ಭಾರತದಲ್ಲಿ ಒಂದೇ ದಿನ 7 ಸಾವಿರಕ್ಕೂ ಹೆಚ್ಚು ಕೊರೋನಾ ಪ್ರಕರಣಗಳು ದೃಡಪಟ್ಟಿವೆ. ನಿನ್ನೆ ಒಂದೇ ದಿನ ದೇಶದಲ್ಲಿ 7,964 ಪ್ರಕರಣಗಳು ಕಂಡುಬಂದಿವೆ. ಇದರಿಂದ ಭಾರತದ ಕೊರೋನಾ ವೈರಸ್ ಪೀಡಿತರ ಸಂಖ್ಯೆ 1,73,763ಕ್ಕೆ ಏರಿಕೆಯಾಗಿದೆ.ನಿನ್ನೆ ಕೊರೊನಾದಿಂದ 265 ಜನ ಮೃತಪಟ್ಟಿದ್ದಾರೆ. ದೇಶದಲ್ಲಿ ಕೊರೊನಾದಿಂದ ಸತ್ತವರ ಸಂಖ್ಯೆ 4,971ಕ್ಕೆ ಏರಿಕೆಯಾಗಿದೆ. 82,370 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರೆ. ಎಂದು ಕೇಂದ್ರ ಆರೋಗ್ಯ ಇಲಾಖೆಯ ಹೆಲ್ತ್ ಬುಲೆಟಿನ್ ಮಾಹಿತಿ ನೀಡಿದೆ.ಲಾಕ್ ಡೌನ್ ಸಡಿಲಿಕೆಗೊಳಿಸಿರುವುದರಿಂದ ಕೊರೋನಾ ವೈರಸ್ ದಿನದಿಂದ ದಿನಕ್ಕೆ ಕೋವಿಡ್ 19ಗೆ ಜನ ಬಲಿಯಾಗುತ್ತಿದ್ದಾರೆ.