಗಳ ಮೇಲೆ ವಿಚಾರಣೆ ನಡೆಯಲಿದೆ ಎಂಬ ಮಾಹಿತಿ ಬಂದಿದೆ. ಕೆಲವು ಮಂತ್ರಿಗಳು ಕೂಡ ನಮ್ಮ ಮನೆ ಮೇಲೆ ದಾಳಿ ಮಾಡಬೇಡಿ ಎಂದು ದೆಹಲಿಯಲ್ಲಿ ಹೋಗಿ ಮನವಿ ಮಾಡಿದ್ದರು ಎಂಬ ಮಾಹಿತಿ ಇದೆ.  ಐಟಿ ದಾಳಿ ಒಂದೆರಡು ದಿನಗಳಲ್ಲಿ ಮಾಡುವ ವಿಚಾರವಲ್ಲ. ಇದರ ಹಿಂದೆ ಪ್ಲಾನ್ ಇರುತ್ತದೆ. ಕೆಲವರನ್ನು ರಕ್ಷಣೆ ಮಾಡುತ್ತಿದ್ದಾರೆ. ನೀರಾವರಿ ಇಲಾಖೆಗೆ ಸಂಬಂಧಿಸಿದ ದಾಳಿ ಎಂದರೆ ಕಳೆದೊಂದು ವರ್ಷದಿಂದ ಏನೇನಾಗಿದೆ ಎಂಬ ಮಾಹಿತಿ ಇರುತ್ತದೆ. ಯಾರೆಲ್ಲಾ ಇದರಲ್ಲಿ ಭಾಗಿಯಾಗಿದ್ದಾರೆ ಎಂಬ ಮಾಹಿತಿಯೂ ಇದೆ. ತೆರಿಗೆ ಇಲಾಖೆ ದಾಳಿ ನಂತರ ಕೇವಲ ಮುಖ್ಯಮಂತ್ರಿಗಳು ಮಾತ್ರ ದೆಹಲಿಗೆ ಹೋಗಿಲ್ಲ. ಅವರ ಜತೆ ಮಾಜಿ ನೀರಾವರಿ ಮಂತ್ರಿಗಳೂ ಹೋಗಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಕೇಸರಿಕರಣಕ್ಕಾಗಿ ಎನ್ ಇಪಿ ಜಾರಿಮಾಡಿದ್ದಾರೆ;ರಮೇಶ್ ಆಪ್ತರು ನನ್ನ ಭೇಟಿ ಮಾಡಿದ್ದು ನಿಜ: ಡಿ ಕೆ ಶಿವಕುಮಾರ್‌

Sat Oct 9 , 2021
ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಮೂಲಕ ಕೇಸರಿಕರಣ ಮಾಡಲಾಗುತ್ತಿದೆ ಎಂಬ ವಿಚಾರವಾಗಿ ನಾನು ಪ್ರತಿಕ್ರಿಯೆ ನೀಡಿದ್ದೇನೆ. ಬೇರೆ ರಾಜ್ಯಗಳಲ್ಲಿ ಜಾರಿಯಾಗದ ಶಿಕ್ಷಣ ನೀತಿ ನಮ್ಮ ರಾಜ್ಯದಲ್ಲಿ ಮಾತ್ರ ತರಾತುರಿಯಲ್ಲಿ ಜಾರಿ ಮಾಡುತ್ತಿರುವುದೇಕೆ? ಈ ವಿಚಾರವಾಗಿ ಪೋಷಕರು, ಮಕ್ಕಳು, ಶಿಕ್ಷಣ ತಜ್ಞರ ಜತೆ ಚರ್ಚೆ ಮಾಡಬೇಕು. ಇಡೀ ಶಿಕ್ಷಣ ವ್ಯವಸ್ಥೆಯನ್ನೇ ಏಕಕಾಲಕ್ಕೆ ಬದಲಿಸುತ್ತೇನೆ, ನಿಮ್ಮ ಪದವಿಗೆ ಪ್ರಾಮುಖ್ಯತೆ ಇಲ್ಲ, ಒಂದು ವರ್ಷ ಪದವಿ ಓದಿದರೂ ಪ್ರಮಾಣಪತ್ರ ಕೊಡುತ್ತೇವೆ ಎನ್ನುವುದಾದರೆ ಇವರು ಯಾವ […]

Advertisement

Wordpress Social Share Plugin powered by Ultimatelysocial